ಬರ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ


Team Udayavani, Dec 20, 2018, 12:32 PM IST

bid-2.jpg

ಔರಾದ: ಬರ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ದವಾಗಿದೆ. ತಾಲೂಕಿನ ರೈತರು ಹಾಗೂ ಕೂಲಿ ಕಾರ್ಮಿಕರು ನೆಮ್ಮದಿಯಿಂದ ಜೀವನ ಸಾಗಿಸಿ ಎಂದು ಜಿಲ್ಲಾಧಿಕಾರಿ ಎಚ್‌. ಆರ್‌. ಮಹಾದೇವ ಕರೆ ನೀಡಿದರು.
ಪಟ್ಟಣದ ಅಮರೇಶ್ವರ ಕಾಲೇಜು ಸಭಾಂಗಣದಲ್ಲಿ ಬರ ಪರಿಸ್ಥಿತಿ ನಿಮಿತ್ತ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತಾಡಿದರು.

ಬೀದರ ಜಿಲ್ಲೆಯಲ್ಲಿ ಔರಾದ ತಾಲೂಕಿನಲ್ಲಿ ಅತಿ ಹೆಚ್ಚು ಬರದ ಸಮಸ್ಯೆ ಕಾಡುತ್ತಿದೆ. ಪ್ರತಿಯೊಂದು ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಾರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಲು ಮುಂದಾಗಬೇಕು.ಜಿಲ್ಲಾಡಳಿತ ನೀರು ಹಾಗೂ ಜಾನುವಾರುಗಳಿಗೆ ಮೇವು ವಿತರಣೆ ಮಾಡಲು ಸಿದ್ಧವಾಗಿದೆ ಎಂದು ಹೇಳಿದರು.
 
ಜಿಪಂ ಸಿಇಒ ಮಹಾಂತೇಶ ಬಿಳಗಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ದುಡಿಯಲು ಕೆಲಸವಿಲ್ಲ ಎನ್ನುವ ಭಾವನೆ ಮೂಡದಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೆಲಸ ಮಾಡಲು
ಮುಂದಾಗಬೇಕು. ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಪಟ್ಟಣ ಹಾಗೂ ನಗರ ಪ್ರದೇಶಕ್ಕೆ ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನೀಡಬೇಕು. ಅಲ್ಲದೆ ರೈತರ ಹೋಲ ಗದ್ದೆಗಳಲ್ಲಿಯೂ ಸ್ವ ಇಚ್ಛೆಯಿಂದ ಕೆಲಸ ಮಾಡಲು ಆಸಕ್ತಿಯಿಂದ ರೈತರು ಮುಂದೆ ಬಂದ ತಕಣವೇ ಗ್ರಾಪಂ ಅಧಿಕಾರಿಗಳು ಕೆಲಸ ನೀಡಬೇಕು ಎಂದು ಹೇಳಿದರು.

