ಬಯಲು ಶೌಚ ಮುಕ್ತ ಪಾಲಿಕೆ!


Team Udayavani, Dec 30, 2018, 6:47 AM IST

bayalu.jpg

ಬೆಂಗಳೂರು: ಕೇಂದ್ರ ಸರ್ಕಾರದ “ಸ್ವತ್ಛ ಸರ್ವೆಕ್ಷಣ್‌’ ಅಭಿಯಾನದಲ್ಲಿ ಈ ಬಾರಿ ಉತ್ತಮ ರ್‍ಯಾಂಕ್‌ ಪಡೆದೇ ತೀರಲು ನಿರ್ಧರಿಸಿರುವ ಬಿಬಿಎಂಪಿ, ಇದೀಗ ನಗರದ 198 ವಾರ್ಡ್‌ಗಳೂ “ಬಯಲು ಶೌಚ ಮುಕ್ತ’ವಾಗಿವೆ ಎಂದು ಘೋಷಿಸಿಕೊಂಡಿದೆ.

ಪ್ರಸಕ್ತ ಸಾಲಿನ ಅಭಿಯಾನದಲ್ಲಿ ಶತಾಯಗತಾಯ ಉತ್ತಮ ರ್‍ಯಾಂಕಿಂಗ್‌ ಪಡೆಯಬೇಕೆಂದು ಪಾಲಿಕೆ ಅಧಿಕಾರಿಗಳು ನಿರ್ಧರಿಸಿದ್ದು, ಆ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಮುಂದುವರಿದು ಪಾಲಿಕೆಯ 198 ವಾರ್ಡ್‌ಗಳು ಬಯಲು ಶೌಚ ಮುಕ್ತ (ಒಡಿಎಫ್)ವಾಗಿರುವ ವಿಷಯಕ್ಕೆ ಪಾಲಿಕೆಯ ಕೌನ್ಸಿಲ್‌ ಸಭೆಯ ಅನುಮೋದನೆ ನಡೆದಿದೆ. 

ಹಿಂದೆ ಶೌಚಾಲಯ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ದೊರೆಯುವ ಅನುದಾನ ತಪ್ಪುತ್ತದೆ ಎಂಬ ಕಾರಣಕ್ಕೆ ಜನಪ್ರತಿನಿಧಿಗಳು ತಮ್ಮ ವಾರ್ಡ್‌ಗಳನ್ನು ಒಡಿಎಫ್ ಮುಕ್ತ ಎಂದು ಘೋಷಿಸಿಕೊಳ್ಳಲು ಹಿಂದೇಟು ಹಾಕಿದ್ದರು. ಇದರಿಂದಾಗಿ ಸ್ವತ್ಛ ಸರ್ವೆಕ್ಷಣ್‌ ಅಭಿಯಾನದಲ್ಲಿ ಪಾಲಿಕೆ ಕಳಪೆ ರ್‍ಯಾಂಕಿಂಗ್‌ ಪಡೆಯುವಂತಾಗಿತ್ತು.

ನಗರ ಪ್ರದೇಶದಲ್ಲಿ ಸ್ವತ್ಛತೆ ಹಾಗೂ ನೈರ್ಮಲ್ಯ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 2016ರಿಂದ ಸ್ವತ್ಛ ಸರ್ವೆಕ್ಷಣ್‌ ಅಭಿಯಾನ ನಡೆಸುತ್ತಿದೆ. ಅದರಂತೆ ನಗರದಲ್ಲಿನ ಸ್ವತ್ಛತೆ, ಘನತ್ಯಾಜ್ಯ ನಿರ್ವಹಣೆಗೆ ಕೈಗೊಂಡ ಕ್ರಮಗಳು, ಶೌಚಾಲಯ ವ್ಯವಸ್ಥೆ, ನಾಗರಿಕರ ಸಮಸ್ಯೆಗಳಿಗೆ ನಗರ ಸ್ಥಳೀಯ ಸಂಸ್ಥೆಗಳು ಸ್ಪಂದಿಸುವ ಆಧಾರದ ಮೇಲೆ ಪಡೆಯುವ ಅಂಕಗಳನ್ನು ಆಧರಿಸಿ ರ್‍ಯಾಂಕಿಂಗ್‌ ನೀಡಲಾಗುತ್ತದೆ.

ಸರ್ವೇಕ್ಷಣ್‌ ಅಭಿಯಾನದ ನಾಲ್ಕು ವಿಭಾಗಗಳಲ್ಲಿ 5000 ಅಂಕಗಳನ್ನು ನಿಗದಿಪಡಿಸಲಾಗಿದೆ. ವಿಶೇಷವಾಗಿ ಅಗತ್ಯವಿರುವೆಡೆ ಶೌಚಾಲಯ ವ್ಯವಸ್ಥೆ, ಸ್ವತ್ಛತೆ, ಜನಸ್ನೇಹಿ, ನೈರ್ಮಲ್ಯ ಹೀಗೆ ಶೌಚಾಲಯಗಳಿಗೆ ಸಂಬಂಧಿಸಿದಂತೆ 1182 ಅಂಕಗಳನ್ನು ನೀಡಲಾಗುತ್ತದೆ. ಜತೆಗೆ ನಗರ ಬಯಲು ಶೌಚ ಮುಕ್ತ (ಒಡಿಎಫ್) ಎಂದು ಘೋಷಿಸಿಕೊಂಡರೆ 500 ಅಂಕಗಳು ದೊರೆಯುತ್ತವೆ.

