ವಾಟರ್ ಯುನಿವರ್ಸಿಟಿ ಅಗತ್ಯವಿಲ್ಲ: ಡಿಕೆಶಿ
Team Udayavani, Dec 22, 2018, 6:00 AM IST
ವಿಧಾನಸಭೆ: ರಾಜ್ಯದಲ್ಲಿ ನೀರು ನಿರ್ವಹಣೆ ಮಾಡುವ ಕುರಿತು ಈಗಾಗಲೇ ಅನೇಕ ಸಂಸ್ಥೆಗಳು ಬೇರೆ, ಬೇರೆ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಪ್ರತ್ಯೇಕವಾಗಿ ವಾಟರ್ ಯುನಿವರ್ಸಿಟಿ ರಚಿಸುವ ಅಗತ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತುಮಕೂರು ಶಾಸಕ ಜ್ಯೋತಿಗಣೇಶ್ ಪ್ರಶ್ನೆಗೆ ಉತ್ತರಿಸಿರುವ ಅವರು, ರಾಜ್ಯದಲ್ಲಿ ವಾಟರ್ ಯುನಿವರ್ಸಿಟಿ ಸ್ಥಾಪನೆ ಮಾಡುವ ಕುರಿತು ಜಲ ಸಂಪನ್ಮೂಲ ಇಲಾಖೆಯ ಪ್ರಧಾನ ಸಲಹೆಗಾರರು ಹಾಗೂ ತಾಂತ್ರಿಕ ಸಲಹೆಗಾರರ ಅಭಿಪ್ರಾಯ ಕೋರಲಾಗಿತ್ತು. ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ನೀರು ಮತ್ತು ನೆಲ ನಿರ್ವಹಣೆಗೆ ವಾಲಿ¾ ಸಂಸ್ಥೆ, ಸಮಗ್ರ ಜಲ ಸಂಪನ್ಮೂಲ ನಿರ್ವಹಣೆ ಉನ್ನತ ಕೇಂದ್ರ, ಕಾಡಾ, ಕರ್ನಾಟಕ ಎಂಜಿನಿಯರ್ ಸಂಶೋಧನಾ ಕೇಂದ್ರ, ನೀರು ಬಳಕೆದಾರರ ಸಹಕಾರ ಸಂಘ, ಸಂಶೋಧನಾ ಕೇಂದ್ರಗಳು, ಪ್ರಾಧಿಕಾರಗಳು, ನಿರ್ದಿಷ್ಟ ಕಾರ್ಯ ಚಟುವಟಿಕೆಗಳಿಗಾಗಿ ಕಾರ್ಯ ನಿರ್ವಹಿಸುತ್ತಿವೆ. ಅವುಗಳನ್ನು ಅಭಿವೃದ್ಧಿ ಪಡಿಸಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಕೈಗೊಳ್ಳಲು ಸಲಹೆ ನೀಡಿದ್ದಾರೆ. ಆದ್ದರಿಂದ ನೀರು ನಿರ್ವಹಣೆಗೆ ಪ್ರತ್ಯೇಕ ವಿಶ್ವವಿದ್ಯಾಲಯದ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.