ಕಾಮನ್ ಮ್ಯಾನ್ ಚೌಹಾಣ್
Team Udayavani, Dec 25, 2018, 6:00 AM IST
ಭೋಪಾಲ್: ಬರೋಬ್ಬರಿ 15 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ, ಅಗತ್ಯವಿದ್ದಾಗ ಹೆಲಿಕಾಪ್ಟರ್ನಲ್ಲಿ ದಿನವೆಲ್ಲಾ ಓಡಾಡುವಷ್ಟು ಬ್ಯುಸಿ ಜೀವನ ಅನುಭವಿಸಿರುವ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈಗ ಸಾಮಾನ್ಯರಂತೆ ಬೈಕ್, ಟ್ರೇನ್ ಗಳಲ್ಲಿ ಓಡಾಡುತ್ತಿದ್ದಾರೆ!
ಸಿಎಂ ಆಗಿದ್ದವರು ಹೀಗೆ ಬದಲಾಗಲು ಸಾಧ್ಯವೇ ಎಂದು ಹುಬ್ಬೇರಿಸಬೇಡಿ. ಸಾಧ್ಯ ಅನ್ನೋದನ್ನು ಮಧ್ಯಪ್ರದೇಶದ ಮಾಜಿ ಸಿಎಂ ಮಾಡಿ ತೋರಿಸಿದ್ದಾರೆ. ಸಾಮಾನ್ಯರ ಬೈಕ್ಗಳನ್ನೇರಿ, ಪ್ಯಾಸೆಂಜರ್ ರೈಲುಗಳಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಕಾಣಿಸಿಕೊಳ್ಳುತ್ತಿದ್ದಾರೆ. 15 ವರ್ಷಗಳ ಕಾಲ ಸಿಎಂ ಆಗಿ ಸೇವೆ ಸಲ್ಲಿಸಿರುವ ಅವರು, ಹಳ್ಳಿಗಳಿಗೆ ಬೈಕ್ಗಳನ್ನೇರಿ ಓಡಾಡುತ್ತಿದ್ದು, ಅವರ ಇಂಥ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಷ್ಟೇ ಅಲ್ಲ, ಸ್ವತಃ ಚೌಹಾ ಜಾಲ ತಾಣಗಳಲ್ಲಿ ಸಾಮಾನ್ಯರೊಂದಿಗೆ ಸಂಭಾಷಣೆ ಕೂಡ ನಡೆಸುತ್ತಿದ್ದಾರೆ. ಮೊನ್ನೆ ಮೊನ್ನೆ ಯಷ್ಟೇ ನಡೆದ ಚುನಾವಣೆ ಯಲ್ಲಿ ಪಕ್ಷ ಸೋಲನುಭವಿಸಿದರೂ, ಜೀವ ನೋತ್ಸಾಹ ಕಳೆದುಕೊಳ್ಳದ ಚೌಹಾಣ್ ಜನ ರೊಟ್ಟಿಗೆ ಹೆಚ್ಚೆಚ್ಚು ಸಮಯ ಕಳೆಯುತ್ತಿದ್ದಾರೆ. ಬೆಂಬಲಿಗರೊಂದಿಗೆ ನಿರಂತರ ಸಂಪರ್ಕವನ್ನು ಕಾಪಾಡಿಕೊಂಡು ಹೋಗುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ರೈತನೊಬ್ಬನ ಬೈಕ್ನಲ್ಲಿ ಕುಳಿತು, ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡುತ್ತಿದ್ದಂತೆ ಗ್ರಾಮಸ್ಥರು ಅವರನ್ನು ಹೆಗಲ ಮೇಲೆ ಹೊತ್ತು ಸಂತಸಪಟ್ಟರು. ಮೊನ್ನೆ ತಾನೇ ಭೋಪಾಲ್ನಿಂದ ಬಿನಾಕ್ಕೆ ರೈಲಿನಲ್ಲಿ ಸಾಮಾನ್ಯ ಬೋಗಿಯಲ್ಲೇ ಕುಳಿತು ಪ್ರಯಾಣಿಸಿದ್ದರು. ಅಷ್ಟೇ ಅಲ್ಲ, ತಮ್ಮ ಟ್ವಿಟರ್ ಪ್ರೊಫೈಲ್ನಲ್ಲಿ “ಮಧ್ಯ ಪ್ರದೇಶದ ಜನ ಸಾಮಾನ್ಯ’ ಎಂದೂ ಬರೆದು ಕೊಂಡು ಅಚ್ಚರಿಗೆ ಕಾರಣವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.