ಭಾರತ ತಲುಪಿದ ಹಮೀದ್ ಅನ್ಸಾರಿ
Team Udayavani, Dec 19, 2018, 10:21 AM IST
ಹೊಸದಿಲ್ಲಿ: ಸ್ನೇಹಿತೆಯನ್ನು ಭೇಟಿಯಾಗಲು ತೆರಳಿದ್ದಾಗ ಪಾಕಿಸ್ಥಾನದಲ್ಲಿ ಬಂಧನಕ್ಕೊಳಗಾಗಿದ್ದ ಭಾರತೀಯ ಎಂಜಿನಿಯರ್ ಹಮೀದ್ ಅನ್ಸಾರಿ ಬಿಡುಗಡೆಗೊಂಡು ಮಂಗಳವಾರ ಭಾರತಕ್ಕೆ ವಾಪಸಾಗಿದ್ದಾರೆ. ಈತನನ್ನು ಕುಟುಂಬದವರು ಭಾವುಕವಾಗಿ ಸ್ವಾಗತಿಸಿದ್ದಾರೆ. ಪೇಶಾವರದ ಜೈಲಿನಿಂದ ಅನ್ಸಾರಿಯವರನ್ನು ಬಿಡುಗಡೆ ಮಾಡಲಾಗಿದೆ. ಅತ್ತಾರಿ -ವಾಘಾ ಗಡಿಯಲ್ಲಿ ಅನ್ಸಾರಿ ಆಗಮಿಸುತ್ತಿದ್ದಂತೆ ಅವರ ಕುಟುಂಬ ಸದಸ್ಯರು ಅಪ್ಪಿ ಸ್ವಾಗತಿಸಿದ್ದಾರೆ. ಗಡಿಯಲ್ಲಿ ಅವರ ತಾಯಿ ಫೌಜಿಯಾ, ತಂದೆ ನಿಹಾಲ್ ಅನ್ಸಾರಿ ಸೇರಿದಂತೆ ಕುಟುಂಬ ಸದಸ್ಯರು ಭೇಟಿಯಾದರು.
2012ರಲ್ಲಿ ಸ್ನೇಹಿತೆಯನ್ನು ಭೇಟಿಯಾಗಲು ಆಫ್ಘಾನಿಸ್ತಾನ ಮೂಲಕ ಪಾಕಿಸ್ತಾನ ಪ್ರವೇಶಿಸಿದ್ದ ಮುಂಬೈ ನಿವಾಸಿ ಅನ್ಸಾರಿಯನ್ನು ಭಾರತದ ಗುಪ್ತಚರ ಇಲಾಖೆ ಸಿಬ್ಬಂದಿ ಎಂಬ ಗುಮಾನಿ ಮೇಲೆ ಪಾಕ್ ಸೆರೆಹಿಡಿದಿತ್ತು. 3 ವರ್ಷಗಳ ಅಧಿಕೃತ ಜೈಲು ಶಿಕ್ಷೆ ಸೇರಿ ಒಟ್ಟು 6 ವರ್ಷಗಳ ಕಾಲ ಅವರನ್ನು ಒತ್ತೆ ಇರಿಸಿಕೊಂಡಿತ್ತು. ಕಳೆದ ಡಿ.15ರಂದು ಬಿಡುಗಡೆ ಮಾಡಿತ್ತು. ಆದರೂ ಅವರ ದಾಖಲೆ ಪತ್ರಗಳು ಸಮರ್ಪಕವಾಗಿರಲಿಲ್ಲ ಎಂದು ಇಸ್ಲಾಮಾಬಾದ್‌ನಲ್ಲಿ ಅವರನ್ನು ಇರಿಸಲಾಗಿತ್ತು. ಕಡೆಗೂ ಮಂಗಳವಾರ ಅವರನ್ನು ಭಾರತಕ್ಕೆ ಕಳಿಸಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.