ರಾಹುಲ್ ರಾಜ್ಯದಿಂದ ಸ್ಪರ್ಧೆ ಇಲ್ಲ: ಸಿದ್ದು
Team Udayavani, Dec 24, 2018, 7:35 AM IST
ಬೆಳಗಾವಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ. ಅವರು ಉತ್ತರ ಪ್ರದೇಶದ ಅಮೇಠಿಯಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರವಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಕಡೆಯೂ ತಯಾರಿ ನಡೆದಿದ್ದು ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡುವಲ್ಲಿ ಮುಖಂಡರು ಶ್ರಮಿಸುತ್ತಿದ್ದಾರೆ ಎಂದರು.
ಯಡಿಯೂರಪ್ಪ ಅವರಿಗೆ ಸತ್ಯ ಹೇಳಿಯೇ ಗೊತ್ತಿಲ್ಲ. ಯಾವಾಗಲೂ ಏನೇನೋ ಸುಳ್ಳು ಹೇಳುತ್ತಾರೆ. ಹೀಗಾಗಿ ಅವರ ಮಾತಿಗೆ ನಾನು ಮೂರು ಕಾಸಿನ ಕಿಮ್ಮತ್ತೂ ಕೊಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡಿರುವುದು ತಪ್ಪಲ್ಲ. ಆದರೆ ಜನಾದೇಶ ಅವರಿಗೆ ಸಿಕ್ಕಿಲ್ಲ. ಹೇಗಾದರೂ ಮಾಡಿ ಮುಖ್ಯಮಂತ್ರಿ ಆಗಬೇಕೆಂದು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ಚುನಾವಣೆ ಬಳಿಕ ಪುನಾರಚನೆ
ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ಮತ್ತು ಕೆಲವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಂಡ ವಿಷಯದಲ್ಲಿ ಕಾಂಗ್ರೆಸ್‌ನ ಯಾವ ಶಾಸಕರಲ್ಲೂ ಅಸಮಾಧಾನವಿಲ್ಲ. ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಸಂಪುಟವನ್ನು ಪುನಾರಚನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ರಮೇಶ್ ಜಾರಕಿಹೋಳಿ ರಾಜೀನಾಮೆ ಕೊಡುತ್ತಾರೆ ಎಂಬ ವದಂತಿ ಸುಳ್ಳು. ತಮಗೆ ಸಚಿವ ಸ್ಥಾನ ತಪ್ಪಲು ನಾಲ್ವರು ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ಆದರೆ ಇದರಲ್ಲಿ ಯಾರ ಕೈವಾಡವೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.