1984 ಸಿಖ್ ವಿರೋಧಿ ದಂಗೆ ಕೇಸ್; ಮಾಂಡೋಲಿ ಜೈಲು ಸೇರಿದ ಸಜ್ಜನ್ ಕುಮಾರ್
Team Udayavani, Dec 31, 2018, 10:10 AM IST
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಸೋಮವಾರ ಕಾರ್ಕಾಡೂಮಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಸಜ್ಜನ್ ಕುಮಾರ್ ಗೆ ಈಶಾನ್ಯ ದೆಹಲಿಯ ಮಾಂಡೋಲಿ ಜೈಲಿಗೆ ಕರೆದೊಯ್ಯುವಂತೆ ಕೋರ್ಟ್ ನಿರ್ದೇಶನ ನೀಡಿದೆ.
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ವಿಚಾರಣಾಧೀನ ಕೋರ್ಟ್ ಖುಲಾಸೆಗೊಳಿಸಿ ನೀಡಿದ್ದ ತೀರ್ಪನ್ನು ದೆಹಲಿ ಹೈಕೋರ್ಟ್ ರದ್ದು ಮಾಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿತ್ತು.
ದೆಹಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಈಗಾಗಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅದರ ವಿಚಾರಣೆ ಬಾಕಿ ಇದೆ. ಸಜ್ಜನ್ ಅವರನ್ನು ಕೋರ್ಟ್ ಮಾಂಡೋಲಿ ಜೈಲಿಗೆ ಕಳುಹಿಸುವಂತೆ ಆದೇಶಿಸಿದೆ. ಅಷ್ಟೇ ಅಲ್ಲ ಭದ್ರತೆಯ ದೃಷ್ಟಿಯಿಂದ ಪ್ರತ್ಯೇಕ ವಾಹನದಲ್ಲಿ ಅವರನ್ನು ಕರೆದೊಯ್ಯುವಂತೆ ಸೂಚನೆ ನೀಡಿರುವುದಾಗಿ ಸಜ್ಜನ್ ಪರ ವಕೀಲರು ಮಾಧ್ಯಮದವರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.