ಬಿಜೆಪಿ ರಥಯಾತ್ರೆಗೆ ಕೋಲ್ಕತಾ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ
Team Udayavani, Dec 21, 2018, 5:16 PM IST
ನವದೆಹಲಿ:ಪಶ್ಚಿಮಬಂಗಾಳದಲ್ಲಿ ಡಿಸೆಂಬರ್ 22,24 ಮತ್ತು 26ರಂದು ಬಿಜೆಪಿ ನಡೆಸಲು ಉದ್ದೇಶಿಸಿರುವ ಪ್ರಜಾತಂತ್ರ ಉಳಿಸಿ ರಥಯಾತ್ರೆಗೆ ಕೋಲ್ಕತಾ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿರುವ ಅನುಮತಿಗೆ ಶುಕ್ರವಾರ ಕೋಲ್ಕತಾ ಹೈಕೋರ್ಟ್ ನ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.
ಬಿಜೆಪಿ ನಡೆಸಲು ಉದ್ದೇಶಿಸಿರುವ ಪ್ರಜಾತಂತ್ರ ಉಳಿಸಿ ರಥಯಾತ್ರೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಗುರುವಾರ ಪಶ್ಚಿಮಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೋಲ್ಕತಾ ಏಕಸದಸ್ಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ, ರಥಯಾತ್ರೆಗೆ ಅನುಮತಿ ನೀಡಿತ್ತು.
ರಥಯಾತ್ರೆಗೆ ತಡೆ ನೀಡಬೇಕೆಂದು ಕೋರಿ ಇಂದು ಕಾಂಗ್ರೆಸ್ ಕೋಲ್ಕತಾ ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ದೇಬಸೀಶ್ ಹಾಗೂ ಜಸ್ಟೀಸ್ ಶಾಂಪಾ ಸಾರ್ಕಾ ಅವರು ವಿಚಾರಣೆ ನಡೆಸಿ, ತಡೆಯಾಜ್ಞೆ ನೀಡಿದ್ದಾರೆ. ಅಲ್ಲದೇ ರಥಯಾತ್ರೆಗೆ ಸಂಬಂಧಿಸಿದಂತೆ ತೀರ್ಪು ನೀಡುವ ಮೊದಲು ಎಲ್ಲಾ ಗುಪ್ತಚರ ಇಲಾಖೆಯ ವರದಿಯನ್ನು ಪರಿಶೀಲಿಸುವಂತೆ ಸೂಚಿಸಿ ಅರ್ಜಿಯನ್ನು ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದೆ ಎಂದು ವರದಿ ತಿಳಿಸಿದೆ.
ಬಿಜೆಪಿ ನಡೆಸಲು ಉದ್ದೇಶಿಸಿರುವ ರಥ ಯಾತ್ರೆಗೆ ಏಕಸದಸ್ಯ ಪೀಠ ಗುರುವಾರ ಆದೇಶ ನೀಡುವ ಮುನ್ನ ಗುಪ್ತಚರ ಇಲಾಖೆ ನೀಡಿರುವ ಎಲ್ಲಾ ವರದಿಯನ್ನು ಪರಿಗಣಿಸಿಲ್ಲ ಎಂದು ವಕೀಲ, ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ವಿಭಾಗೀಯ ಪೀಠದಲ್ಲಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.