ಇಸ್ರೇಲ್‌ ಮಾದರಿ ಬಳಿಕ ಈಗ ಗುಂಪು ಕೃಷಿ ಯೋಜನೆ


Team Udayavani, Dec 30, 2018, 12:30 AM IST

ban30121806.jpg

ಬೀದರ: ಸಾಲ ಮನ್ನಾ, ಇಸ್ರೇಲ್‌ ಮಾದರಿ ಕೃಷಿ ಬಳಿಕ ರೈತರ ಉತ್ತೇಜನಕ್ಕೆ ಸಮ್ಮಿಶ್ರ ಸರ್ಕಾರ ಮತ್ತೂಂದು ಹೆಜ್ಜೆ ಇರಿಸಿದೆ. ಸಹಕಾರ ಇಲಾಖೆ ಅಡಿಯಲ್ಲಿ ಗುಂಪು ಕೃಷಿ ಯೋಜನೆ (ಕೋ ಆಪರೇಟಿವ್‌ ಫಾರ್ಮಿಂಗ್‌) ಅನುಷ್ಠಾನಗೊಳಿಸಲು ಚಿಂತನೆ ನಡೆಸಿದ್ದು, ಬೀದರ್‌ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾಗೊಳಿಸಲು ಸಜ್ಜಾಗಿದೆ.

ಬರ ಮತ್ತು ಅತಿವೃಷ್ಟಿಯಿಂದ ಕೃಷಿ ಕ್ಷೇತ್ರ ಈಗ ಆಕರ್ಷಣೆ ಕಸುಬಾಗಿ ಉಳಿದಿಲ್ಲ. ರೈತ ಹೊಂದಿದ ಸ್ವಲ್ಪ ಜಮೀನು ಬಿಟ್ಟು ಆತನ ಮಕ್ಕಳು ಕೃಷಿಯಿಂದ ವಿಮುಖರಾಗಿ ಪಟ್ಟಣದತ್ತ ಮುಖ ಮಾಡುತ್ತಿದ್ದಾರೆ. ರೈತರು ಕೃಷಿ ಕಾರ್ಯ ಕೈಗೊಂಡು ಕೈ ಸುಟ್ಟುಕೊಳ್ಳುವುದಕ್ಕಿಂತ ಪಾಳು ಬಿಡುವುದೇ ಉತ್ತಮವೆಂದು ಭಾವಿಸುತ್ತಿರುವ ಇಂಥ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹೊಸ ನೀತಿ ಜಾರಿಗೊಳಿಸಿ ಕೃಷಿ ಚಟುವಟಿಕೆಗೆ ಪ್ರೋತ್ಸಾಹಕ್ಕೆ ಸಿದ್ಧತೆ ನಡೆಸಿದೆ.

ಏನಿದು ಗುಂಪು ಕೃಷಿ ಯೋಜನೆ?: ಸ್ವಸಹಾಯ ಸಂಘದ ಮಾದರಿಯಲ್ಲಿಯೇ ರೈತರ ಗುಂಪು ರಚಿಸಿ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶ ಇದಾಗಿದೆ. ಒಂದು ಗ್ರಾಮದ 50ರಿಂದ 100 ಜನ ರೈತರನ್ನು ಒಂದೆಡೆ ಸೇರಿಸಿ ಸಭೆ ನಡೆಸಿ, ಗುಂಪು ರಚಿಸಲಾಗುತ್ತದೆ. ರೈತರ ಭೂಮಿಯ ಮಣ್ಣು ಪರೀಕ್ಷೆ ನಡೆಸಿ, ಯಾವ ಭೂಮಿಯಲ್ಲಿ ಯಾವ ಬೆಳೆ ಬೆಳೆಯಬೇಕು ಎಂದು ಕೃಷಿ ವಿಜ್ಞಾನಿಗಳಿಂದ ರೈತರಿಗೆ ಸಲಹೆ ನೀಡಲಾಗುತ್ತದೆ. ನಂತರ ಆ ಬೆಳೆಗಳನ್ನು ಯಾವ ಪದ್ಧತಿಯಲ್ಲಿ ಬೆಳೆಸಬೇಕು ಎಂದು ಕೃಷಿ ತಜ್ಞರು ಮಾರ್ಗದರ್ಶನ ನೀಡುತ್ತಾರೆ. ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಯಂತ್ರೋಪಕರಣ, ಕೃಷಿ ಸಲಕರಣೆಗಳು, ಉಳುಮೆಗೆ ಬೇಕಾಗುವ ಅನುದಾನವನ್ನು ರೈತರಿಗೆ ಸಾಲದ ರೂಪದಲ್ಲಿ ಆಯಾ ಗುಂಪುಗಳಿಗೆ ನೀಡಲಾಗುತ್ತದೆ. ಬಿತ್ತನೆ ಬೀಜದಿಂದ ಮಾರಾಟದ ವಿವಿಧ ಹಂತದವರೆಗೆ ಎಲ್ಲ ಬಗೆಯ ಮೌಲ್ಯವ ರ್ಧಿತ ನೆರವನ್ನು ಗುಂಪುಗಳಿಗೆ ಸರ್ಕಾರ ನೀಡುತ್ತದೆ.

ಸರ್ಕಾರಗಳು ಸಾಲ ಮನ್ನಾದಂಥ ತಾತ್ಕಾಲಿಕ ಉಪಶಮನಕ್ಕೆ ಕೊಟ್ಟಷ್ಟು ಆದ್ಯತೆಯನ್ನು ಸಮಗ್ರ ಕೃಷಿ ಪದ್ಧತಿ ಬದಲಾಯಿಸಲು ನೀಡಿಲ್ಲ ಎಂದು ರೈತರು ಆರೋಪಿಸುವುದು ಸಾಮಾನ್ಯ. ಕೃಷಿ ಈಗಲೂ ಮಳೆಯನ್ನೇ ಅವಲಂಬಿಸಿದೆ. ಬರ ಬಂದ ಸಂದರ್ಭದಲ್ಲಿ ಹಾಕಿದ ಬಂಡವಾಳವೂ ಕೈಗೆ ಬಾರದೆ ಹತಾಶರಾಗುತ್ತಿರುವ ರೈತರು ಸಾಲ ತೀರಿಸುವ ದಾರಿ ಕಾಣದೆ  ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ. ಸರ್ಕಾರದ ಈ ಹೊಸ ಯೋಜನೆ ರೈತರ ಜೀವನ ಬದಲಿಸುತ್ತದೆಯೇ ಎಂದು ಕಾಯ್ದು ನೋಡಬೇಕಿದೆ.

ರೈತರ ಅಭಿವೃದ್ಧಿ ಹಿನ್ನೆಲೆಯಲ್ಲಿ ಗುಂಪು ಕೃಷಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ನೆರವು ನೀಡುವಂತೆ ಈಗಾಗಲೇ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅವರು ಯೋಜನೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ. ಅಲ್ಲದೇ, ಎನ್‌ಸಿಡಿಎಕ್ಸ್‌ ಅಧ್ಯಕ್ಷರನ್ನು ಭೇಟಿಯಾಗಿದ್ದು, ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಯೋಜನೆ ದೇಶದಲ್ಲಿಯೇ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ರೈತರೇ ಸರ್ಕಾರಕ್ಕೆ ಸಾಲ ನೀಡುವಂತಾಗುತ್ತದೆ.
– ಬಂಡೆಪ್ಪ ಖಾಶೆಂಪೂರ, ಸಹಕಾರ ಸಚಿವ

ಟಾಪ್ ನ್ಯೂಸ್

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.