ಹಾಸ್ಟೆಲ್ ವ್ಯವಸ್ಥೆ ನೋಡಿ ಸಿಇಒ ಸಿಡಿಮಿಡಿ
Team Udayavani, Dec 20, 2018, 12:18 PM IST
ಭಾಲ್ಕಿ: ಪಟ್ಟಣದ ಉಪನ್ಯಾಸಕರ ಬಡಾವಣೆಯಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮಹಾಂತೇಶ ಬೀಳಗಿ ದೀಢಿರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿ ಸಿಡಿಮಿಡಿಗೊಂಡರು. ವಸತಿ ನಿಲಯದಲ್ಲಿ ಪದವಿ ವ್ಯಾಸಂಗಕ್ಕಾಗಿ ವಾಸವಾಗಿದ್ದ ವಿದ್ಯಾರ್ಥಿನಿಯರನ್ನು ಭೇಟಿಯಾದ ಸಿಇಒ, ಊಟದ ಗುಣಮಟ್ಟ, ನೀರಿನ ವ್ಯವಸ್ಥೆ, ಸ್ವತ್ಛತೆ ಕುರಿತು ವಿಚಾರಿಸಿದರು. ಇಲ್ಲಿ ಊಟ, ನೀರಿನ ವ್ಯವಸ್ಥೆ ಚೆನ್ನಾಗಿದೆ. ಆದರೆ 51 ವಿದ್ಯಾರ್ಥಿನಿಯರಿಗೆ ಎರಡೇ ಶೌಚಾಲಯಗಳು ಲಭ್ಯವಿದೆ. ಆದ್ದರಿಂದ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಖಾಸಗಿ ಬಾಡಿಗೆ ಕಟ್ಟಡದ ವಸತಿ ನಿಲಯಗಳಲ್ಲಿ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತವೆ.
ಕಾರಣ ಸರ್ಕಾರ, ಇಲಾಖೆಯಿಂದಲೇ ವಸತಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಿಸಿ ಎಲ್ಲ ಸೌಲಭ್ಯ ಒದಗಿಸಿದರೆ ಉತ್ತಮವಾಗುತ್ತದೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡರು. ಹಾಸ್ಟೆಲ್ ಕಟ್ಟಡದ ಸುತ್ತಮುತ್ತ ಹುಲ್ಲುಕಂಟಿ ಬೆಳೆದು ಹೊಲಸು ನಾರುತ್ತಿದೆ. ವಸತಿ ನಿಲಯದ ವಾತಾವರಣ ಸ್ವತ್ಛತೆಯಿಂದ ಕೂಡಿರಬೇಕು. ಶೌಚಾಲಯ ವ್ಯವಸ್ಥೆ ಸರಿಪಡಿಸಲು ಸ್ಥಳದಲ್ಲಿದ್ದ ಬಿಸಿಎಂ ವಿಸ್ತೀರ್ಣಾಧಿಕಾರಿ ನಾಗವೇಣಿ ಅವರಿಗೆ ಸಿಇಒ ತಾಕೀತು ಮಾಡಿದರು. ತಾಪಂ ಕಾರ್ಯನಿರ್ವಣಾಧಿಕಾರಿ ಸೂರ್ಯಕಾಂತ ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.