15,000 ಹೆರಿಗೆ ಮಾಡಿಸಿದ್ದಸೂಲಗಿತ್ತಿ ನರಸಮ್ಮ ಇನ್ನಿಲ್ಲ
Team Udayavani, Dec 26, 2018, 6:48 AM IST
ಬೆಂಗಳೂರು/ತುಮಕೂರು: ದೀರ್ಘಕಾಲದ ಶ್ವಾಸಕೋಶ ಸಮಸ್ಯೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ (97) ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸೂಲಗತ್ತಿ ನರಸಮ್ಮ ಅವರನ್ನು ನ.29ರಂದು ಕೆಂಗೇರಿಯ ಬಿಜಿಎಸ್ ಗ್ಲೋಬಲ್ ಜನರಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮಧ್ಯಾಹ್ನ 3.10ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಬಿಜಿಎಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರು ಮಂಗಳವಾರ ಬೆಳಗ್ಗೆ ಆಸ್ಪತೆಗೆ ಭೇಟಿ ನೀಡಿ, ನರಸಮ್ಮ ಅವರ ಆರೋಗ್ಯ ವಿಚಾರಿಸಿದ್ದರು. ಮ. 3.10ರ ಸುಮಾರಿಗೆ ಕೊನೆಯುಸಿ ರೆಳೆದ ಸುದ್ದಿ ತಿಳಿದ ತಕ್ಷಣ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಸ್ಪತ್ರೆಗೆ ತೆರಳಿ ನರಸಮ್ಮ ಅವರ ಅಂತಿಮ ದರ್ಶನ ಪಡೆದರು. ಪಾವಗಡ ತಾಲೂಕಿನ ಕೃಷ್ಣಾಪುರ ಎಂಬಲ್ಲಿ 1920ರಲ್ಲಿ ಜನಿಸಿದ ನರಸಮ್ಮ ಅವರು, ಗ್ರಾಮೀಣ ಭಾಗದಲ್ಲಿ ಹೆರಿಗೆ ಮಾಡಿಸುವುದರಲ್ಲಿ ಪ್ರಸಿದ್ಧಿ ಪಡೆದಿದ್ದರು. ತಮ್ಮ 20ನೇ ವಯಸ್ಸಿನಲ್ಲೇ ಯಾವುದೇ ತೊಂದರೆಯಾಗದಂತೆ ವೈದ್ಯಲೋಕಕ್ಕೆ ಅಚ್ಚರಿ ಮೂಡಿಸುವಂತೆ ಹೆರಿಗೆ ಮಾಡಿಸುತ್ತಿದ್ದರು. ಇದುವರೆಗೆ 15 ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿರುವ ಕೀರ್ತಿ ಇವರ ಪಾಲಿಗೆ ಸಂದಿದೆ.
ನರಸಮ್ಮ ಅವರ ಸಾಧನೆ ಗುರುತಿಸಿ, ಕೇಂದ್ರ ಸರ್ಕಾರ ಈ ವರ್ಷ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. 2014ರಲ್ಲಿ ತುಮಕೂರು
ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೂ ಪಾತ್ರರಾಗಿದ್ದರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ದೇವರಾಜ್ ಅರಸು ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಆಫ್ ಇಂಡಿಯಾ ಪ್ರಶಸ್ತಿ ಸೇರಿದಂತೆ ಅನೇಕ ಗೌರವಕ್ಕೆ ಪಾತ್ರರಾಗಿದ್ದರು.
12ನೇ ವಯಸ್ಸಿಗೆ ಮದುವೆಯಾಗಿ, 12 ಮಕ್ಕಳ ತಾಯಿಯಾಗಿ, ತಮ್ಮ ಅಜ್ಜಿ ಗಂಗಮ್ಮ ಮಾಡುತ್ತಿದ್ದ ಸೂಲಗಿತ್ತಿ ಕೆಲಸವನ್ನು ನೋಡಿ ಕಲಿತು, ಇಪ್ಪತ್ತೆರಡನೇ ವಯಸ್ಸಿನಿಂದಲೇ ಹೆರಿಗೆ ಮಾಡಿಸುವ ಕಾರ್ಯವನ್ನು ಪ್ರಾರಂಭಿಸಿದ ನರಸಮ್ಮ, ತುಮಕೂರು ಭಾಗದ ಗರ್ಭಿಣಿಯರ ದೇವತೆಯೇ ಆಗಿದ್ದರು. ಯಾವುದೇ ನರ್ಸ್ ಗಳಿಲ್ಲದ ವೇಳೆಯಲ್ಲಿ ವೈದ್ಯಕೀಯ ಸೌಲಭ್ಯವಿಲ್ಲದ ಕಾಲದಲ್ಲಿ ಬರೋಬ್ಬರಿ 15,000ಕ್ಕೂ ಹೆಚ್ಚು ಜೀವಗಳನ್ನು ಭೂಮಿಗೆ ತಂದ ಭಾಗ್ಯವಂತೆ ಈಕೆ.
ಗಣ್ಯರ ಕಂಬನಿ
ಬೆಂಗಳೂರು: ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ನರಸಮ್ಮ ಅವರು ಆ ಭಾಗದ ಸಾವಿರಾರು ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದವರು. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಹಾಗೂಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಂದೇಶದಲ್ಲಿ ಹೇಳಿದ್ದಾರೆ.
ಸೂಕ್ತ ಆಸ್ಪತ್ರೆ ಹಾಗೂ ವೈದ್ಯರಿಗೆ ಕೊರತೆಯಿದ್ದ ಸಮಯದಲ್ಲಿ ಉಚಿತವಾಗಿಯೇ ಹದಿನೈದು ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿರುವ ಮಹಾತಾಯಿ ಸೂಲಗಿತ್ತಿ ನರಸಮ್ಮನವರು ಅನಾರೋಗ್ಯದಿಂದ ವಿಧಿವಶರಾಗಿರುವ ಸುದ್ದಿ ತಿಳಿದು ತೀವ್ರ
ದು:ಖವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಎಚ್.ಡಿ.ದೇವೇಗೌಡರು ಟ್ವೀಟ್‌ನಲ್ಲಿ ಸಂತಾಪ ಸಲ್ಲಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ಸಂದೇಶ ನೀಡಿದ್ದು, ಸೂಲಗಿತ್ತಿ ನರಸಮ್ಮ ಅವರು ನಿಧನರಾದ ವಿಷಯ ತಿಳಿದು ದು:ಖವಾಯಿತು. ಗ್ರಾಮೀಣ ಪ್ರದೇಶದಲ್ಲಿ ಜನಿಸಿ ಆ ಭಾಗದ ಮಹಿಳೆಯರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.