ಪಾಲ್ತಾಡಿ: ಕಿಂಡಿ ಅಣೆಕಟ್ಟಿಗೆ ಕೃಷಿಕರಿಂದಲೇ ಹಲಗೆ ಅಳವಡಿಕೆ


Team Udayavani, Dec 19, 2018, 11:19 AM IST

19-december-4.gif

ಸವಣೂರು : ಜಲಸಂರಕ್ಷಣೆಯೊಂದಿಗೆ ಕೃಷಿಗೂ ಪೂರಕವಾಗುವಂತೆ ಹೊಳೆ ನೀರಿಗೆ ರೈತರೇ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಿದ ಸನ್ನಿವೇಶ ಪಾಲ್ತಾಡಿ ಗ್ರಾಮದಲ್ಲಿ ಕಂಡುಬಂದಿದೆ. ಹಲಗೆ ಹಾಕಿರುವ ಕಾರಣ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಪಾಲ್ತಾಡಿ ಗ್ರಾಮದ ನಾಡೋಳಿ, ಜಾಣಮೂಲೆಯಲ್ಲಿ ಹೊಳೆಯಲ್ಲಿನ ಅಣೆಕಟ್ಟಿಗೆ ಹಲಗೆ ಹಾಕಲಾಗಿದೆ. ಪ್ರಸ್ತುತ ಬೋರ್‌ವೆಲ್‌ 700 ಅಡಿ ಕೊರೆದರೂ ನೀರು ಸಿಗದ ಈ ಕಾಲದಲ್ಲಿ ಕಿಂಡಿ ಅಣೆಕಟ್ಟಿನ ಮೂಲಕ ನೀರಿಂಗಿಸುವ ಕಾರ್ಯವನ್ನು ರೈತರೇ ಮಾಡಿರುವುದು ಶ್ಲಾಘನೀಯ. ಈ ಕಿಂಡಿ ಅಣೆಕಟ್ಟನ್ನು ಜಲಸಂಪನ್ಮೂಲ ಇಲಾಖೆ ನಿರ್ಮಿಸಿದೆ. ಆದರೆ ಹಲಗೆಯನ್ನು ಅಳವಡಿಸಿರಲಿಲ್ಲ. 

ಬರದಿಂದ ಕೃಷಿಯ ರಕ್ಷಣೆ
ಪಾಲ್ತಾಡಿ ಗ್ರಾಮದ ಮಂಜುನಾಥನಗರದ ನಾಡೋಳಿಯಲ್ಲಿ ಹರಿಯುವ ಗೌರಿ ಹೊಳೆಗೆ ನಿರ್ಮಿಸಿರುವ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸುವ ಮೂಲಕ ಸುತ್ತಲಿನ 30ಕ್ಕೂ ಹೆಚ್ಚು ಕೃಷಿಕರ ತೋಟಗಳಿಗೆ ಯಥೇಚ್ಛ  ನೀರು ಸಿಗುತ್ತಲಿದೆ. ಅಡಿಕೆ ಕೃಷಿಕರೇ ಇಲ್ಲಿ ಹೆಚ್ಚಿದ್ದಾರೆ. ಬರದಿಂದ ಕೃಷಿಯ ರಕ್ಷಣೆಯಾದಂತಾಗಿದೆ. ಬಿರುಬೇಸಗೆಯಲ್ಲೂ ತೋಟ ಒಣಗುವ ಸಮಸ್ಯೆ ಇಲ್ಲಿ ದೂರವಾದಂತಾಗಿದೆ. 

ಕೃಷಿಕರಿಂದಲೇ ನಿರ್ವಹಣೆ
ರಮೇಶ್‌ ರಾವ್‌ ಹಾಗೂ ಸತೀಶ್‌ ಬಂಬಿಲದೋಳ ನೇತೃತ್ವದಲ್ಲಿ ಕೃಷಿಕರೇ ಹಲಗೆ ಅಳವಡಿಸಿದ್ದಾರೆ. ರೋಹಿತ್‌ ರೈ, ಸಂಜೀವ ರೈ ಕುಂಜಾಡಿ, ಬೆಳಿಯಪ್ಪ ಗೌಡ, ಹನೀಫ್‌, ರಝಾಕ್‌, ಸೋಮಪ್ಪ ಗೌಡ ಜಾಣಮೂಲೆ, ಚಂದ್ರಶೇಖರ ಗೌಡ ಜಾಣಮೂಲೆ, ಜಿನ್ನಪ್ಪ ಪೂಜಾರಿ ಅವರು ಆರ್ಥಿಕ ಸಹಕಾರ ನೀಡಿದ್ದಾರೆ. ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆಗೆ ಸುಮಾರು 16 ಸಾವಿರದಿಂದ 20 ಸಾವಿರ ರೂ. ವ್ಯಯಿಸಲಾಗಿದೆ. ಕೃಷಿಕರೇ ಕಿಂಡಿ ಅಣೆಕಟ್ಟಗಳ ನಿರ್ವಹಣೆಯನ್ನು ಮಾಡುತ್ತಲಿದ್ದಾರೆ.

ಅಂತರ್ಜಲ ಮಟ್ಟ ಹೆಚ್ಚಳ
ಹಲಗೆ ಹಾಕಿರುವ ಕಾರಣ ಅಣೆಕಟ್ಟಿನಲ್ಲಿ ಎಪ್ರಿಲ್‌, ಮೇ ವರೆಗೂ ನೀರು ಶೇಖರಣೆಗೊಳ್ಳುತ್ತದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗುತ್ತದೆ. ಸುತ್ತಮುತ್ತಲಿನ ಕೆರೆ, ಬಾವಿಗಳಲ್ಲೂ ನೀರಿನ ಮಟ್ಟ ಏರಿಕೆ ಕಂಡುಬಂದಿದೆ. ಅಣೆಕಟ್ಟಿನಲ್ಲಿ 2 ಕಿ.ಮೀ. ಗೂ ಹೆಚ್ಚು ಉದ್ದದಲ್ಲಿ 40 ಅಡಿ ಅಗಲವಾಗಿ 9 ಅಡಿ ನೀರು ಶೇಖರಣೆಯಾಗಿದೆ. ಸುಮಾರು 10 ಅಡಿ ನೀರು ನಿಲ್ಲುವ ಸಾಮರ್ಥ್ಯ ಇಲ್ಲಿದೆ. ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ. ರಮೇಶ್‌ ಅವರ ವಿಶೇಷ ಮುತುವರ್ಜಿಯಿಂದ 10 ವರ್ಷಗಳ ಹಿಂದೆ ಜಲಸಂಪನ್ಮೂಲ ಇಲಾಖೆಯಿಂದ 25 ಲಕ್ಷ ರೂ. ವೆಚ್ಚದಲ್ಲಿ ಇಲ್ಲಿ ಅಣೆಕಟ್ಟು ನಿರ್ಮಾಣಗೊಂಡಿತ್ತು.

ಇಲಾಖೆ ಗಮನಹರಿಸಬೇಕು
ಅಣೆಕಟ್ಟಿನ ಬದಿಯಲ್ಲಿನ ಕಾಂಕ್ರೀಟ್‌ ಕಿತ್ತು ಹೋಗಿ ನೀರು ಸೋರಿಕೆಯಾಗುತ್ತಿತ್ತು. ಇದರ ದುರಸ್ತಿ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ನಡೆಸಬೇಕಿದೆ. ಜಲ ಸಂರಕ್ಷಣೆಯಲ್ಲಿ ಬಂಟ್ವಾಳದ ಇಡ್ಕಿದು ಗ್ರಾಮದ ಅನಂತರದ ಸ್ಥಾನವನ್ನು ಪುತ್ತೂರಿನ ಪಾಲ್ತಾಡಿ ಗ್ರಾಮ ಪಡೆದುಕೊಂಡಿದೆ. ಈ ಗ್ರಾಮದಲ್ಲಿ ಹಲವೆಡೆ ಸಣ್ಣ ಸಣ್ಣ ತೊರೆಗಳಿಗೂ ಮಣ್ಣು ಹಾಗೂ ಅಡಿಕೆ ಮರದ ಹಲಗೆಯನ್ನು ಹಾಕಿ ರೈತರೇ ತಾತ್ಕಾಲಿಕ ಕಟ್ಟಗಳನ್ನು ರಚಿಸಿದ್ದಾರೆ. 

ಜಲಕ್ಷಾಮಕ್ಕೆ ತಡೆ
ಮುಂದೆ ತಲೆದೋರಬಹುದಾದ ಜಲಕ್ಷಾಮವನ್ನು ಕಿಂಡಿ ಅಣೆಕಟ್ಟುಗಳಿಂದ ತಡೆಯಬಹುದು. ಕೃಷಿಕರು ಈಗ ಪಂಪುಗಳಿಗೆ ಆಟೋಸ್ಟಾರ್ಟರ್‌ ಅಳವಡಿಸಿಕೊಂಡಿರುವುದರಿಂದ ಅಗತ್ಯಕ್ಕಿಂತ ಹೆಚ್ಚು ನೀರು ವ್ಯಯವಾಗುತ್ತಿದೆ. ಇದನ್ನು ತಡೆಹಿಡಿಯಬೇಕಾಗಿದೆ. ಹೊಳೆಗಳಲ್ಲಿ ಪ್ರತೀ 2 ಕಿ.ಮೀ. ಗೆ ಒಂದರಂತೆ ಕಿಂಡಿ ಅಣೆಕಟ್ಟು ನಿರ್ಮಿಸುವುದು ಅವಶ್ಯ.
-ಬಿ.ಕೆ. ರಮೇಶ್‌, ನಿರ್ದೇಶಕರು
ಐ.ಸಿ.ಎ.ಆರ್‌., ಹೊಸದಿಲ್ಲಿ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.