ಸರ್ಕಾರಿ ಗೌರವದೊಂದಿಗೆ ಸೂಲಗಿತ್ತಿ ನರಸಮ್ಮ ಅಂತ್ಯಸಂಸ್ಕಾರ
Team Udayavani, Dec 27, 2018, 7:24 AM IST
ತುಮಕೂರು: ಸೂಲಗಿತ್ತಿ ಡಾ.ನರಸಮ್ಮ (97) ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರ ಸಮೀಪದ ಗಂಗಸಂದ್ರದಲ್ಲಿ ಬುಧವಾರ ಸಂಜೆ ನೆರವೇರಿತು. ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾದ ನರಸಮ್ಮ ಅವರ ಪಾರ್ಥಿವ
ಶರೀರವನ್ನು ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಚಿವರು, ಶಾಸಕರು, ಸಂಸದರು,
ಮಠಾಧೀಶರು ಸೇರಿದಂತೆ ಗಣ್ಯರು ಆಗಮಿಸಿ ಅವರ ಅಂತಿಮ ದರ್ಶನ ಪಡೆದರು. ಈ ಮಧ್ಯೆ, ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತ
ನಗರ ಸಮೀಪವೇ ಎರಡು ಮೂರು ಕಡೆ ಜಾಗ ತೋರಿಸಿತಾದರೂ ಕುಟುಂಬ ಸದಸ್ಯರು ಒಪ್ಪಲಿಲ್ಲ. ಹೀಗಾಗಿ, ಬುಧವಾರ ಮಧ್ಯಾಹ್ನ 2 ಗಂಟೆಯಾದರೂ ಜಾಗದ ಸಮಸ್ಯೆ ಬಗೆಹರಿಯಲಿಲ್ಲ. ನರಸಮ್ಮ ಕುಟುಂಬ ಸದಸ್ಯರು ನಗರದ ಹತ್ತಿರದಲ್ಲಿಯೇ ಅಂತಿಮ
ಸಂಸ್ಕಾರ ಮಾಡಬೇಕು. ಇದಕ್ಕಾಗಿ ಒಂದು ಎಕರೆ ಜಾಗ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಕೊನೆಗೆ ನಗರ ಸಮೀಪದ ಗಂಗಸಂದ್ರ ಸ್ಮಶಾನದ ಸಮೀಪ ಒಂದು ಎಕರೆ ಜಾಗ ನೀಡಲು ಜಿಲ್ಲಾಡಳಿತ ನಿರ್ಧರಿಸಿತು. ಕುಟುಂಬದವರು ಒಪ್ಪಿಗೆ ಸೂಚಿಸಿದ್ದರಿಂದ ಸರಕಾರಿ ಗೌರವಗಳೊಂದಿಗೆ ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.