ಡಾ| ಸಿಂಗ್ ಬಯಸಿದರಷ್ಟೇ ಪ್ರದರ್ಶನ: ನಟ ಖೇರ್
Team Udayavani, Dec 30, 2018, 12:30 AM IST
ಹೊಸದಿಲ್ಲಿ: “ದ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರವನ್ನು ಬಿಡುಗಡೆಗೂ ಮುನ್ನ ತಮಗೆ ತೋರಿಸಬೇಕೆಂದು ಮಾಜಿ ಪ್ರಧಾನಿ
ಡಾ| ಮನಮೋಹನ್ ಸಿಂಗ್ ಆಗ್ರಹಿಸಿದರೆ ಮಾತ್ರವೇ, ಅವರಿಗೆ ವಿಶೇಷ ಪ್ರದರ್ಶನ ಏರ್ಪಡಿಸುತ್ತೇವೆ. ಅವರನ್ನು ಬಿಟ್ಟು ಬೇರ್ಯಾರಿಗೂ ಅಂಥ ಕೋರಿಕೆ ಸಲ್ಲಿಸುವ ಅಧಿಕಾರವಿಲ್ಲ ಎಂದು ಹಿರಿಯ ನಟ ಅನುಪಮ್ ಖೇರ್ ತಿಳಿಸಿದ್ದಾರೆ.
ಚಿತ್ರದ ಬಿಡುಗಡೆಗೂ ಮುನ್ನ ತಮಗಾಗಿ ಚಿತ್ರದ ಪ್ರೀಮಿಯರ್ ಶೋ ಏರ್ಪಡಿಸ ಬೇಕೆಂದು ಮಹಾರಾಷ್ಟ್ರದ ಯುವ ಕಾಂಗ್ರೆಸ್ ಮಂಡಿಸಿರುವ ಬೇಡಿಕೆಗೆ ತುಸು ಖಾರ ವಾಗಿಯೇ ಪ್ರತಿಕ್ರಿಯಿಸಿರುವ ಖೇರ್, ಒಮ್ಮೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ದೊರೆತಾದ ಮೇಲೆ ಯಾರಾರಿಗೋ ಚಿತ್ರ ವನ್ನು ನಾವೇಕೆ ತೋರಿಸಬೇಕು? ಇದು ಪುಸ್ತಕ ಆಧಾರಿತ ಚಿತ್ರ. ಆ ಪುಸ್ತಕ ನೈಜ ಘಟನೆಗಳ ಆಧಾರಿತ. ಹಾಗಿರುವಾಗ ವಿವಾದ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಬಿಜೆಪಿಯನ್ನು ಬೆಂಬಲಿಸುವ ಸಲುವಾಗಿ ಚಿತ್ರದ ಪರ ನಿಂತಿದ್ದಾರೆ ಎಂಬ ಆರೋಪಗಳನ್ನು ಖೇರ್ ತಳ್ಳಿಹಾಕಿದ್ದು, ಚುನಾವಣೆ ಹೊಸ್ತಿಲಲ್ಲೇ ಚಿತ್ರ ಬಿಡುಗಡೆ ಮಾಡುತ್ತಿರುವುದರಲ್ಲಿ ತಪ್ಪೇನೂ ಇಲ್ಲ ಎಂದು ಚಿತ್ರ ನಿರ್ಮಾಪಕರ ನಡೆಯನ್ನು ಸಮರ್ಥಿಸಿ ಕೊಂಡಿದ್ದಾರೆ.
ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಸಿನೆಮಾವು ಒಂದು ಗಿಮಿಕ್ ಅಷ್ಟೆ. ಇಂಥ ಸಿನಿಮಾಗಳಿ ಗಾಗಿ ಆಡಳಿತಾರೂಢ ಬಿಜೆಪಿ ಹಣವನ್ನು ದುರ್ಬಳಕೆ ಮಾಡುತ್ತಿದೆ. ಅವರಿಗೇನು ಬೇಕೋ ಅದನ್ನು ಮಾಡಿಕೊಳ್ಳಲಿ. ಅಂಥ ಸಿನೆಮಾ ಬರುತ್ತದೆ, ಹೋಗುತ್ತದೆ. ಅದರ ಬಗ್ಗೆ ಕಮೆಂಟ್ ಮಾಡಲು ನಾವು ಇಚ್ಛಿಸುವುದಿಲ್ಲ.
ಅಹ್ಮದ್ ಪಟೇಲ್, ಕಾಂಗ್ರೆಸ್ ಹಿರಿಯ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.