ವಿಶ್ವೇಶ್ವರ ಶಿವಾಚಾರ್ಯರ ಪುರಪ್ರವೇಶ
Team Udayavani, Dec 31, 2018, 10:09 AM IST
ಹಗರಿಬೊಮ್ಮನಹಳ್ಳಿ: ಬಸವಪಟ್ಟಣದ ಸದ್ಗುರು ಶಿವಯೋಗಿ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳ ಪುರ ಪ್ರವೇಶ ಹಾಗೂ ಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಹಾಲಶಂಕರ ಸ್ವಾಮೀಜಿ ನೇತೃತ್ವದಲ್ಲಿ ಹಳೆ ಹಗರಿಬೊಮ್ಮನಹಳ್ಳಿಯ ಹಾಲಸ್ವಾಮಿ ಮಠದಿಂದ ಪ್ರಾರಂಭವಾದ ಪಲ್ಲಕ್ಕಿ ಉತ್ಸವ ಪಟ್ಟಣದ ಬೀದಿಗಳಲ್ಲಿ ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾ ಸಂಚರಿಸಿತು.
ನಂತರ ಹಾಲಸ್ವಾಮಿ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಶಿವಯೋಗಿ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳು ಮಾತನಾಡಿ, ಹಬ್ಬಗಳನ್ನು ಸಂಭ್ರಮದಿಂದ ಧಾರ್ಮಿಕ ಮನೋಭಾವದಿಂದ ಆಚರಿಸಬೇಕು. ಪರಸ್ಪರ ವೈಷಮ್ಯ ದೂರಮಾಡಿ ಸಮಾನರಾಗಿ ಬಾಳಬೇಕು. ಬದುಕನ್ನು
ಪ್ರೀತಿಸುತ್ತಾ ನಮ್ಮನ್ನು ನಾವು ಅತ್ಮಾವಲೋಕನ ಮಾಡಿಕೊಳ್ಳುತ್ತಾ ನಡೆಯಬೇಕು. ಸಮಾಜದ ಸ್ವಾಸ್ಥ್ಯ ಉಳಿಯಬೇಕಾದರೆ ದುಷ್ಟ ಶಕ್ತಿಗಳನ್ನು ಸಂಹಾರ ಮಾಡಬೇಕು. ಸರಕಾರಗಳು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ನೀಡಿದಾಗ ಮಾತ್ರ ರೈತ ಉದ್ಧಾರವಾಗಲು ಸಾಧ್ಯ. ಕೇವಲ ನಾಟಕೀಯ ಮಾತುಗಳನ್ನು ಸನ್ನಿವೇಶಕ್ಕೆ ತಕ್ಕಂತೆ ಹೇಳಿಕೆಗಳನ್ನು ಕೊಡುತ್ತಾ ಹೋಗುವುದನ್ನು ಸರಕಾರಗಳು ನಿಲ್ಲಿಸಬೇಕು ಎಂದರು.
ಧರ್ಮಸಭೆಯಲ್ಲಿ ಹಂಪಸಾಗರದ ಶಿವಲಿಂಗ ರುದ್ರಮುನಿ ಶಿವಾಚಾರ್ಯರು, ಸೋಮಶೇಖರ ದೇವರು, ಮಣನೂರು ಮಲ್ಲಿಕಾರ್ಜುನ ಶಿವಾಚಾರ್ಯ, ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಗುತ್ತಿಗೆದಾರ ಉಮಾಪತಿ, ಮುಖಂಡರಾದ ಮಹಬಲೇಶ್ವರ
ರೆಡ್ಡಿ, ಕೆ.ಬಸವರಾಜಪ್ಪ, ಬಿ.ಜಿ.ಬಡಿಗೇರ, ಉಮಾಪತಿಸ್ವಾಮಿ, ಹೋಟೆಲ್ ಸಿದ್ದರಾಜು ಇತರರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ನೀರಾವರಿ ಇಲಾಖೆಯಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಮಹಿಳೆಯರು ಕುಂಭ, ಕಳಸ ಹಿಡಿದು ಸಾಗಿದರು.
ಎಚ್. ಬಿ.ನಾಗನಗೌಡ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.