ಮೂರು ದಿನಗಳ ಸೋಲಿಗೆ ಬ್ರೇಕ್‌: ಸೆನ್ಸೆಕ್ಸ್‌ 350ಕ್ಕೂ ಅಧಿಕ ಅಂಕ ಜಂಪ್


Team Udayavani, Dec 27, 2018, 10:49 AM IST

sensex-musings1-700.jpg

ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಕಂಡು ಬಂದ ಭಾರೀ ತೇಜಿಯನ್ನು ಅನುಸರಿಸಿದ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 350ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು. 

ಕಳೆದ ಮೂರು ದಿನಗಳ ನಿರಂತರ ಸೋಲಿನ ಹಾದಿಯಲ್ಲಿ ಸಾಗಿ ಬಂದಿದ್ದ ಮುಂಬಯಿ ಶೇರು ಪೇಟೆ 180 ಅಂಕಗಳ ನಷ್ಟವನ್ನು ಅನುಭವಿಸಿತ್ತು. 

ಇಂದು ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್‌ 279.79 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,929.73 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 76.70 ಅಂಕಗಳ ಮುನ್ನಡೆಯೊಂದಿಗೆ 10,806.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ 19 ಪೈಸೆಗಳ ಕುಸಿತಕ್ಕೆ ಗುರಿಯಾಗಿ 70.25 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಈ ವರ್ಷ ನಾಲ್ಕು ಬಾರಿ ಬಡ್ಡಿ ದರ ಏರಿಸುವ ಮೂಲಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಕೆಂಗಣ್ಣಿಗೆ ಗುರಿಯಾಗಿದ್ದ ಫೆಡರಲ್‌ ರಿಸರ್ವ್‌ ಬ್ಯಾಂಕಿನ ಅಧ್ಯಕ್ಷರನ್ನು ತಾನು ಹುದ್ದೆಯಿಂದ ಕಿತ್ತು ಹಾಕುವುದಿಲ್ಲವೆಂದು ಟ್ರಂಪ್‌ ಆಡಳಿತೆ ಭರವಸೆ ನೀಡಿದುದನ್ನು ಅನುಸರಿಸಿ ಅಮೆರಿಕ ಶೇರು ಮಾರುಕಟ್ಟೆಯಲ್ಲಿ  ಭರಾಟೆಯ ಖರೀದಿ ಕಂಡು ಬಂದಿತು. ಅಂತೆಯೇ ಏಶ್ಯನ್‌ ಶೇರು ಪೇಟೆಗಳು ಇಂದು ಗರಿಗೆದರಿದವು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ರಿಲಯನ್ಸ್‌, ಇನ್‌ಫೋಸಿಸ್‌, ಟಿಸಿಎಸ್‌, ಎಸ್‌ ಬ್ಯಾಂಕ್‌, ಮಾರುತಿ ಸುಜುಕಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಇನ್‌ಫೋಸಿಸ್‌, ಟೆಕ್‌ ಮಹೀಂದ್ರ, ಟಿಸಿಎಸ್‌, ಹಿಂಡಾಲ್ಗೊ, ರಿಲಯನ್ಸ್‌; ಟಾಪ್‌ ಲೂಸರ್‌ಗಳು : ಬಿಪಿಸಿಎಲ್‌, ಎಚ್‌ಪಿಸಿಎಲ್‌, ಪವರ್‌ ಗ್ರಿಡ್‌ ಕಾರ್ಪ್‌, ಐಓಸಿ, ಭಾರ್ತಿ ಏರ್‌ಟೆಲ್‌. 

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.