ಇದೀಗ ಪಾಲಿಕೆ ತನ್ನೆಲ್ಲಾ ವಾರ್ಡ್‌ಗಳನ್ನು ಒಡಿಎಫ್ ಎಂದು ಘೋಷಿಸಿಕೊಂಡಿರುವ ಕಾರಣ 400 ಅಂಕಗಳು ದೊರೆಯಲಿವೆ. ಇನ್ನು ಕೇಂದ್ರ ಸರ್ಕಾರ ನಿಯೋಜಿಸಿರುವ ಏಜೆನ್ಸಿಗಳು ಬಂದು ಪರಿಶೀಲಿಸಿ ಒಡಿಎಫ್ ಪ್ರಮಾಣ ಪತ್ರ ನೀಡಿದರೆ ಇನ್ನೂ ಹೆಚ್ಚಿನ ಅಂಕಗಳು ದೊರೆಯಲಿವೆ. ಅದನ್ನರಿತ ಅಧಿಕಾರಿಗಳು ಪಾಲಿಕೆ ಸದಸ್ಯರ ಮನವೊಲಿಸಿ ವಾರ್ಡ್‌ಗಳನ್ನು ಬಯಲು ಶೌಚ ಮುಕ್ತವೆಂದು ಘೋಷಿಸಿಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ವತ್ಛ ಸವೇಕ್ಷಣ್‌ ಸ್ಪರ್ಧೆ ನಡೆಯುವುದೇಗೆ?: ಸ್ವತ್ಛ ಸವೇಕ್ಷಣ್‌ ಅಭಿಯಾನದಲ್ಲಿ 1 ಲಕ್ಷಕ್ಕಿಂತ ಕಡಿಮೆ ಹಾಗೂ 1 ಲಕ್ಷಕ್ಕಿಂತ ಹೆಚ್ಚಿನ ಜನ ಸಂಖ್ಯೆ ಹೊಂದಿರುವ ನಗರಗಳ ನಡುವೆ ಸ್ಪರ್ಧೆ ನಡೆಯುತ್ತದೆ. ಸ್ವತ್ಛತೆಗೆ ಕೈಗೊಂಡಿರುವ ಕ್ರಮಗಳ ಆಧಾರದ ಮೇಲೆ ನಗರಗಳಿಗೆ ಅಂಕ ನೀಡಲಾಗುತ್ತದೆ. ಜತೆಗೆ ಕೇಂದ್ರ ಸರ್ಕಾರದ ಪರಿಣಿತರ ತಂಡ ನಗರಕ್ಕೆ ಭೇಟಿ ನೀಡಿ ಪಾಲಿಕೆಯಿಂದ ನೀಡಿದ ಮಾಹಿತಿ ಹಾಗೂ ದಾಖಲೆಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿ ಅಂಕಗಳನ್ನು ನೀಡುತ್ತದೆ.

ಪಾಲಿಕೆಯ 198 ಸದಸ್ಯರು ತಮ್ಮ ವಾರ್ಡ್‌ಗಳನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿದ್ದಾರೆ. ಸ್ವಯಂಘೋಷಣೆಗೆ 25 ಅಂಕಗಳು ಹಾಗೂ 2 ಸ್ಟಾರ್‌ ರೇಟಿಂಗ್‌ ಪಾಲಿಕೆಗೆ ಬರುವುದರಿಂದ 400 ಅಂಕಗಳು ದೊರೆಯಲಿವೆ. ಕೇಂದ್ರ ನಿಯೋಜಿತ ಏಜೆನ್ಸಿಗಳು ಜನವರಿಯಲ್ಲಿ ನಗರಕ್ಕೆ ಭೇಟಿ ನೀಡಲಿದ್ದು, ಪಾಲಿಕೆ ನೀಡಿದ ದಾಖಲೆಗಳನ್ನು ಪರಿಶೀಲಿಸಿ ಒಡಿಎಫ್ ಪ್ರಮಾಣಪತ್ರ ನೀಡಿದರೆ ಉತ್ತಮ ರ್‍ಯಾಂಕ್‌ ಪಡೆಯಬಹುದು. 
-ರಂದೀಪ್‌, ವಿಶೇಷ ಆಯುಕ್ತರು (ಘನತ್ಯಾಜ್ಯ ನಿರ್ವಹಣೆ ವಿಭಾಗ)

ಟಾಪ್ ನ್ಯೂಸ್

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.