ಮೂಲ ವಿಜ್ಞಾನದಲ್ಲಿ ಹೆಚ್ಚಿನ ಅಧ್ಯಯನ ಅಗತ್ಯ
Team Udayavani, Dec 30, 2018, 10:56 AM IST
ಗದಗ: ಭೌತಶಾಸ್ತ್ರದಲ್ಲಿ ಸರ್.ಸಿ.ವಿ. ರಾಮನ್ ಅವರ ಬಳಿಕ ಭಾರತದವರ್ಯಾರೂ ನೋಬೆಲ್ ಪ್ರಶಸ್ತಿ ಪಡೆದಿಲ್ಲ. ಅಂತಹ ಮಹೋನ್ನತ ಪ್ರಶಸ್ತಿಯನ್ನು ಭಾರತೀಯರು ಪಡೆಯಬೇಕು. ಈ ನಿಟ್ಟಿನಲ್ಲಿ ಮೂಲ ವಿಜ್ಞಾನದಲ್ಲಿ ಹೆಚ್ಚಿನ ಅಧ್ಯಯನ, ಸಂಶೋಧನೆಗೆ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಪ್ರೇರಣೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರೊ| ಎಸ್.ವಿ. ಸಂಕನೂರ ಅಭಿಪ್ರಾಯಪಟ್ಟರು.
ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ, ಜಿ.ಪಂ. ವತಿಯಿಂದ ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಗುರುಬಸವ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಮಾನವನ ಬದುಕಿನ ವಿಜ್ಞಾನ ಮತ್ತು ತಂತ್ರಜ್ಞಾನ ಅವಿಭಾಜ್ಯ ಅಂಗ
ಮೂಲ ವಿಜ್ಞಾನ ಮತ್ತು ತಂತ್ರಜ್ಞಾನದ ಸಂಶೋಧನೆಗೆ ಮುಂದುವರಿದ ರಾಷ್ಟ್ರಗಳಲ್ಲಿ ಸಾಕ್ಕಷ್ಟು ಪ್ರೋತ್ಸಾಹ ದೊರೆಯುತ್ತವೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ಧಿಗಾಗಿ ಅಮೆರಿಕ ತನ್ನ ವಾರ್ಷಿಕ ಬಜೆಟ್‌ನಲ್ಲಿ 511 ಬಿಲಿಯನ್ ಡಾಲರ್, ಚೀನಾ 411, ಸೌಥ್ ಕೋರಿಯಾ ಸೇರಿದಂತೆ ಅನೇಕ ರಾಷ್ಟ್ರಗಳು ನೂರಾರು ಕೋಟಿ ರೂ. ವ್ಯಯಿಸುತ್ತಿದೆ. ಆದರೆ, ಭಾರತ ಸರಕಾರ ವಾರ್ಷಿಕ ಕೇವಲ 66 ಬಿಲಿಯನ್ ಯುಎಸ್ ಡಾಲರ್‌ಗಳನ್ನು ಬಜೆಟ್‌ನಲ್ಲಿ ಘೋಷಿಸುತ್ತದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಒತ್ತು ನೀಡುವವರೆಗೂ ದೇಶದ ಅಭಿವೃದ್ಧಿ ಸಾಧ್ಯವಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಪಿಯುಸಿಯಲ್ಲಿ ಗರಿಷ್ಠ ಅಂಕಗಳಿಸಿದವರಲ್ಲಿ ಶೇ. 50ರಷ್ಟು ವೈದ್ಯಕೀಯ, ಇಂಜಿನಿಯರಿಂಗ್ ಆಯ್ದುಕೊಂಡರೆ, ಶೇ. 30ರಷ್ಟು ವಾಣಿಜ್ಯ, ಕಲಾ ಪದವಿಗೆ ಪ್ರವೇಶ ಪಡೆಯುತ್ತಾರೆ. ಇನ್ನುಳಿದಂತೆ ಶೇ. 20ರಷ್ಟು ವಿದ್ಯಾರ್ಥಿಗಳು ಬಿಎಸ್‌ಸಿ ಪ್ರವೇಶ ಪಡೆಯುತ್ತಾರೆ. ಹೀಗಾಗಿ ಮೂಲ ವಿಜ್ಞಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಶೋಧನೆಗಳಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ಮೂಲ ವಿಜ್ಞಾನ ಕಲಿಕೆ, ಸಂಶೋಧನೆಯಲ್ಲಿ ತೊಡಗುವವರಿಗೆ ಸರಕಾರ ಹೆಚ್ಚಿನ ಪ್ರಮಾಣದಲ್ಲಿ ಶಿಷ್ಯವೇತನ ನೀಡಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಇಂದಿನ ದಿನಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆ ಹೊರತಾಗಿ ಮಾನವನ ಜೀವನವನ್ನು ಊಹಿಸಿಕೊಳ್ಳಲೂ ಅಸಾಧ್ಯ. ಆರೋಗ್ಯ, ಕೃಷಿ, ಆಹಾರದಲ್ಲೂ ವಿಜ್ಞಾನ ಹಾಸುಹೊಕ್ಕಾಗಿದೆ. ಬ್ಯಾಂಕಿಂಗ್, ಇ-ಆಡಳಿತ ವ್ಯವಸ್ಥೆ ಸೇರಿದಂತೆ ಪ್ರತಿಯೊಂದು ಕೆಲ ಕಾರ್ಯಗಳಲ್ಲಿ ಇಂಟರ್ ನೆಟ್, ತಂತ್ರಜ್ಞಾನದ ಬಳಕೆ ಹೆಚ್ಚಿದೆ . ಆದರೆ, ಇವುಗಳಿಂದಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆಯೂ ಜಾಗೃತರಾಗಬೇಕು. ಇಂಟರನೆಟ್, ಮೊಬೈಲ್‌ಗಳ ಉಪಯೋಗಕ್ಕಿಂತ ದುರುಪಯೋಗ ಹೆಚ್ಚುತ್ತಿದು, ಈ ಕುರಿತು ವಿದ್ಯಾರ್ಥಿಗಳು, ಪೋಷಕರು ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು. ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ತಾಪಂ ಅಧ್ಯಕ್ಷ ಮೋಹನ ದುರ್ಗಣ್ಣವರ, ಉಪಾಧ್ಯಕ್ಷೆ ಸುಜಾತಾ ಖಂಡು, ನಗರಸಭೆ ಅಧ್ಯಕ್ಷೆ ಸುರೇಶ್ ಕಟ್ಟಿಮನಿ, ಡಿಡಿಪಿಐ ಜಿ.ಎಲ್. ಬಾರಟಕ್ಕೆ, ಡಯಟ್ ಪ್ರಾಚಾರ್ಯ ಎಚ್.ಎಂ. ಖಾನ್ ಇದ್ದರು.
ಕಾಟಾಚಾರಕ್ಕೆ ನಡೆಯಿತು ಉದ್ಘಾಟನೆ
ರಾಜ್ಯ ಸರಕಾರ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿರುವ ಪ್ರೌಢಶಾಲೆಗಳ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ನಡೆದ ಉದ್ಘಾಟನಾ ಸಮಾರಂಭ ಕಾಚಾರಕ್ಕೆ ಎನ್ನುವಂತೆ ಭಾಸವಾಯಿತು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರೊಬ್ಬರೊನ್ನು ಹೊರತುಪಡಿಸಿದರೆ ಸಮಾರಂಭದ ಉದ್ಘಾಟನೆ ಮತ್ತು ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಕೆ. ಪಾಟೀಲ ಸೇರಿದಂತೆ ಜಿಲ್ಲೆಯ ನಾಲ್ವರು ಶಾಸಕರು, ಇಬ್ಬರು ಸಂಸದರು, ಮೂವರು ವಿಧಾನ ಪರಿಷತ್ ಸದಸ್ಯರು, ಜಿ.ಪಂ. ಅಧ್ಯಕ್ಷರೂ ಗೈರು ಆಗಿದ್ದರು. ಅವರೊಂದಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು, ಅಪರ ಆಯುಕ್ತರೂ ಪಾಲ್ಗೊಳ್ಳದಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಮ್ಮ ಭಾಷಣದಲ್ಲಿ ಬೇಸರ ವ್ಯಕ್ತಪಡಿಸಿದರು.
ಗದುಗಿನ ಗುರುಬಸವ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವ್ಯವಸಾಯ ಮತ್ತು ಸಾವಯವ ಕೃಷಿ, ಆರೋಗ್ಯ ಮತ್ತು ನೈರ್ಮಲ್ಯ, ಸಂಪನ್ಮೂಲ ನಿರ್ವಹಣೆ, ತ್ಯಾಜ್ಯ ನಿರ್ವಹಣೆ, ವಿನ್ಯಾಸದಲ್ಲಿ ಗಣಿತ ಶಾಸ್ತ್ರದ ಬಳಕೆ ಹಾಗೂ ಸಾರಿಗೆ ಮತ್ತು ಸಂಪರ್ಕ ಈ ವಿಷಯಗಳ ಕುರಿತು ರಾಜ್ಯದ ವಿವಿಧ ಶೈಕ್ಷಣಿಕ ಜಿಲ್ಲೆಗಳಿಂದ ಆಗಮಿಸಿರುವ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ತಂಡಗಳು ಪ್ರಾತ್ಯಕ್ಷಿಕೆ ಪ್ರದರ್ಶಿಸುತ್ತಿದ್ದಾರೆ. ಡಿ. 29ರಿಂದ ಡಿ.31ರ ವರೆಗೆ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ವಸ್ತು ಪ್ರದರ್ಶನ ಹಾಗೂ ಸಂಜೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.