ಹಿಮಪಾತ: ಪ್ರವಾಸಿಗರ ರಕ್ಷಣೆ
Team Udayavani, Dec 30, 2018, 12:30 AM IST
ಸಿಲಿಗುರಿ: ಭಾರತ-ಚೀನಾ ಗಡಿ ಭಾಗದಲ್ಲಿರುವ ನಾಥುಲಾ ಎಂಬಲ್ಲಿ ಇತ್ತೀಚೆಗೆ ಉಂಟಾಗಿದ್ದ ಹಿಮಪಾತದಿಂದಾಗಿ ಈ ಭಾಗದಲ್ಲಿ ಸಿಲುಕಿಕೊಂಡಿದ್ದ ಪ್ರವಾಸಿಗರನ್ನು ಸೇನಾ ಕಾರ್ಯಾಚರಣೆಯ ಮೂಲಕ ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ ಪ್ರವಾಸಿಗರಿಗೆ ವಸತಿ ಸೌಕರ್ಯ ನೀಡುವ ಉದ್ದೇಶದಿಂದ ಸೈನಿಕರಿದ್ದ ಕ್ಯಾಂಪ್ಗ್ಳಲ್ಲಿನ ಬರಾಕ್ಗಳನ್ನು ಖಾಲಿ ಮಾಡಿಸಲಾಗಿದ್ದು, ಸೈನಿಕರಿದ್ದ ಬಿಡಾರಗಳಲ್ಲೇ ಪ್ರವಾಸಿಗರಿಗೆ ಉಳಿದುಕೊಳ್ಳಲು ಆಶ್ರಯ ಕಲ್ಪಿಸ ಲಾಗಿದೆ.
“ಸುಮಾರು 13,000 ಅಡಿಗಳ ಎತ್ತರದಲ್ಲಿರುವ ಪ್ರದೇಶದಲ್ಲಿ ಸುಮಾರು 90 ಪ್ರವಾಸಿಗರು ಸಿಲುಕಿದ್ದರು. ಇವರಲ್ಲಿ ಹೆಚ್ಚಿನವರು ಹಿರಿಯ ನಾಗರಿಕರು ಹಾಗೂ ಮಕ್ಕಳಿದ್ದರು. ಅವರನ್ನು ವಿಶೇಷ ಕಾರ್ಯಾಚರಣೆಗಳ ಮೂಲಕ 9,000 ಅಡಿಗಳಷ್ಟು ಎತ್ತರ ಪ್ರದೇಶಕ್ಕೆ ಕರೆತರಲಾಯಿತು. ಶುಕ್ರವಾರ ಸಂಜೆಯಿಂದ ಆರಂಭಗೊಂಡಿದ್ದ ಕಾರ್ಯಾಚರಣೆ ಶನಿವಾರ ಮಧ್ಯಾಹ್ನ ಮುಗಿದಿತ್ತು. ತೀವ್ರ ಹಿಮಬಾಧೆಯಿಂದಾಗಿ ಹಲವಾರು ಮಂದಿ ಅಸ್ವಸ್ಥರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಸೇನಾಧಿಕಾರಿ ಬ್ರಿಗೇಡಿಯರ್ ಧನ್ವಾಲ್ ತಿಳಿಸಿದ್ದಾರೆ.
ಕಾರ್ಯಾಚರಣೆ ಬಗ್ಗೆ ಮತ್ತಷ್ಟು ವಿವರಣೆ ನೀಡಿದ ಸಿಕ್ಕಿಂನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಇದು ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ಸೇನೆ ಕೈಗೊಂಡ ಅತಿ ದೊಡ್ಡ ಕಾರ್ಯಾಚರಣೆಯಾಗಿದೆ’ ಎಂದಿದ್ದಾರೆ. ಪ್ರವಾಸಿಗರ ಸುರಕ್ಷತೆಯ ಬಗ್ಗೆ ಮಾತನಾಡಿದ ಸಿಕ್ಕಿಂ ಜಿಲ್ಲಾಧಿಕಾರಿ ಕಪಿಲ್ ಮೀನಾ, “ಸದ್ಯಕ್ಕೆ ಸೈನಿಕರ ಶಿಬಿರಗಳಲ್ಲಿ ವಿಶ್ರಾಂತಿ ಪಡೆಯುತ್ತಿರುವ ಎಲ್ಲಾ ಪ್ರವಾಸಿಗರನ್ನು ಶನಿವಾರ ರಾತ್ರಿ ವೇಳೆಗೆ ಗ್ಯಾಂಗ್ಟಾಕ್ಗೆ ಕರೆತರಲಾಗುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.