ಮಹಾರಾಷ್ಟ್ರ : 155 ಸ್ಥಾನ ಬಿಟ್ಟುಕೊಡಲು ಬಿಜೆಪಿಗೆ ಶಿವ ಸೇನೆ ಆಗ್ರಹ
Team Udayavani, Dec 19, 2018, 7:39 PM IST
ಹೊಸದಿಲ್ಲಿ : ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನ ಸಭಾ ಚುನಾವಣೆಗಳನ್ನು ಸೋತಿರುವ ಬಿಜೆಪಿ, ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಯ ಸಂದರ್ಭದಲ್ಲಿ ಒಟ್ಟು 288 ಸ್ಥಾನಗಳ ಪೈಕಿ ತನಗೆ 155 ಸ್ಥಾನಗಳನ್ನು ಬಿಟ್ಟುಕೊಡಬೇಕೆಂದು ಅದರ ಮಿತ್ರ ಪಕ್ಷವಾಗಿರುವ, ಉದ್ಧವ್ ಠಾಕ್ರೆ ನೇತೃತ್ವದ ಶಿವ ಸೇನೆ ಪಟ್ಟು ಹಿಡಿದಿದೆ.
2019ರ ನವೆಂಬರ್ ನಲ್ಲಿ ಹಾಲಿ ಮಹಾರಾಷ್ಟ್ರ ವಿಧಾನ ಸಭೆಯ ಕಾರ್ಯಾವಧಿ ಮುಗಿಯಲಿದ್ದು ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯೊಂದಿಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಕೂಡ ನಡೆಸುವಂತೆ ಶಿವ ಸೇನೆ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.
ಶಿವ ಸೇನೆಗೆ 138 ಸ್ಥಾನಗಳನ್ನು ಬಿಟ್ಟುಕೊಡಲು ಬಿಜೆಪಿ ಸಿದ್ಧವಿದೆ. ಆದರೆ ತನಗೆ 155 ಸ್ಥಾನಗಳು ಬೇಕೇ ಬೇಕು ಎಂದು ಶಿವ ಸೇನೆ ಹಠ ಹಿಡಿದಿದೆ.
ಹಾಲಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿಯ 121 ಮತ್ತು ಶಿವ ಸೇನೆಯ 63 ಶಾಸಕರಿದ್ದು ಈ ಮಿತ್ರ ಪಕ್ಷಗಳ ಸಂಖ್ಯಾಬಲ 184 ಇದೆ. 288 ಸದಸ್ಯ ಬಲದ ಸದನದಲ್ಲಿ ಸರಕಾರ ನಡೆಸಲು 145 ಶಾಸಕರ ಬಲ ಅಗತ್ಯವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.