ಕಮಲನಗರ, ಕಂದಗೋಳ, ಮಮದಾಪುರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಪಂಚಾಯತ ಅಭಿವೃದ್ಧಿ
ಅಧಿಕಾರಿಗಳು ಇಂಥ ಸಮಸ್ಯೆ ಬಾರದಂತೆ ಕೆಲಸ ಮಾಡಬೇಕು. ಗ್ರಾಪಂನಿಂದ ನೀರು ಸರಬರಾಜು ಮಾಡುವ ಕೊಳವೆ ಬಾವಿ ತೆರೆದ ಬಾವಿಗಳು ಬತ್ತಿ ಹೋಗಿದ್ದರೆ ಖಾಸಗಿ ವ್ಯಕ್ತಿಗಳ ಹೊಲದಲ್ಲಿ ನೀರು ಇರುವ ಕೊಳವೆ ಬಾವಿ ವಶಕ್ಕೆ ಪಡೆದುಕೊಂಡು ಊರಿನ ಜನರಿಗೆ ನೀರು ಒದಗಿಸಿ ಎಂದು ಆದೇಶ ನೀಡಿದರು. ಪಶುಪಾಲನಾ ಇಲಾಖೆ ಅಧಿಕಾರಿ
ರವಿಕುಮಾರ ಭೂರೆ ಮಾತನಾಡಿ, ಮಾರ್ಚ್‌ 15ರ ನಂತರ ಮೇವಿನ ಸಮಸ್ಯೆ ಉಲ್ಬಣವಾಗುವ ಲಕ್ಷಣಗಳು ಕಂಡು ಬರುತ್ತಿದೆ. ಮೇವಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತಾಲೂಕಿನ ಪ್ರತಿಯೊಂದು ಹೋಬಳಿ ಕೇಂದ್ರದಲ್ಲಿ ಎರಡು ಮೇವು ವಿತರಣಾ ಕೇಂದ್ರ ತೆರೆಯಲಾಗುತ್ತದೆ. ರೈತರ ಹೊಲದಲ್ಲಿ ನೀರು ಮೇವಿನ ಬೆಳೆ ಬೆಳೆಸುವಂತೆ ಮನವರಿಕೆ
ಮಾಡಿ. ಸರ್ಕಾರದಿಂದಲೇ ಬೀಜ ನೀಡಿ ಮೇವು ದೊಡ್ಡದಾದ ನಂತರ ರೈತರಿಗೆ ಹಣ ನೀಡಿ ಖರೀದಿಸಲಾಗುತ್ತದೆ ಎಂದು ಅಧಿಕಾರಿಗಳಿಗೆ ಹೇಳಿದರು.

ಔರಾದ ತಾಲೂಕಿನ ಕೆಲ ತಾಂಡಾಗಳಲ್ಲಿ ಮಕ್ಕಳು ಮಧ್ಯಾಹ್ನ ಬಿಸಿ ಊಟ ಮಾಡಿದ ನಂತರ ಬೇರೆ ಕಡೆಯಿಂದ ತರುವ ಅನಿವಾರ್ಯತೆ ಶಾಲೆ ಶಿಕ್ಷಕರು ಹಾಗೂ ಅಡುಗೆ ಸಹಾಯಕರಿಗೆ ಎದುರಾಗಿದೆ. ಹೀಗಾಗಿ ಶಾಲೆಗೆ ಕೂಡಲೇ ನೀರು ಸರಬರಾಜು ಮಾಡಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಶಿಕ್ಷಕರೊಬ್ಬರು ಸಭೆಯಲ್ಲಿ ಗಮನ ಸೆಳೆದರು.

ಸಂಬಂಧಿಸಿದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಟ್ಯಾಂಕರ್‌ ಅಥವಾ ಗ್ರಾಮದಲ್ಲಿನ ಬೇರೆ ಕಡೆಯಿಂದ ಶಾಲೆಗೆ ನೀರಿನ ವ್ಯವಸ್ಥೆ ಮಾಡುವಂತೆ ಡಿಸಿ ತಾಕೀತು ಮಾಡಿದರು.

ಗ್ರಾಮ ಲೆಕ್ಕಾಧಿಕಾರಿಗಳು, ಆಶಾ ಕಾರ್ಯಕರ್ತರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲೆ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರು ತಮ್ಮ ಗ್ರಾಮದಲ್ಲಿ ಬರ ಪರಿಸ್ಥಿತಿ ಹೇಗೆ ನಿಬಾಹಿಸಬೇಕು ಎನ್ನುವ ಅಂಶಗಳ ಪಟ್ಟಿ ಸಿದ್ಧ ಮಾಡಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ಅದಲ್ಲದೆ ಗ್ರಾಮದಲ್ಲಿನ ರೈತರೊಂದಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಹೇಳಿದರು.
 
ತಹಶೀಲ್ದಾರ್‌ ಎಂ. ಚಂದ್ರಶೇಖರ, ತಾಪಂ ಇಒ ಜಗನಾಥ ಮೂರ್ತಿ, ಕೃಷಿ ಇಲಾಖೆ ವಿದ್ಯಾನಂದ ಸಿ., ತಾಲೂಕಿನ ಎಲ್ಲ ಗ್ರಾಮದ ಲೆಕ್ಕಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಶಾಲೆ ಮುಖ್ಯ ಶಿಕ್ಷಕರು
ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು .

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.