ಹಟ್ಟಿ ಪಪಂಗೆ 5 ಕೋಟಿ ಅನುದಾನ: ಹೂಲಗೇರಿ
Team Udayavani, Dec 23, 2018, 4:06 PM IST
ಹಟ್ಟಿ ಚಿನ್ನದ ಗಣಿ: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಹಟ್ಟಿ ಪಟ್ಟಣ ಪಂಚಾಯತಿಗೆ 5 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪಟ್ಟಣದ ರಸ್ತೆಗಳು ತೀರಾ ಹದಗೆಟಿದ್ದರಿಂದ ಪ್ರಮುಖ ರಸ್ತೆಗಳ ಸುಧಾರಣೆಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಿ.ಎಸ್. ಹೂಲಗೇರಿ ಹೇಳಿದರು.
ಪಟ್ಟಣದ ಪ್ರಮುಖ ರಸ್ತೆಗಳ ಸುಧಾರಣೆಗಾಗಿ ರಸ್ತೆ ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹಟ್ಟಿ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿದ ನಂತರ ಯಾವುದೆ ಅನುದಾನ ಬಂದಿರಲಿಲ್ಲ. ಈ ಬಗ್ಗೆ ಲಿಖೀತವಾಗಿ ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಪೌರಾಡಳಿತ ಸಚಿವ ರಮೇಶ ಜಾರಕಿಹೋಳಿ ಹಟ್ಟಿ ಪಟ್ಟಣ ಪಂಚಾಯತಿಗೆ 5 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದರು.
ಸಚಿವರು ಉತ್ತರ ನೀಡಿದ ಒಂದು ವಾರದೊಳಗೆ 5 ಕೋಟಿ ರೂ. ಅನುದಾನ ಬಿಡುಗಡೆಯಾಗಗಿದೆ. ಇದರಲ್ಲಿ 3.50 ಕೋಟಿ ರೂ. ಗಳನ್ನು ಪ್ರಮುಖ ರಸ್ತೆಗಳ ಡಾಂಬರೀಕರಣಕ್ಕೆ ಬಳಸಲಾಗುವುದು. ಉಳಿದ 1.50 ಕೋಟಿ ರೂ.ಗಳನ್ನು ನೀರು, ವಿದ್ಯುತ್ ದೀಪ ಸೇರಿ ಮೂಲ ಸೌಲಭ್ಯ ಒದಗಿಸಲು ಬಳಸಲಾಗುವುದು. ಒಳ ರಸ್ತೆಗಳ ಸುಧಾರಣೆಗೆ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ 3 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ತಯಾರಿಸಿ ಅನುಮೋದನೆಗೆ ಕಳಿಸಲಾಗಿದೆ.
ಆ ಹಣ ಬಂದ ನಂತರ ಸಿಸಿ ರಸ್ತೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.ಪಟ್ಟಣ ಪಂಚಾಯತಿ ಸಿಬ್ಬಂದಿ ಸಭೆ: ರಸ್ತೆ ವೀಕ್ಷಣೆಗೂ ಮುನ್ನ ಶಾಸಕರು ಚಿನ್ನದ ಗಣಿ ಕಂಪನಿ ಅತಿಥಿ ಗೃಹದಲ್ಲಿ ಪಟ್ಟಣ ಪಂಚಾಯತಿ ಸಿಬ್ಬಂದಿ ಸಭೆ ನಡೆಸಿ, ಅನುದಾನ ಬಳಕೆಗೆ ಕ್ರಿಯಾ ಯೋಜನೆ ತಯಾರಿಸುವಂತೆ ಸೂಚಿಸಿದರು.
ಪಟ್ಟಣ ಪಂಚಾಯತಿಯಲ್ಲಿ ಕರ ವಸೂಲಿ ಸಮರ್ಪಕವಾಗಿ ನಡೆಯುತ್ತಿಲ್ಲ. ನಿಗದಿತ ಗುರಿಯಂತೆ ಕರ ಸಂಗ್ರಹವಾಗದಿದ್ದಲ್ಲಿ ಸಿಬ್ಬಂದಿಗೆ ವೇತನ ಕೊಡುವುದು ಕಷ್ಟವಾಗಲಿದೆ. ಈಗಾಗಲೇ ಸಿಬ್ಬಂದಿಗಳ ಹಲವು ತಿಂಗಳ ವೇತನ ಬಾಕಿ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಕಟ್ಟುನಿಟ್ಟಾಗಿ ಕರ ವಸೂಲಿ ಮಾಡಲು ಕ್ರಮ ಕೈಗೊಳ್ಳಿ ಎಂದು ಶಾಸಕರು ಮುಖ್ಯಾಧಿಕಾರಿ ದುರುಗಪ್ಪ ಹಗೇದಾಳ ಅವರಿಗೆ ಸೂಚಿಸಿದರು.
ನೈರ್ಮಲ್ಯ ಅಧಿಕಾರಿಗಳಾದ ಖಾಜಾಹುಸೇನ್, ಖಯಾಜ್ ಖಾನ್, ಕರ ವಸೂಲಿಗಾರ ರಾಜಪ್ಪ ಮಾಚನೂರು, ಪಪಂ ಸದಸ್ಯರಾದ ಜಿ. ಶ್ರೀನಿವಾಸ್, ರಂಗನಾಥ ಮುಂಡರಗಿ, ಬಾಬು ನಾಯೊಡಿ, ಮುಖಂಡರಾದ ಶಂಕರಗೌಡ ಬಳಗಾನೂರು, ಹನುಮಂತರೆಡ್ಡಿ, ನಿಂಗಪ್ಪ ಮನಗೂಳಿ, ಮೌಲಾಸಾಬ ಮಾಸ್ತರ್, ಕರಿಯಪ್ಪ, ಬುಜ್ಜಾ ನಾಯಕ, ಮಹಿಬೂಬ್ ಮೆಕ್ಯಾನಿಕ್, ದೇವೇಂದ್ರಪ್ಪ, ಶಿವಣ್ಣ ನಾಯಕ ಕೋಠಾ, ಹನುಮಂತ ನಾಯಕ ಮಲ್ಲಾಪುರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.