ಬೋಟ್ ಸುಳಿವು ಅಲಭ್ಯ: ಮುಂದುವರಿದ ಶೋಧ
Team Udayavani, Dec 29, 2018, 4:36 AM IST
ಮಲ್ಪೆ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಮೀನುಗಾರರ ಸುಳಿವು 14 ದಿನಗಳಾದರೂ ಲಭಿಸಿಲ್ಲ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಶೋಧ ಕಾರ್ಯಕ್ಕೆ ಹೋದ ಪೊಲೀಸರು ಮತ್ತು 10 ಮಂದಿ ಮೀನುಗಾರರ ತಂಡವು ಸಮುದ್ರ, ನದಿತೀರ ಮತ್ತು ಭೂಪ್ರದೇಶ ಭಾಗಗಳಲ್ಲಿ ಹುಡುಕಾಟ ನಡೆಸುತ್ತಿದ್ದು, ಯಾವುದೇ ಸುಳಿವು ಪತ್ತೆಯಾಗಿಲ್ಲ ಎನ್ನಲಾಗಿದೆ. ಡಿ. 15ರ ರಾತ್ರಿಯಿಂದ ಮೀನುಗಾರರ ಸಂಪರ್ಕ ಕಡಿತವಾಗಿತ್ತು. ಮಲ್ಪೆ, ಭಟ್ಕಳ ಮತ್ತು ಕುಮಟಾದ ತಲಾ ಇಬ್ಬರು, ಮಂಕಿಯ ಒಬ್ಬರು ನಾಪತ್ತೆಯಾದವರಲ್ಲಿ ಸೇರಿದ್ದಾರೆ.
ಕರಾವಳಿ ಪಡೆ ಬಲಪಡಿಸಿ: ಯಶ್‌ಪಾಲ್
ಉಡುಪಿ: ಮೀನುಗಾರರು ನಾಪತ್ತೆ ಹಿನ್ನೆಲೆಯಲ್ಲಿ ಸರಕಾರ ಎಚ್ಚೆತ್ತು ಕರಾವಳಿ ಕಾವಲು ಪೊಲೀಸ್ ಪಡೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಕರಾವಳಿ ಕಾವಲು ಪಡೆಗೆ ಸಿವಿಲ್ ಪೊಲೀಸರನ್ನೇ ನಿಯೋಜಿಸ ಲಾಗುತ್ತಿದೆ. ಕಡಲಿನ ವಾತಾವರಣಕ್ಕೆ ಒಗ್ಗಿಕೊಂಡು ಕೆಲಸ ಮಾಡಬಲ್ಲ ಸ್ಥಳೀಯರನ್ನೇ ನೇಮಿಸಬೇಕು. ನಾಪತ್ತೆಯಾಗಿರುವ ಮೀನುಗಾರರ ಮನೆಗಳಿಗೆ ಸಚಿವರು ತೆರಳಿ ಧೈರ್ಯ ತುಂಬಬೇಕು. ಕೇಂದ್ರ ಹಾಗೂ ಗೋವಾ ಸಚಿವರೊಂದಿಗೆ ಚರ್ಚಿಸಿದ್ದು, ಕರಾವಳಿ ಕಾವಲು ಪಡೆ ಶೋಧ ನಡೆಸುತ್ತಿದೆ ಎಂದರು.
ಸಮವಸ್ತ್ರ ಬೇಕು
ಮೀನುಗಾರಿಕೆಗೆ ತೆರಳುವವರಿಗೆ ಪ್ರತ್ಯೇಕ ಸಮವಸ್ತ್ರ ನೀಡಬೇಕು. ಇದರಿಂದ ನಮ್ಮ ರಾಜ್ಯದವರನ್ನು ಗುರುತಿಸಿ ಸಂವಹನ ನಡೆಸಲು ಅನುಕೂಲವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.