ವೈದ್ಯರ ಸರ್ಕಾರಿ ಸೇವೆ: ಸಮಗ್ರ ತನಿಖೆಗೆ ಆದೇಶ


Team Udayavani, Dec 22, 2018, 12:18 PM IST

highcourt4.jpg

ಬೆಂಗಳೂರು: ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳು ಮೂರು ವರ್ಷ ಸರ್ಕಾರಿ ಸೇವೆ ಸಲ್ಲಿಸುತ್ತೇವೆ ಎಂದು ಪ್ರವೇಶದ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದಕ್ಕೆ ಬದ್ಧರಾಗದೆ ಮತ್ತು ನಿಗದಿತ ದಂಡ ಪಾವತಿಸದಿರುವ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಇದೇ ವೇಳೆ 2018-19ನೇ ಸಾಲಿನ ಕೌನ್ಸೆಲಿಂಗ್‌ಗಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ 2018ರ ಸೆ.28ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ 300ಕ್ಕೂ ಹೆಚ್ಚು ಅರ್ಜಿಗಳನ್ನು ನ್ಯಾ. ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಭಾಗಶಃ ಮಾನ್ಯ ಮಾಡಿದೆ. ಅದೇ ರೀತಿ ಪ್ರಸಕ್ತ ಸಾಲಿನ ಎಲ್ಲ ಅಭ್ಯರ್ಥಿಗಳ ಮೆರಿಟ್‌ ಪಟ್ಟಿ ಹಾಗೂ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವವರ ಪಟ್ಟಿ ಸಿದ್ದಗೊಳ್ಳುವವರೆಗೆ 2018-19ನೇ ಸಾಲಿನ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳಿಗೆ ಬಲವಂತ ಮಾಡಬಾರದು ಎಂದೂ ನ್ಯಾಯಪೀಠ ಹೇಳಿದೆ.

ಅರ್ಜಿಗಳ ವಿಚಾರಣೆ ಬಳಿಕ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಪೀಠ, ಅದನ್ನು ಶುಕ್ರವಾರ ಪ್ರಕಟಿಸಿತು. ಸರ್ಕಾರದ ರಿಯಾಯಿತಿ ದರದಲ್ಲಿ ಸೀಟುಗಳನ್ನು ಪಡೆದು ವೈದ್ಯಕೀಯ ಪದವಿ ಪೂರೈಸಿದ ನಂತರ ಒಪ್ಪಂದದನ್ವಯ ಮೂರು ವರ್ಷ ಸರ್ಕಾರಿ ಸೇವೆ ಸಲ್ಲಿಸದೆ, ದಂಡ ಪಾವತಿ ಮಾಡಿರುವ ಕ್ರಮದಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬಂದಿವೆ. ಆದ್ದರಿಂದ ಕಾನೂನು ಪ್ರಕಾರ ದಂಡ ಪಾವತಿಸಿಕೊಳ್ಳಲು ವಿಫ‌ಲರಾಗಿರುವ ತಪ್ಪಿತಸ್ಥರ ವಿರುದ್ಧ ಸರ್ಕಾರ ತನಿಖೆ ನಡೆಸಬೇಕು. 

ಅಲ್ಲದೆ, 2006ರ ನಿಯಮದ ಅನುಸಾರ ಯಾರೆಲ್ಲಾ ಸರ್ಕಾರಿ ಸೀಟುಗಳನ್ನು ಪಡೆದಿದ್ದಾರೊ ಅವರನ್ನು ಆರೋಗ್ಯ ಇಲಾಖೆ ಪುನ: ಸೇವೆಗೆ ಕರೆಯಬೇಕು ಇಲ್ಲವೇ ನಿಯಮ 15ರ ಅನುಸಾರ ಅವರಿಂದ ಸೂಕ್ತ ದಂಡ ಪಾವತಿ ಮಾಡಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

6 ತಿಂಗಳಲ್ಲಿ ನಿಯಮ ರೂಪಿಸಿ: ಅಧಿನಿಯಮ 2006ರ ನಿಯಮ 15ರನ್ವಯ ಮೂರು ವರ್ಷ ಸರ್ಕಾರಿ ಸೇವೆ ಕಡ್ಡಾಯಗೊಳಿಸಲು ಒಪ್ಪಂದ ಪತ್ರ ಬರೆಸಿಕೊಳ್ಳುವ ಸಂಬಂಧ 6 ತಿಂಗಳಲ್ಲಿ ಸಮಗ್ರ ಯೋಜನೆ ರೂಪಿಸಬೇಕು ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಾಲಯದ ಆದೇಶದ ಪ್ರತಿಯನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರು ಹಾಗೂ ರಾಜ್ಯದ  ಪ್ರಧಾನ ಲೆಕ್ಕಪಾಲಕರಿಗೆ ರವಾನಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ನಿರ್ದೇಶನ ನೀಡಿರುವುದು ಗಮನಾರ್ಹ.

ಟಾಪ್ ನ್ಯೂಸ್

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

4

Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.