156 ತಾಲೂಕಲ್ಲಿ ಬರ: 20 ಸಾವಿರ ಕೋಟಿ ರೂ. ನಷ್ಟದ ಅಂದಾಜು
Team Udayavani, Dec 27, 2018, 6:32 AM IST
ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ಇಡೀ ರಾಜ್ಯ ಬರಪೀಡಿತವಾಗಿದೆ. ರಾಜ್ಯ ಸರ್ಕಾರವೇ 156 ತಾಲೂಕುಗಳನ್ನು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ.
ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ 100 ತಾಲೂಕು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ ಹಿಂಗಾರು ಮಳೆ ವೈಫಲ್ಯ ಹಿನ್ನೆಲೆಯಲ್ಲಿ ಇನ್ನೂ 56 ತಾಲೂಕು ಬರ ಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಬರ ಹಾಗೂ ಪ್ರವಾಹ
ಹಿನ್ನೆಲೆಯಲ್ಲಿ ಆಹಾರ ಉತ್ಪಾದನೆಯು ಕುಸಿತವಾಗಿದ್ದು, ಒಟ್ಟಾರೆ 20 ಸಾವಿರ ಕೋಟಿ ರೂ. ನಷ್ಟವುಂಟಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಘೋಷಿಸಿದ್ದಾರೆ.
ಬುಧವಾರ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದರು. ಈಗಾಗಲೇ 100 ಬರಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಶಾಸಕರ
ನೇತೃತ್ವದ ಟಾಸ್ಕ್ಫೋರ್ಸ್‌ಗೆ ಕಂದಾಯ ಇಲಾಖೆಯಿಂದ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಜತೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಒಟ್ಟು 1 ಕೋಟಿ ರೂ. ಬಿಡುಗಡೆ ಆದಂತಾಗಿದೆ ಎಂದು ಹೇಳಿದರು. ಈಗ ಬರಪೀಡಿತ ಎಂದು ಘೋಷಣೆ ಮಾಡಿರುವ 56 ತಾಲೂಕುಗಳಿಗೆ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಮತ್ತೆ 25 ಲಕ್ಷ ರೂ. ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು