ಜಿಎಸ್‌ಟಿ ಪರಿಹಾರ ಅವಧಿ ವಿಸ್ತರಿಸಿ


Team Udayavani, Dec 28, 2018, 6:00 AM IST

61.jpg

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಗುರುವಾರ ಕೇಂದ್ರ ಸಚಿವರಾದ ಅರುಣ್‌ ಜೇಟ್ಲಿ, ಪಿಯೂಷ್‌ ಗೋಯೆಲ್‌ ಹಾಗೂ ಸುರೇಶ್‌ ಪ್ರಭು ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಪಟ್ಟ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಜೇಟ್ಲಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಜಿಎಸ್‌ಟಿ ಅನುಷ್ಠಾನ ಕುರಿತಂತೆ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ತೆರಿಗೆ ಸಂಗ್ರಹಣೆ ಕುರಿತು ಅಂಕಿ-ಅಂಶಗಳ ಸಹಿತ ಮನವರಿಕೆ ಮಾಡಿಕೊಟ್ಟರು.

ಜಿಎಸ್‌ಟಿ ಜಾರಿಯಾಗುವ ಮುನ್ನ ರಾಜ್ಯ ಸರ್ಕಾರದ ವಾರ್ಷಿಕ ತೆರಿಗೆ ಸಂಗ್ರಹ ಪ್ರಮಾಣ ಏರುಗತಿಯಲ್ಲಿತ್ತು. “ವ್ಯಾಟ್‌’ ವ್ಯವಸ್ಥೆಯಿದ್ದಾಗ ರಾಜ್ಯ ಸರ್ಕಾರವು ತೆರಿಗೆ ಸಂಗ್ರಹದಲ್ಲಿ ಸರಾಸರಿ ಶೇ.10ರಿಂದ ಶೇ.12ರಷ್ಟು ವಾರ್ಷಿಕ ವೃದಿಟಛಿ ದರ ಹೊಂದಿತ್ತು. ಆದರೆ, ಜಿಎಸ್‌ಟಿ ವ್ಯವಸ್ಥೆ ಅಳವಡಿಸಿಕೊಂಡ ಬಳಿಕ ತೆರಿಗೆ ಸಂಗ್ರಹದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ. ರಾಜ್ಯ ಸರ್ಕಾರ ನಿರೀಕ್ಷಿಸಿದ್ದ ತೆರಿಗೆ ಸಂಗ್ರಹ ಪ್ರಮಾಣಕ್ಕಿಂತಲೂ ಶೇ.20ರಷ್ಟು ಕೊರತೆ ಕಂಡು ಬಂದಿದೆ. ಜಿಎಸ್‌ಟಿ ಅನುಷ್ಠಾನದಲ್ಲಿ ಕರ್ನಾಟಕ, ದೇಶದ ಉಳಿದ ರಾಜ್ಯಗಳಿಗೆ ಮಾದರಿಯಾಗಿದೆ. ಹಾಗಿದ್ದರೂ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪರೋಕ್ಷ ತೆರಿಗೆ ಸಂಗ್ರಹವಾಗುತ್ತಿಲ್ಲ. ಪರಿಣಾಮವಾಗಿ ರಾಜ್ಯದ ನಾನಾ ಯೋಜನೆಗಳಿಗೆ ಅನುದಾನದ ಕೊರತೆ ತಲೆದೋರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡುವ ಜಿಎಸ್‌ಟಿ ಪರಿಹಾರದ ನೆರವನ್ನು 2025ರವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಪಿಯೂಷ್‌ ಗೋಯೆಲ್‌ ಭೇಟಿ: ಕೇಂದ್ರ ಕಲ್ಲಿದ್ದಲು ಮತ್ತು ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌ ಅವರನ್ನು ಭೇಟಿ ಮಾಡಿದ ಸಿಎಂ, ರಾಯಚೂರಿನ ಆರ್‌ಟಿಪಿಎಸ್‌, ಬಳ್ಳಾರಿಯ ಬಿಟಿಪಿಎಸ್‌ ಹಾಗೂ ಯರಮರಸ್‌ನ ವೈಟಿಪಿಎಸ್‌ ಉಷ್ಣ ವಿದ್ಯುತ್‌ ಸ್ಥಾವರಗಳಿಗೆ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ಹಂಚಿಕೆಗೆ ಕ್ರಮ ಕೈಗೊಳ್ಳಬೇಕು. ಆರ್‌ಟಿಪಿಎಸ್‌ನಲ್ಲಿ ಕಲ್ಲಿದ್ದಲು ಸಂಗ್ರಹ ಕಡಿಮೆಯಿರುವ ಹಿನ್ನೆಲೆಯಲ್ಲಿ ಕೂಡಲೇ ಕಲ್ಲಿದ್ದಲು ಪೂರೈಕೆಗೆ ವೆಸ್ಟರ್ನ್ ಕೋಲ್‌ಫಿಲ್ಡ್‌ ಲಿಮಿಟೆಡ್‌ ಹಾಗೂ ಕೋಲ್‌ ಇಂಡಿಯಾ ಲಿಮಿಟೆಡ್‌ಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು. ಹಾಗೆಯೇ, ಹೈ-ಕ ಭಾಗದ ಅತಿ ಹಿಂದುಳಿದ ಬೀದರ್‌ನಿಂದ ನಾಂದೇಡ್‌ಗೆ ರೈಲ್ವೆ ಸಂಪರ್ಕ ಕಲ್ಪಿಸಬೇಕು. ಬೀದರ್‌- ಔರಾದ್‌- ದೀಗುಲ- ನಾಂದೇಡ್‌ ಮಾರ್ಗವಾಗಿ 154 ಕಿ.ಮೀ.ಉದ್ದದ ಹೊಸ ರೈಲು ಮಾರ್ಗ ಕುರಿತ ಸಮೀಕ್ಷಾ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ಈ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಬೇಕು ಎಂದು ಕೋರಿದರು.

ಸುರೇಶ್‌ ಪ್ರಭು ಭೇಟಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರನ್ನು ಭೇಟಿಯಾಗಿ, ರಾಜ್ಯದ ನಾನಾ ವಿಮಾನನಿಲ್ದಾಣಗಳ ಅಭಿವೃದಿಟಛಿ ಕುರಿತು ಚರ್ಚೆ ನಡೆಸಿದರು. ಕಲಬುರಗಿ ವಿಮಾನನಿಲ್ದಾಣದ ಸಿವಿಲ್‌ ಕಾಮಗಾರಿ ಪೂರ್ಣಗೊಂಡಿದ್ದು, ನಾನಾ ವಿಮಾನಯಾನ ಕಂಪನಿಗಳು ಕಾರ್ಯಾಚರಣೆ ಆರಂಭಿಸಲು ಆಸಕ್ತಿ ತೋರಿವೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ಎಸ್‌ಪಿವಿ ರಚನೆಯಾಗು ವವರೆಗೆ ಕಾಯದೆ ಕೂಡಲೇ ಕಲಬುರಗಿ ವಿಮಾನನಿಲ್ದಾಣವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ನಿರ್ದೇಶನ ನೀಡುವಂತೆ ಕೋರಿದರು.

ಎಸ್‌ಪಿವಿ ಮೂಲಕ ರಾಜ್ಯ ಸರ್ಕಾರವು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಹಾಗೂ ಕಾರವಾರಗಳಲ್ಲಿ ವಿಮಾನ ನಿಲ್ದಾಣ ಅಭಿವೃದಿಟಛಿಪಡಿಸಲು ಉದ್ದೇಶಿಸಿದೆ. ಬೀದರ್‌ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡು ಕಾರ್ಯಾಚರಣೆಗೆ ಸಜ್ಜಾಗಿದ್ದು, ಜಿಎಚ್‌ಈಎಎಲ್‌ನೊಂದಿಗೆ ಒಪ್ಪಂದ ಅಂತಿಮ ಹಂತದಲ್ಲಿದೆ. ಶೀಘ್ರವೇ ಒಪ್ಪಂದಕ್ಕೆ ಸಹಿ ಮಾಡುವಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು. ಯಲಹಂಕದಲ್ಲಿರುವ ಭಾರತೀಯ ವಾಯುಪಡೆಯು ಹೆಲಿಕಾಪ್ಟರ್‌ ತರಬೇತಿ ವಿಭಾಗವನ್ನು ಮೈಸೂರು ವಿಮಾನನಿಲ್ದಾಣಕ್ಕೆ ಸ್ಥಳಾಂತರಿಸಲು ಪ್ರಸ್ತಾವನೆ ಸಲ್ಲಿಸಿದೆ. ಪುಣೆ, ಶ್ರೀನಗರ, ಚಂಡೀಘಡ ವಿಮಾನನಿಲ್ದಾಣಗಳ ಮಾದರಿಯಲ್ಲಿ ಮೈಸೂರು ವಿಮಾನನಿಲ್ದಾಣವನ್ನೂ ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ನಾಗರಿಕ ಬಳಕೆ ಹಾಗೂ ಮಿಲಿಟರಿ ಬಳಕೆಗೆ ಅಗತ್ಯ ಸೌಲಭ್ಯ ಒದಗಿಸಲು ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ
ವಿಮಾನ ನಿಲ್ದಾಣದ ಮೇಲಿನ ಒತ್ತಡ ತುಸು ಕಡಿಮೆಯಾಗಿದೆ. ಭಾರತೀಯ ವಾಯುಪಡೆಗೆ ಮೈಸೂರು  ಮಾನನಿಲ್ದಾಣವನ್ನು
ವಾಯುಪಡೆಯ ಹೆಲಿಕಾಪ್ಟರ್‌ ಬೇಸ್‌ಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡಬೇಕು
ಎಂದು ಮನವಿ ಮಾಡಿದರು.

ಕುಂಭಮೇಳಕ್ಕೆ ಆಹ್ವಾನ
ಉತ್ತರ ಪ್ರದೇಶದ ಆರೋಗ್ಯ ಸಚಿವ ಸಿದಾಟಛಿರ್ಥನಾಥ್‌ ಸಿಂಗ್‌ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ,
ಉತ್ತರಪ್ರದೇಶದಲ್ಲಿ ನಡೆಯಲಿರುವ ಕುಂಭಮೇಳಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

ಟಾಪ್ ನ್ಯೂಸ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.