ಬೇಡಿಕೆಗಳ ಈಡೇರಿಕೆಗೆ ಕೃಷಿಪರಿಕರ ವ್ಯಾಪಾರಸ್ಥರ ಆಗ್ರಹ
Team Udayavani, Dec 22, 2018, 2:23 PM IST
ವಿಜಯಪುರ: ರೈತರಿಗೆ ರಿಯಾಯ್ತಿ ದರದಲ್ಲಿ ಕೃಷಿ ಕೆಲಸಕ್ಕಾಗಿ ಬೀಜ, ಕ್ರಿಮಿನಾಶಕ ಸೇರಿ ಅಧಿಕೃತ ಲೈಸನ್ಸ್ ಹೊಂದಿದ ಕೃಷಿ ವರ್ತಕರ ಮೂಲಕವೇ ಮಾರಾಟವಾಗುವ ವ್ಯವಸ್ಥೆ ರೂಪಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಸಂಘಟನೆ ಮುಖಂಡ ಪುಟ್ಟು ಕುಲಕರ್ಣಿ ಮಾತನಾಡಿ, ಕೃಷಿ ಪರಿಕರ ಮಾರಾಟರರು ಪ್ರಸಕ್ತ ಸಂದರ್ಭದಲ್ಲಿ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೃಷಿ ಪರಿಕರ ಮಾರಾಟಗಾರರ ಪರವಾನಿಗೆ ವಿತರಣೆ, ನವೀಕರಣ ಪ್ರಕ್ರಿಯೆಯಲ್ಲಿ ಸಾಕಷ್ಟು ವ್ಯತ್ಯಯವಾಗುತ್ತಿದೆ. ಇದರಿಂದ ಕೃಷಿ ಪರಿಕರ ಮಾರಾಟಗಾರರು ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಲೈಸನ್ಸ್ ವ್ಯವಸ್ಥೆ ಸರಳೀಕರಣ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಅಧಿಕೃತ ಲೈಸನ್ಸ್ ಹೊಂದಿದ ಕೃಷಿ ಪರಿಕರ ಮಾರಾಟಗಾರರಿದ್ದಾರೆ. ಈ ವೃತ್ತಿ ನಂಬಿ 6 ಲಕ್ಷ ಜನರು ತಮ್ಮ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಮಾರಾಟಗಾರರಿಗೆ ಬಲ ನೀಡುವ ನಿಟ್ಟಿನಲ್ಲಿ ಸರ್ಕಾರದಿಂದ ಕೃಷಿ ಉದ್ದೇಶಗಳಿಗೆ ರಿಯಾಯ್ತಿ ರೂಪದಲ್ಲಿ ನೀಡುವ ಕೃಷಿ ಪರಿಕರಗಳನ್ನು ಅಧಿಕೃತ ಲೈಸನ್ಸ್ ಮಾರಾಟಗಾರರಿಂದಲೇ ಮಾರುವ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಕೃಷಿ ಪರಿಕರ ಮಾರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.