‘ಯಕ್ಷಗಾನದ ಅಭಿರುಚಿ ಬೆಳೆಸುವುದು ಅಗತ್ಯ’
Team Udayavani, Dec 19, 2018, 3:02 PM IST
ಬಂಟ್ವಾಳ : ಕರಾವಳಿಯ ಸಾಂಪ್ರದಾಯಿಕ ಯಕ್ಷಗಾನ ಕಲೆ ಉಳಿಯಬೇಕಾದರೆ ವಿದ್ಯಾರ್ಥಿಗಳಲ್ಲಿ ಯಕ್ಷಗಾನ ಕಲೆಯ ಅಭಿರುಚಿಯನ್ನು ಬೆಳೆಸಬೇಕು. ಸಾರ್ವಜನಿಕರು ತನು- ಮನದಿಂದ ಪ್ರೋತ್ಸಾಹ ನೀಡುವ ಮೂಲಕ ಯಕ್ಷಗಾನ ಬಯಲಾಟವಾಗಿ ವಿಜೃಂಭಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದರು. ಅವರು ಮೆಲ್ಕಾರ್‌ನಲ್ಲಿ ಹೆದ್ದಾರಿ ಸನಿಹ ಎಡನೀರು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಮಿತಿ ಬಿ.ಸಿ. ರೋಡ್ ಆಶ್ರಯದಲ್ಲಿ ಕಾಸರಗೋಡು ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಮಂಡಳಿಯಿಂದ ಏರ್ಪಡಿಸಲಾದ ಯಕ್ಷಗಾನ ಸಪ್ತಾಹ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು.
ಬಿ.ಸಿ. ರೋಡ್‌ನ ಅನ್ನಪೂರ್ಣೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಎಂ. ಈಶ್ವರ ಭಟ್ ಮುಖ್ಯ ಅತಿಥಿಯಾಗಿ ಮಾತನಾಡಿ, ಪೌರಾಣಿಕ ಕಥೆಗಳನ್ನು ಹಾಗೂ ಧರ್ಮದ ಮೌಲ್ಯಗಳನ್ನು ತಿಳಿಯಲು ಯಕ್ಷಗಾನ ಕಲೆ ಸಹಕಾರಿಯಾಗಿದೆ. ಕಾಲಮಿತಿ ಯಕ್ಷಗಾನ ಬಂದಿರುವುದರಿಂದ ಪ್ರೇಕ್ಷಕರಿಗೆ ಅನುಕೂಲವಾಗಿದೆ ಎಂದರು.
ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಮಾತನಾಡಿ, ಕಲೆ ಮನೋರಂಜನೆಯೊಂದಿಗೆ ಸಾಮಾಜಿಕ ಮೌಲ್ಯಗಳನ್ನು ತಿಳಿಸುತ್ತದೆ. ಜನಸಾಮಾನ್ಯರು ಇರುವಲ್ಲಿಗೆ ಇಂತಹ ಯಕ್ಷಗಾನ ಕಾರ್ಯಕ್ರಮ ಹೋಗಿ ಪ್ರದರ್ಶನ ಆಗುತ್ತಿರುವುದು ಉತ್ತಮ ಯೋಜನೆ. ಕಳೆದು ಎಂಟು ವರ್ಷಗಳಿಂದ ಯಕ್ಷಗಾನ ಸಪ್ತಾಹವನ್ನು ಮೆಲ್ಕಾರ್‌ನಲ್ಲಿ ಮಾಡುತ್ತಿರುವ ಸಮಿತಿಯ ಸಾಧನೆ ಅಭಿನಂದನೀಯ ಎಂದು ತಿಳಿಸಿದರು.
ಯಕ್ಷಗಾನ ಸಪ್ತಾಹ ಸಮಿತಿ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಪ್ರಸ್ತಾವನೆಗೈದು, ಸಹಕರಿಸಿದ ಸಂಘ-ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದರು. ಉಪಾಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಕೃಷ್ಣ ಶರ್ಮ ವಂದಿಸಿದರು. ಕಲಾವಿದ ಮಂಜು ವಿಟ್ಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.