ಬಂಟರ ಸಂಘ ಜೋಗೇಶ್ವರಿ-ದಹಿಸರ್‌  ಮಹಿಳಾ ವಿಭಾಗದ ವಿದೇಶ ಪ್ರವಾಸ

Team Udayavani, Dec 23, 2018, 5:07 PM IST

56414.jpg

ಮುಂಬಯಿ: ಬಂಟರ ಸಂಘ ಮುಂಬಯಿ ಜೋಗೇಶ್ವರಿ ದಹಿಸರ್‌ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಮಹಿಳೆಯರು ನ.23ರಿಂದ ನ.28ರವರೆಗೆ 5 ರಾತ್ರಿ ಹಾಗೂ 6 ದಿನಗಳ ಥೈಲ್ಯಾಂಡ್‌  ರಾಷ್ಟ್ರದ ವಿದೇಶ ಪ್ರವಾಸವನ್ನು ಯಶಸ್ವಿಯಾಗಿ ಪೂರೈಸಿ ಹಿಂದಿರುಗಿದರು. ನ.23ರಂದು ಮಹಿಳಾ ವಿಭಾಗದ ಸುಮಾರು 34 ಮಂದಿ ಸದಸ್ಯೆಯರು ಮುಂಬಯಿಯ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣದಿಂದ ರಾತ್ರಿ 1.30ರ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿ  ಥೈಲ್ಯಾಂಡ್‌ ಕಾಲಮಾನದ ಪ್ರಕಾರ ಅಂದು ಬೆಳಗ್ಗೆ 6ಕ್ಕೆ ಸರಿಯಾಗಿ ಬ್ಯಾಂಕಾಂಕ್‌ನ ಸುವರ್ಣಭೂಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ತಂಡದಲ್ಲಿ ಸುಮಾರು 8ರಿಂದ 10 ಜನ ವರಿಷ್ಟ ನಾಗರಿಕ ಮಹಿಳೆಯರೂ ಒಳಗೊಂಡಿದ್ದರು.

ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆಯಾದ ವಿನೋದಾ ಅಶೋಕ್‌ ಶೆಟ್ಟಿ  ಹಾಗೂ ಅವರ ಪದಾಧಿಕಾರಿಗಳ ತಂಡವು ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿ ದ್ದರು. ಪ್ರವಾಸದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ನಗರದ ಸುಪ್ರಸಿದ್ಧ ಪ್ರವಾಸೋ ದ್ಯಮ ಸಂಸ್ಥೆಯಾದ ವೀಣಾ ವರ್ಲ್ಡ್ಗೆ ವಹಿಸಿ ಕೊಡಲಾಗಿತ್ತು. 

ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಪ್ರವಾಸದ ಸಂಪೂರ್ಣ ಉಸ್ತುವಾರಿಯನ್ನು ನೋಡಿಕೊಳ್ಳಲು ವೀಣಾ ವಲ್ಡ್‌ ì ಕಡೆಯಿಂದ ಪ್ರವಾಸ ಮಾರ್ಗದರ್ಶಕ ಗುರುದೀಪ್‌ ಕೇರ್‌ ಎಂಬವರನ್ನು ನಿಯೋಜಿಸಲಾಗಿತ್ತು.  5 ದಿನಗಳಲ್ಲಿ ಪಟ್ಟಾಯ ಟವರ್‌, ಕೋರಲ್‌ ಐಲ್ಯಾಂಡ್‌, ಬ್ಯಾಂಕಾಕ್‌ನ ಜೆಮ್ಸ್‌ ಗ್ಯಾಲರಿ ಸಹಿತ ಸೇರಿದಂತೆ ಥಾಲ್ಯಾಂಡ್‌ನ‌ ವಿವಿಧ ವಿಶ್ವ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಾಯಿತು. 

ಅಲ್ಲದೆ, ಅಲ್ಲಿನ ವಿವಿಧ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ವೀಕ್ಷಿಸಲಾಯಿತು. ಸಫಾರಿ ವರ್ಲ್ಡ್ ಪ್ರಾಣಿ ಸಂಗ್ರಾಹಾಲಯಕ್ಕೂ ಭೇಟಿಯಿತ್ತು ಮರೀನ್‌ ಪಾರ್ಕ್‌ ಎಂಬ ಜಲಚರ ಪ್ರಾಣಿ ಸಂಗ್ರಹಾಲಯವನ್ನು ವೀಕ್ಷಿಸಲಾಯಿತು.

 ಬ್ಯಾಂಕಾಕ್‌ನ ಬೀದಿಗಳಲ್ಲಿ ಸಂಚರಿಸಿ ಇಂದಿರಾ  ಸ್ಕ್ವೇರ್‌ ಎಂಬ ಬೃಹತ್‌ ಮಾರುಕಟ್ಟೆಯಲ್ಲಿ ಪ್ರವಾಸಿಗರು ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿದರು. 

ಪ್ರವಾಸದ ಕೊನೆಯ ದಿನ ನ. 28ರಂದು ಸಂಜೆ ವಿಮಾನ ನಿಲ್ದಾಣ ತಲುಪುವವರೆಗೂ ವಿವಿಧ ಬೌದ್ಧ ದೇವಾಲಯಗಳಿಗೆ ಭೇಟಿ ನೀಡಲಾಯಿತು. ಪ್ರವಾಸದ ಎಲ್ಲ ದಿನಗಳಲ್ಲಿಯೂ ಥೈಲ್ಯಾಂಡ್‌ನ‌ ಎಳ ನೀರಿನ ಆನಂದವನ್ನು ಸವಿದರು.  ಕೊನೆಗೆ ಬ್ಯಾಂಕಾಕ್‌ನ ಸುವರ್ಣ ಭೂಮಿ ವಿಮಾನ ನಿಲ್ದಾಣದಿಂದ ಏರ್‌ ಇಂಡಿಯಾ ವಿಮಾನ ನಿಲ್ದಾಣದ ಮೂಲಕ ಮುಂಬಯಿಗೆ ಮರಳುವುದರೊಂದಿಗೆ ಪ್ರವಾಸವು ಕೊನೆಗೊಂಡಿತು.

ಟಾಪ್ ನ್ಯೂಸ್

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.