ಬಾಂಗ್ಲಾ ವಿರುದ್ಧದ ಸರಣಿ ಗೆದ್ದ ವೆಸ್ಟ್ ಇಂಡೀಸ್
Team Udayavani, Dec 23, 2018, 6:00 AM IST
ಢಾಕಾ: ಶನಿವಾರದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶವನ್ನು 50 ರನ್ನುಗಳಿಂದ ಬಗ್ಗುಬಡಿದ ವೆಸ್ಟ್ ಇಂಡೀಸ್ ಸರಣಿಯನ್ನು 2-1 ಅಂತರದಿಂದ ತನ್ನದಾಗಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ಓಪನರ್ ಎವಿನ್ ಲೆವಿಸ್ ಅವರ ಸಿಡಿಲಬ್ಬರ ಆಟದ ನೆರವಿನಿಂದ 19.2 ಓವರ್‌ಗಳಲ್ಲಿ 190 ರನ್ ಪೇರಿಸಿತು. ಜವಾಬಿತ್ತ ಬಾಂಗ್ಲಾದೇಶ 17 ಓವರ್‌ಗಳಲ್ಲಿ 140ಕ್ಕೆ ಕುಸಿಯಿತು. ಎರಡೂ ತಂಡಗಳು ಆಲೌಟ್ ಆದದ್ದು ಈ ಪಂದ್ಯದ ವಿಶೇಷ. ಎವಿನ್ ಲೆವಿಸ್ 36 ಎಸೆತಗಳಿಂದ 89 ರನ್ ಸಿಡಿಸಿದರು (6 ಬೌಂಡರಿ, 8 ಸಿಕ್ಸರ್). ಬಾಂಗ್ಲಾ ಪರ ನಾಯಕ ಶಕಿಬ್, ಮುಸ್ತಫಿಜುರ್ ಮತ್ತು ಮಹಮದುಲ್ಲ ತಲಾ 3 ವಿಕೆಟ್ ಕಿತ್ತರು. ಆತಿಥೇಯರಿಗೆ ಘಾತಕವಾಗಿ ಪರಿಣಮಿಸಿದವರು ಮಧ್ಯಮ ವೇಗಿ ಕೀಮೊ ಪೌಲ್. ಅವರು 15 ರನ್ನಿತ್ತು 5 ವಿಕೆಟ್ ಉರುಳಿಸಿದರು. ದೊಡ್ಡ ಮೊತ್ತದ ಚೇಸಿಂಗ್ ವೇಳೆ ಬಾಂಗ್ಲಾ ಸತತ ವಿಕೆಟ್‌ಗಳನ್ನು ಕಳೆದುಕೊಂಡು ತೀವ್ರ ಒತ್ತಡಕ್ಕೆ ಸಿಲುಕಿತು. 43 ರನ್ ಮಾಡಿದ ಲಿಟನ್ ದಾಸ್ ಅವರದೇ ಹೆಚ್ಚಿನ ಗಳಿಕೆ. ಲೆವಿಸ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.