ಗಂಗೊಳ್ಳಿ ಚುನಾವಣೆ ಕಣ: ಪ್ರತಿಷ್ಠೆ ಪಣ
Team Udayavani, Dec 24, 2018, 1:15 AM IST
ವಿಶೇಷ ವರದಿ : ಗಂಗೊಳ್ಳಿ: ಪಟ್ಟಣ ಪಂಚಾಯತ್ ಆಗುವ ಎಲ್ಲ ಅರ್ಹತೆಗಳಿರುವ ಕುಂದಾಪುರ ತಾಲೂಕಿನ ಅತಿ ದೊಡ್ಡ ಗ್ರಾ.ಪಂ. ಎನ್ನುವ ಹೆಗ್ಗಳಿಕೆ ಹೊಂದಿರುವ ಗಂಗೊಳ್ಳಿಯಲ್ಲಿ ಜ. 2ರಂದು ನಡೆಯಲಿರುವ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಕಣವಾಗಿದೆ. ಕುಂದಾಪುರ ತಾಲೂಕು, ಬೈಂದೂರು ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಗ್ರಾ.ಪಂ. ನಲ್ಲಿ 8 ಕ್ಷೇತ್ರ, 13 ವಾರ್ಡ್ ಹಾಗೂ 33 ಸ್ಥಾನಗಳಿವೆ. ಬಂದರು ಪ್ರದೇಶವಿರುವ, 13 ಸಾವಿರ ಜನಸಂಖ್ಯೆಯಿರುವ ಇಲ್ಲಿ ಮೀನುಗಾರರೇ ಹೆಚ್ಚಿದ್ದಾರೆ. ಒಟ್ಟು 10,456 ಮಂದಿ ಮತದಾರರಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿದ್ದಾರೆ. ಹಾಗಾಗಿ ಮೀಸಲಾತಿಯಲ್ಲಿಯೂ ಮಹಿಳೆಯರಿಗೆ ಪ್ರಾಧಾನ್ಯತೆ ನೀಡಲಾಗಿದೆ. ಇರುವ 33 ಸ್ಥಾನಗಳ ಪೈಕಿ 17ರಲ್ಲಿ ಮಹಿಳೆಯರು ಹಾಗೂ 16 ರಲ್ಲಿ ಪುರುಷ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ.
5 ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ 19 ಸ್ಥಾನಗಳಲ್ಲಿ ಗೆದ್ದು, ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಆದರೆ ಆಗ ಎರಡೂವರೆ ವರ್ಷ ಅಧಿಕಾರ ಪೂರೈಸಿದ ಅಧ್ಯಕ್ಷರು ಮತ್ತೂಬ್ಬರಿಗೆ ಅವಕಾಶ ನೀಡ ಬೇಕಾದಾಗ ಹೊಸ ನಿಯಮದಂತೆ 5 ವರ್ಷ ಅಧ್ಯಕ್ಷರಿಗೆ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಬೇಕು ಎಂದು 170ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳು ಕಾನೂನು ಹೋರಾಟಕ್ಕೆ ಇಳಿದಿದ್ದರಿಂದ ಗಂಗೊಳ್ಳಿಯಲ್ಲಿಯೂ ಆಡಳಿತಾಧಿಕಾರಿಗೆ ಜವಾಬ್ದಾರಿ ವಹಿಸಲಾಗಿತ್ತು. ಆ ಅವಧಿ ಮುಗಿದು ಈಗ ಮತ್ತೆ ಚುನಾವಣೆ ನಡೆಯುತ್ತಿದೆ.
ಭಾರೀ ಪೈಪೋಟಿ
ಇಲ್ಲಿರುವ 33 ಸ್ಥಾನಗಳ ಪೈಕಿ ಸಿಪಿಐಎಂ, ಪಕ್ಷೇತರರು ಸ್ಪರ್ಧೆಯಲ್ಲಿದ್ದರೂ ಇಲ್ಲಿ ಸ್ಪರ್ಧೆಯಿರುವುದು ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಮಧ್ಯೆ ಮಾತ್ರ. ಇವರೆಡೂ ಪಕ್ಷಗಳಿಂದಲೂ ತಲಾ 33 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಳೆದ ಬಾರಿ 33 ಸ್ಥಾನಗಳ ಪೈಕಿ 19 ಸ್ಥಾನಗಳಲ್ಲಿ ಬಿಜೆಪಿ ಗೆದ್ದು, ಅಧಿಕಾರಕ್ಕೇರಿದರೆ, ಕಾಂಗ್ರೆಸ್ 14 ಸ್ಥಾನ ಗೆದ್ದಿತ್ತು. ಜೆಡಿಎಸ್ ಬೆಂಬಲದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದ್ದರೆ, ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೇರಲು ಪಣ ತೊಟ್ಟಿದೆ.
20 ಸ್ಥಾನಗಳಲ್ಲಿ ಗೆಲುವು
ಕಳೆದ ಬಾರಿ ನಾವೇ ಅಧಿಕಾರದಲ್ಲಿ ಇದ್ದುದರಿಂದ ಈ ಬಾರಿ ಮತ್ತೆ ಗೆಲುವು ಸಾಧಿಸುವ ವಿಶ್ವಾಸವಿದೆ. 33 ರಲ್ಲಿ ಕನಿಷ್ಠ 20 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ.
– ಸದಾನಂದ ಉಪ್ಪಿನಕುದ್ರು, ಕ್ಷೇತ್ರಾಧ್ಯಕ್ಷರು, ಬೈಂದೂರು ಬಿಜೆಪಿ
ಅಧಿಕಾರಕ್ಕೆ ಏರುವ ವಿಶ್ವಾಸ
ಕಳೆದ ಬಾರಿ ಮುಸ್ಲಿಂ ಸಂಘಟನೆಗಳ ಜತೆ ಸ್ವಲ್ಪ ಮಟ್ಟಿನ ಹೊಂದಾಣಿಕೆ ಕೊರತೆಯಿಂದ ಕೆಲ ಸ್ಥಾನ ಕಳೆದುಕೊಳ್ಳಬೇಕಾಯಿತು. ಆದರೆ ಈ ಬಾರಿ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳುವ ಎಲ್ಲ ಲಕ್ಷಣಗಳು ಕಾಣಿಸಿಕೊಂಡಿದೆ. ಮಾತುಕತೆ ಫಲಪ್ರದವಾದರೆ ಕಾಂಗ್ರೆಸ್ ಅಧಿಕಾರಕ್ಕೇರುವ ವಿಶ್ವಾಸವಿದೆ.
– ಸಂಜೀವ ಶೆಟ್ಟಿ, ಅಧ್ಯಕ್ಷರು, ವಂಡ್ಸೆ ಬ್ಲಾಕ್ ಕಾಂಗ್ರೆಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.