ಬ್ಯಾಂಕ್‌ಗಳ ವಿಲೀನಕ್ಕೆ ನೌಕರರ ವಿರೋಧ
Team Udayavani, Dec 27, 2018, 11:55 AM IST
ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕುಗಳ ವಿಲೀನ ಪ್ರಕ್ರಿಯೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ ಅಖೀಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾ ಒಕ್ಕೂಟ, ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯುನಿಯನ್ಸ್ ಮತ್ತು ಬ್ಯಾಂಕ್ ನೌಕರರು ಹಾಗೂ ಇತರೆ ಸಂಘಟನೆಗಳ ಸದಸ್ಯರು ಬುಧವಾರ ಕೆಂಪೇಗೌಡ ರಸ್ತೆಯ ಮೈಸೂರು ಬ್ಯಾಂಕ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಿರ್ಧಾರ ಅಸಮರ್ಥನೀಯವಾಗಿದ್ದು, ದೇಶದ ಆರ್ಥಿಕತೆ ಮತ್ತು ಸಾರ್ವಜನಿಕರ ವಹಿವಾಟಿನ ಮೇಲೆ ಗಂಭೀರ ಪರಿಣಾಮ ಬೀಳಲಿದೆ. ಅಲ್ಲದೆ, ಬ್ಯಾಂಕ್ ನೌಕರರಿಗೆ ಉದ್ಯೋಗದ ಅಭದ್ರತೆ ಕಾಡಲಿದ್ದು, ಮುಂದಿನ ದಿನಗಳಲ್ಲಿ ಉದ್ಯೋಗಾವಕಾಶಗಳಿಗೂ ಕುತ್ತು ಬರಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈಗಾಗಲೇ ಭಾರತೀಯ ಸ್ಟೇಟ್ ಬ್ಯಾಂಕ್ ಜತೆ ಕೆಲ ಬ್ಯಾಂಕ್‌ಗಳ ವಿಲೀನ ಮಾಡಿರುವುದರಿಂದ ಹಾನಿಕಾರಕ ಪರಿಣಾಮಗಳಾಗಿವೆ. ಇದರಿಂದ ಸ್ಟೇಟ್ ಬ್ಯಾಂಕ್ ತನ್ನ ಬ್ಯಾಲೆನ್ಸ್ ಶೀಟ್‌ನಲ್ಲಿ ನಷ್ಟ ತೋರಿಸಿದೆ. ಅನೇಕ ಶಾಖೆಗಳನ್ನು ಮುಚ್ಚಲಾಗಿದೆ. ಸಿಬ್ಬಂದಿ ಕೊರತೆ ಎದುರಾಗಿದೆ. ವ್ಯಾಪಾರ ವಹಿವಾಟುಗಳು ಕುಂಠಿತಗೊಂಡಿವೆ.
ಮರು ಪಾವತಿಯಾಗದ ಸಾಲಗಳು ಹೆಚ್ಚಾಗಿವೆ.
ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕ್‌ಗಳ ವಿಲೀನದಿಂದ ಇದೇ ರೀತಿಯ ಪರಿಣಾಮ ಎದುರಾಗಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಬ್ಯಾಂಕ್‌ಗಳ ವಿಲೀನದ ಮಾಡುವ ಬದಲು,
ವಿಸ್ತರಣೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲ ವಾಗುತ್ತದೆ. ಬೇರೆ ದೇಶಗಳಿಗೆ ಹೊಲಿಸಿದರೆ ನಮ್ಮ ದೇಶದಲ್ಲಿ ಬ್ಯಾಂಕ್‌ಗಳ ವಿಸ್ತರಣೆ ಹೆಚ್ಚಾಗಿಲ್ಲ. ಸುಸ್ತಿ ಸಾಲಗಳ ಮರುಪಾವತಿ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡು ಬ್ಯಾಂಕಿಂಗ್ ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕಿದೆ. ಆದರೆ, ಕೇಂದ್ರ ಸರ್ಕಾರ ವಿಲೀನದ ಮೂಲಕ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಮುಂದಾಗಿದೆ ಎಂದು ದೂರಿದರು. ವಿಲೀನ ಮಾಡುವುದರಿಂದ ಬ್ಯಾಂಕ್‌ಗಳ ಮುಚ್ಚುವಿಕೆ, ಕೆಲಸದ ಅಭದ್ರತೆ ಮತ್ತು ಉದ್ಯೋಗ ವಕಾಶಗಳ ಕೊರತೆ ಉಂಟಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ನಿಲ್ಲಿಸಿ, ಬ್ಯಾಂಕ್‌ಗಳ ಅಭಿ ವೃದ್ಧಿಯತ್ತ ಗಮನ ಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಅಖೀಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಎಸ್.ಕೆ.ಶ್ರೀನಿವಾಸ್, ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯುನಿಯನ್ಸ್‌ನ ಸದಸ್ಯರು ಹಾಗೂ ಇತರೆ ಬ್ಯಾಂಕ್ ನೌಕರರು ಹಾಗೂ ಇತರೆ ಸಂಘಟನೆಗಳ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.