ಶೂಟ್ ಔಟ್ ಮಾಡಿ ಅಲ್ಲ ..!; ವಿವಾದದ ಬಳಿಕ ಸ್ಪಷ್ಟನೆ ನೀಡಿದ ಸಿಎಂ
Team Udayavani, Dec 25, 2018, 11:35 AM IST
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ನಾಯಕ ಪ್ರಕಾಶರನ್ನು ಹತ್ಯೆ ಮಾಡಿದ ಹಂತಕರನ್ನು ಶೂಟ್ ಔಟ್ ಮಾಡುವಂತೆ ಫೋನ್ ಕರೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಭಾರಿ ವಿವಾದಕ್ಕೆ ಗುರಿಯಾದ ಬೆನ್ನಲ್ಲೆ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
#WATCH Karnataka CM HD Kumaraswamy caught on cam telling someone on the phone 'He(murdered JDS leader Prakash) was a good man, I don't know why did they murder him. Kill them (assailants) mercilessly in a shootout, no problem. (24.12.18) pic.twitter.com/j42dqiRs0a
— ANI (@ANI) December 25, 2018
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ನಾನು ಉದ್ವೇಗದಲ್ಲಿ ಹೇಳಿಕೆ ನೀಡಿದ್ದೆ. ಅದು ಶೂಟ್ಔಟ್ ಅಲ್ಲ, ಸ್ಮೋಕ್ ಔಟ್ ಆಗಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ’ ಎಂದರು.
‘ನಾನು ಮದ್ದೂರಿಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ವೀಕ್ಷಿಸುತ್ತೇನೆ. ಅಲ್ಲಿನ ಜನತೆಗೆ ಶಾಂತಿಯಿಂದ ಇರಲು ಮನವಿ ಮಾಡಿದ್ದೇನೆ’ ಎಂದರು.
ಹಾಡಹಗಲೇ ಕೊಲೆ
ಬೆಂಗಳೂರು ಮೈಸೂರು ಹೆದ್ದಾರಿಯ ಮದ್ದೂರಿನ ಟಿ.ಬಿ. ಸರ್ಕಲ್ ಬಳಿಯ ತಗ್ಗ ಹಳ್ಳಿ ಚಂದ್ರು ಹೀರೋ ಹೋಂಡಾ ಶೋರೂಂ ಎದುರು ಜೆಡಿಎಸ್ ಮುಖಂಡ ಪ್ರಕಾಶ್ ಅವರನ್ನು ದುಷ್ಕರ್ಮಿಗಳು ಹಾಡಹಗಲೇ ಹತ್ಯೆ ಮಾಡಿದ್ದಾರೆ.
ಜೆಡಿಎಸ್ ಮುಖಂಡ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಲಲಿತಾ ಅವರ ಪತಿ ಪ್ರಕಾಶ್ (50)ಕೊಲೆಯಾದವರು. 2016ರ ಡಿಸೆಂಬರ್ 25ರಂದು ತೊಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಜೋಡಿ ಕೊಲೆ ಪ್ರಕರಣಕ್ಕೆ ಪ್ರಕಾಶ್ ಪ್ರಮುಖ ಸಾಕ್ಷಿದಾರರಾಗಿದ್ದರು.
ಕೊಲೆ ಬಳಿಕ ವಿಜಯ ಪುರದಲ್ಲಿ ಮಾಧ್ಯಮಗಳ ಕ್ಯಾಮರಾ ಎದುರೇ ಸಿಎಂ ಕೊಲೆ ಮಾಡಿದವರನ್ನು ನಿರ್ದಾಕ್ಷಿಣ್ಯವಾಗಿ ಶೂಟೌಟ್ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದು ರಾಷ್ಟ್ರಾದ್ಯಂತ ಮಾಧ್ಯಮಗಳಲ್ಲಿ ಸುದ್ದಿಯಾಗಿ ಆಕ್ರೋಶಕ್ಕೆ ಗುರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.