ದೇಶದ ಧಾರ್ಮಿಕ ಪರಂಪರೆ ಉಳಿಸಿ ಬೆಳೆಸಿ
Team Udayavani, Dec 21, 2018, 1:22 PM IST
ಹೊಸಕೋಟೆ: ಇಡೀ ವಿಶ್ವಕ್ಕೆ ಮಾದರಿ ಯಾಗಿರುವ ಭಾರತದ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸ ಬೇಕಾಗಿರುವುದು ರಾಷ್ಟ್ರದ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ಪಟ್ಟಣದ ಕೋಟೆ ಪ್ರದೇಶದ ಖೀಲ್ಲೆ ಆಂಜನೇಯಸ್ವಾಮಿ ದೇಗುಲದಲ್ಲಿ ಹನುಮ ಜಯಂತಿ ಪ್ರಯುಕ್ತ ಹಮ್ಮಿ ಕೊಂಡಿದ್ದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆಧ್ಯಾತ್ಮ ಹಾಗೂ ಭಕ್ತಿ ಜೀವನದ ಅವಿಭಾಜ್ಯ ಅಂಗಗಳಾಗಿದ್ದು, ಸ್ವಸ್ಥ ಸಮಾಜ ನಿರ್ಮಾಣಗೊಂಡು ಶಾಂತಿ, ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಿವೆ. ಇಂದು ಪಾಶ್ಚಾತ್ಯ ಸಂಸ್ಕೃತಿಯ ಅನುಕರಣೆ, ಜೀವನ ಶೈಲಿಯ ಬದಲಾವಣೆಯ ಕಾರಣಗಳಿಂದಾಗಿ ಯುವಕರು ಧಾರ್ಮಿಕ ಆಚರಣೆ, ಸಂಸ್ಕೃತಿಯ ಪಾಲನೆಯಿಂದ ವಿಮುಖ ರಾಗುತ್ತಿದ್ದು, ಅದನ್ನು ತಡೆಗಟ್ಟಲು ಪೋಷಕರು ಗಮನಹರಿಸಬೇಕೆಂದು ಹೇಳಿದರು.
ಕಾರ್ಮಿಕರ ಭವಿಷ್ಯ ನಿಧಿ ಮಂಡಳಿ ಸದಸ್ಯ ವಿ.ವಿಜಯಕುಮಾರ್ ಮಾತ ನಾಡಿ, ಐತಿಹಾಸಿಕ ಹಿನ್ನೆಲೆಯುಳ್ಳ ದೇವಾಲಯವನ್ನು 16 ವರ್ಷಗಳ ಹಿಂದೆ ಜೀರ್ಣೋದ್ಧಾರ ಮಾಡಿದ್ದು, ಪ್ರತಿ ಶನಿವಾರ ವಿಶೇಷ ಪೂಜೆ, ಅಲಂಕಾರ ಮಾಡಲಾಗುತ್ತಿದೆ. ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುತ್ತಿದೆ ಎಂದು ತಿಳಿಸಿದರು. ನಗರಸಭೆ ಸದಸ್ಯ ಮುನಿನಂಜಪ್ಪ, ಟೌನ್ ಬ್ಯಾಂಕ್ ನಿರ್ದೇಶಕ ಎಸ್.ಮಂಜುನಾಥ್, ಕೃಷಿ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಎಂ.ಸಿ.ವೆಂಕಟ ರಮಣಪ್ಪ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹನುಮ ಜಯಂತಿ ಪ್ರಯುಕ್ತ ಶ್ರೀ ಆಂಜನೇಯಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ಸಹಸ್ರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.