ರಾಜೇಂದ್ರರಿಂದ ರಾಮನಾಥರ ವರೆಗೆ ಪೇಜಾವರರ ಪಯಣ

Team Udayavani, Dec 26, 2018, 11:49 AM IST

swamiji.jpg

ಉಡುಪಿ: ದೇಶದ ಪ್ರಥಮ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್‌ ಅವರಿಂದ ಹಿಡಿದು ಉಡುಪಿಗೆ ಗುರುವಾರ ಆಗಮಿಸುವ ಈಗಿನ 14ನೇ ರಾಷ್ಟ್ರಪತಿ ರಾಮನಾಥ ಕೋವಿಂದರವರೆಗೆ ಸಂಪರ್ಕ ಹೊಂದಿದ ಸಮಕಾಲೀನ ಅಪರೂಪದ ಸ್ವಾಮಿಗಳು ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು.

ಗ್ಯಾನಿ ಜೈಲ್‌ ಸಿಂಗ್‌ ರಾಷ್ಟ್ರಪತಿಗಳಾಗಿದ್ದ ಸಂದರ್ಭ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದಾಗ  ಪೇಜಾವರ ಶ್ರೀಗಳ ವಿದ್ಯಾಗುರು ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಮಾನ್ಯತೀರ್ಥರು ಪರ್ಯಾಯ ಪೀಠಾರೂಢರಾಗಿದ್ದರು (1986-87). ಈಗ ರಾಮನಾಥ ಕೋವಿಂದರು ಬರುವಾಗ ಶ್ರೀ ವಿದ್ಯಾ ಮಾನ್ಯರ ಪಟ್ಟಶಿಷ್ಯ ಶ್ರೀ ವಿದ್ಯಾಧೀಶ ತೀರ್ಥರು ಪರ್ಯಾಯ ಸ್ವಾಮಿಗಳು. ಹಿಂದಿನ ವಿವಿಧ ರಾಷ್ಟ್ರಪತಿಗಳು ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರೂ, ಆ ಸಂದರ್ಭ ಪೇಜಾವರ ಶ್ರೀಗಳು ಉಪಸ್ಥಿತರಿದ್ದರೂ ಪೇಜಾವರ  ಪರ್ಯಾಯದ ಅವಧಿಯಲ್ಲಿ ರಾಷ್ಟ್ರಪತಿಗಳಾಗಿ ಶ್ರೀಕೃಷ್ಣಮಠಕ್ಕೆ ಬಂದದ್ದು ಪ್ರಣವ್‌ ಮುಖರ್ಜಿ ಮಾತ್ರ. ಇದು 2017ರ ಜೂನ್‌ 18ರಂದು. ಮುಖರ್ಜಿಯವರು ಪೇಜಾವರ ಶ್ರೀಗಳ ಐದನೆಯ ಐತಿಹಾಸಿಕ ಪರ್ಯಾಯದ ಉತ್ತರಾರ್ಧ ಅವಧಿಯಲ್ಲಿ ಆಗಮಿಸಿದ್ದರು. 
ಪೇಜಾವರ ಶ್ರೀಗಳ ವಿದ್ಯಾಗುರು ಶ್ರೀ ವಿದ್ಯಾಮಾನ್ಯತೀರ್ಥರು 1960ರ ದಶಕದಲ್ಲಿ ದಿಲ್ಲಿಯಲ್ಲಿ ನಡೆಸಿದ ಯಾಗದಲ್ಲಿ ಅಂದಿನ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್‌ ಪಾಲ್ಗೊಂಡಿದ್ದರು. ರಾಜೇಂದ್ರ ಪ್ರಸಾದ್‌ ಅವರು ರಾಷ್ಟ್ರಪತಿಯಾದಾಗ ಪೇಜಾವರ ಶ್ರೀಗಳು ಹೈದರಾಬಾದ್‌ನಲ್ಲಿ ಆಯೋಜಿಸಿದ ತಣ್ತೀಜ್ಞಾನ ಸಮ್ಮೇಳನವನ್ನು ಉದ್ಘಾಟಿಸಿದ್ದರು. 

