ಕೃಷಿ ಸಚಿವ ಶಿವಶಂಕರಗೆ ಭೀಕರ ಬರದ ದರ್ಶನ

Team Udayavani, Dec 23, 2018, 3:27 PM IST

23-december-18.gif

ಕುಷ್ಟಗಿ: ತಾಲೂಕಿಗೆ ಅನಿರೀಕ್ಷರಿತವಾಗಿ ಭೇಟಿ ನೀಡಿದ ಕೃಷಿ ಸಚಿವ ಶಿವಶಂಕರ ರಡ್ಡಿ ಅವರಿಗೆ ಇಲ್ಲಿನ ರೈತರು ಎದುರಿಸುತ್ತಿರುವ ಭೀಕರ ಬರದ ದರ್ಶನವಾಯಿತು. ಶನಿವಾರ ಹುನಗುಂದ ತಾಲೂಕಿಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ತಾಲೂಕಿನ ಕೃಷಿ ಇಲಾಖೆಯ ಕಾಮಗಾರಿಗಳನ್ನು ಪರಿಶೀಲಿಸಿದರು. ತಾಲೂಕಿನ ಚಳಗೇರಾ, ಅಡವಿಬಾವಿ ಗ್ರಾಮದ ವ್ಯಾಪ್ತಿಯಲ್ಲಿ ಇಲಾಖೆ ಕೈಗೊಂಡಿರುವ ಗೋಕಟ್ಟು, ಕೃಷಿ ಹೊಂಡ, ಬದು ನಿರ್ಮಾಣ, ಚೈಕ್‌ ಡ್ಯಾಮ್‌ ಕಾಮಗಾರಿ ಪರಿಶೀಲಿಸಿದರು.

ಈ ಭಾಗದಲ್ಲಿ ಅಂತರ್ಜಲ ವೃದ್ಧಿಪಡಿಸಲು ಆದಷ್ಟು ಹೆಚ್ಚಾಗಿ ಗೋಕಟ್ಟು, ಕೃಷಿ ಹೊಂಡಗಳನ್ನು ನಿರ್ಮಿಸಲು ಆದ್ಯತೆ ನೀಡುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ಅಕ್ಟೋಬರ್‌ ತಿಂಗಳಿನಲ್ಲಿ ಕೇವಲ ಒಮ್ಮೆ ಮಳೆಯಾಗಿದ್ದರೂ ಇಷ್ಟು ಪ್ರಮಾಣದಲ್ಲಿ ನೀರು ನಿಂತಿದೆ. ಇನ್ನಷ್ಟು ಮಳೆಯಾಗಿದ್ದರೆ ಗೋಕಟ್ಟು, ಕೃಷಿ ಹೊಂಡ ಭರ್ತಿಯಾಗುವ ಸಾಧ್ಯತೆಗಳಿದ್ದವು. ಮಳೆ ತೀವ್ರ ಕೊರತೆಯಾಗಿದ್ದರಿಂದ ಕೃಷಿ ಹೊಂಡ, ಗೋಕಟ್ಟುಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‌ವೈ) ಯೋಜನೆಯಲ್ಲಿ ಗೋಕಟ್ಟುಗಳನ್ನು ನಿರ್ಮಿಸಿ, ಮಳೆಗಾಲದ ವೇಳೆ ಹಳ್ಳದ ನೀರನ್ನು ಈ ಗೋಕಟ್ಟೆಗೆ ತಿರುಗಿಸುವ ವ್ಯವಸ್ಥೆಯಿಂದ ಗೋಕಟ್ಟು ಭರ್ತಿಯಾದರೆ ಅಂತರ್ಜಲ ಹೆಚ್ಚಿಸಲು ಪೂರಕವಾಗಿದೆ. ಮಳೆಗಾಲದ ಹಿಡಿದಿಟ್ಟುಕೊಂಡ ನೀರನ್ನು ಬೇಸಿಗೆಯ ಬೆಳೆಗೂ ಬಳಸಿಕೊಳ್ಳಲು ಸಾಧ್ಯವಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಗೋಕಟ್ಟು, ಕೃಷಿ ಹೊಂಡ ಹೆಚ್ಚಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕೃಷಿ ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಹಿಂಗಾರು ಹಂಗಾಮಿನ ಕಡಲೆ, ಬಿಳಿಜೋಳ ಸೇರಿದಂತೆ ಇತರೇ ಬೆಳೆಯ ಒಣಗಿದ ಭೀಕರ ಪರಿಸ್ಥಿತಿ ಅವಲೋಕಿಸಿದ ಸಚಿವರು, ಈ ಭಾಗದಲ್ಲಿ ಮಳೆ ಪ್ರಮಾಣ ಇಷ್ಟೊಂದು ಕನಿಷ್ಟ ಪ್ರಮಾಣದಲ್ಲಿರುವುದು ಬೇಸರ ವ್ಯಕ್ತಪಡಿಸಿದರು. ಕುಷ್ಟಗಿ ತಾಲೂಕು ಬರಗಾಲ ಪೀಡಿತ ಘೋಷಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಪೂರ್ವಸಿದ್ಧತೆ ಇಲಾಖೆ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು. ಇಲಾಖೆಯ ಮುಂದುವರಿದ ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ, ಹನಿ ನೀರಾವರಿ, ತುಂತುರು ನೀರಾವರಿ ಯೋಜನೆ ಸದುಯೋಗಕ್ಕೆ ಸಹಕರಿಸಲು ನಿರ್ದೇಶನ ನೀಡಿದರು. ಇದೇ ವೇಳೆ ಕೃಷಿಕ ಸಮಾಜದ ಅಧ್ಯಕ್ಷ ಚಂದಪ್ಪ ತಳವಾರ, ಪ್ರಸಕ್ತ ವರ್ಷ ಬರಗಾಲ ಭೀಕರವಾಗಿದ್ದು ಜಾನುವಾರುಗಳಿಗೆ ನೀರು, ಮೇವಿನ ತೊಂದರೆಯಾಗುವ ಸಾಧ್ಯತೆಗಳಿವೆ. ಕೂಡಲೇ ಬರಗಾಲದ ಕಾಮಗಾರಿಗಳನ್ನು ಕೈಗೆತ್ತಿಕ್ಕೊಳ್ಳುವಂತೆ ಮನವಿ ಮಾಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಭನಾ ಶೇಖ್‌, ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ಕಮತರ, ಎಎಒ ಕಮ್ಮಾರ, ರಾಘವೇಂದ್ರ ಕೊಂಡಗುರಿ, ಶೇಖರಯ್ಯ ಹಿರೇಮಠ ಮತ್ತಿತರಿದ್ದರು.

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.