ಬಾಡಿಗೆ ತಾಯ್ತನ ನಿಯಂತ್ರಣ ವಿಧೇಯಕಕ್ಕೆ ಸಂಸತ್ ಒಪ್ಪಿಗೆ
Team Udayavani, Dec 20, 2018, 6:00 AM IST
ನವದೆಹಲಿ: ದೇಶದಲ್ಲಿ ವಾಣಿಜ್ಯ ರೂಪದ ಬಾಡಿಗೆ ತಾಯ್ತನ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಜಾರಿಗೆ ತರಲು ಬಾಡಿಗೆ ತಾಯ್ತನ (ನಿಯಂತ್ರಣ) ವಿಧೇಯಕಕ್ಕೆ ಬುಧವಾರ ಲೋಕಸಭೆ ಅನುಮೋದನೆ ನೀಡಿದೆ.
ಪ್ರತಿಪಕ್ಷಗಳು ವಿವಿಧ ವಿಚಾರಕ್ಕೆ ಗದ್ದಲ ಎಬ್ಬಿಸುತ್ತಿದ್ದರೂ ಗಲಾಟೆಯ ನಡುವೆ ಒಂದು ಗಂಟೆ ಕಾಲ ಚರ್ಚೆ ನಡೆದು ಅಂಗಿ àಕೃತಗೊಂಡಿದೆ. ಹೊಸ ವಿಧೇಯಕದ ಪ್ರಕಾರ ಸಮೀಪ ಸಂಬಂಧಿಗಳು ಮಾತ್ರ ಬಾಡಿಗೆ ತಾಯ್ತನವನ್ನು ಹೊಂದಬಹುದು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಇದೊಂದು ಐತಿಹಾಸಿಕ ಕಾಯ್ದೆ ಎಂದು ಬಣ್ಣಿಸಿದ್ದಾರೆ.
ಹೊಸ ವಿಧೇಯಕದ ಪ್ರಕಾರ ಮಕ್ಕಳಿಲ್ಲದ ದಂಪತಿ, ಕಾನೂನು ಬದ್ಧವಾಗಿ ವಿವಾಹವಾಗಿ ಐದು ವರ್ಷ ಕಳೆದ ದಂಪತಿ ನಿಕಟ ಬಂಧುವಿನ ಮೂಲಕ ಬಾಡಿಗೆ ತಾಯ್ತನ ಮಾರ್ಗದ ಮೂಲಕ ಮಗು ಹೊಂದಲು ಅವಕಾಶ ಕಲ್ಪಿಸಲಾಗಿದೆ. ಮಹಿಳೆ ಅಥವಾ ಪುರುಷ, ಸಲಿಂಗ ಸಂಬಂಧ ಹೊಂದಿರು ವವರು, ಸಹ ವಾಸಿಗಳು (ಲಿವ್ ಇನ್ ರಿಲೇ ಶನ್ಶಿಪ್) ಬಾಡಿಗೆ ತಾಯ್ತನ ಹೊಂದಲು ಅರ್ಹರಾಗಿರುವುದಿಲ್ಲ.
ನಡೆಯದ ಕಲಾಪ: ಈ ನಡುವೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ರಿತಿಯಲ್ಲಿ ಕಲಾಪ ನಡೆಸಲು ಬುಧವಾರ ಸಾಧ್ಯವಾಗಲೇ ಇಲ್ಲ. ಹೀಗಾಗಿ, 2 ಸದನಗಳ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ಡಿ.24 ರಿಂದ ಡಿ.26 ರವರೆಗೆ ಕ್ರಿಸ್ಮಸ್ ಪ್ರಯುಕ್ತ ರಾಜ್ಯಸಭೆಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.