ಇಂದಿರಾಗಾಂಧಿ, ಪಿ.ವಿ.ನರಸಿಂಹ ರಾವ್‌, ವಿ.ಪಿ.ಸಿಂಗ್‌, ಎಚ್‌.ಡಿ.ದೇವೇಗೌಡ, ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿರುವಾಗ ಮತ್ತು ಈಗಿನ ಪ್ರಧಾನಿ ನರೇಂದ್ರ ಮೋದಿಯವರನ್ನು ಪೇಜಾವರ ಶ್ರೀಗಳು ಭೇಟಿ ಮಾಡಿದ್ದರು. ಇವರಲ್ಲಿ ಬಹುತೇಕರು ಉಡುಪಿಗೆ ಆಗಮಿಸಿದ್ದರು. ಪೇಜಾವರ ಶ್ರೀಗಳ ಪರ್ಯಾಯ ಅವಧಿಯಲ್ಲಿ (2000-01) ಪ್ರಧಾನಿಯಾಗಿದ್ದ ವಾಜಪೇಯಿಯವರು ರಾಜಾಂಗಣ ಉದ್ಘಾಟಿಸಿದ್ದರು.ಈಗ ರಾಮನಾಥ ಕೋವಿಂದ್‌ ಆಗಮಿಸುತ್ತಿರುವುದು ವಿಶೇಷವಾಗಿ ಕೇಂದ್ರ ಸಚಿವೆ ಉಮಾಶ್ರೀ ಭಾರತಿಯವರ ಪ್ರಯತ್ನದಿಂದ. ಪೇಜಾವರ ಶ್ರೀಗಳಿಂದ ಸನ್ಯಾಸ ಸ್ವೀಕರಿಸಿದ ಉಮಾಶ್ರೀ ಭಾರತಿಯವರು ಗುರುಭಕ್ತಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

ರಾಷ್ಟ್ರಪತಿಗಳಾಗಿದ್ದ ಆರ್‌. ವೆಂಕಟ್ರಾಮನ್‌ ಉಪರಾಷ್ಟ್ರಪತಿಗಳಾಗಿದ್ದಾಗ ಪೇಜಾವರ ಶ್ರೀಗಳ ಮೂರನೆಯ ಪರ್ಯಾಯದಲ್ಲಿ (1984-85 ಅವಧಿ, 7-12- 1985ರಂದು) ಶ್ರೀಕೃಷ್ಣಧಾಮ ಛತ್ರ ಉದ್ಘಾಟಿಸಿದ್ದರು. ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸುವಾಗ ದಿಲ್ಲಿಯಲ್ಲಿ ಶ್ರೀಗಳನ್ನು ಭೇಟಿ ಮಾಡಿದ್ದರು. ಡಾ| ಶಂಕರದಯಾಳ್‌ ಶರ್ಮ ಅವರು ಪುತ್ತಿಗೆ ಮಠದ ಪರ್ಯಾಯದಲ್ಲಿ (1992-93) ಗೀತಾ ಮಂದಿರಕ್ಕೆ ಶಿಲಾನ್ಯಾಸ ನಡೆಸಿದ್ದರು. ಅದಕ್ಕೂ ಹಿಂದೆ ಉಪರಾಷ್ಟ್ರಪತಿಗಳಾಗಿದ್ದ ಬಿ.ಡಿ.ಜತ್ತಿ, ಕೃಷ್ಣಕಾಂತ್‌, ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಡಾ|ಅಬ್ದುಲ್‌ ಕಲಾಂ (ಕಾಣಿಯೂರು ಮಠದ ಪರ್ಯಾಯ 2014-15) ಉಡುಪಿಗೆ ಆಗಮಿಸಿದ್ದರು. ಪೇಜಾವರ ಶ್ರೀಗಳವರನ್ನು ಡಾ| ಶಂಕರದಯಾಳ್‌ ಶರ್ಮ ದಿಲ್ಲಿಯಲ್ಲಿ, ಡಾ|ಕಲಾಂ ಬೆಂಗಳೂರಿನ ವಿದ್ಯಾಪೀಠದಲ್ಲಿ, ವಿ.ವಿ.ಗಿರಿಯವರು ಹೈದರಾಬಾದ್‌ನಲ್ಲಿ ರಾಷ್ಟ್ರಪತಿಯಾಗಿರುವಾಗ ಭೇಟಿ ಮಾಡಿದ್ದರು.

ಟಾಪ್ ನ್ಯೂಸ್

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.