ನಾಳೆಯೇ ಸಚಿವ ಸಂಪುಟ ವಿಸ್ತರಣೆ; ಇಬ್ಬರು ಹಾಲಿ ಸಚಿವರಿಗೆ ಕೊಕ್?
Team Udayavani, Dec 21, 2018, 8:40 PM IST
ನವದೆಹಲಿ: ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನವದೆಹಲಿಯಲ್ಲಿ ಮುಂದುವರಿದಿದ್ದು, ಇಬ್ಬರು ಹಾಲಿ ಸಚಿವರಿಗೆ ಕೊಕ್ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಈಶ್ವರ್ ಖಂಡ್ರೆ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್ ಜತೆ ಶನಿವಾರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ.
ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿಯ ತುಘಲಖ್ ಲೇನ್ ನಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ನಡೆದಿರುವ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ದೀರ್ಘ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್ ಸೇರಿದಂತೆ ಎಂಟು ಶಾಸಕರಿಗೆ ಸ್ಥಾನ ನೀಡಲು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.