ದ.ಕ.: ಲಕ್ಷ್ಮೀಪ್ರಸಾದ್ ನೂತನ ಎಸ್‌ಪಿ
Team Udayavani, Jan 1, 2019, 4:13 AM IST
ಮಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ಈ ಹಿಂದೆ ಮರಳು ಮಾಫಿಯಾ ಪ್ರಕರಣವೊಂದರಲ್ಲಿ ಆರೋಪಿಯನ್ನು ಸುಮಾರು 6 ಕಿ.ಮೀ. ದೂರ ಬೆನ್ನಟ್ಟಿ ಹಿಡಿದು ಬಂಧಿಸಿದ್ದ ಯುವ ಐಪಿಎಸ್ ಪೊಲೀಸ್ ಅಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ| ಬಿ.ಆರ್. ರವಿಕಾಂತೇ ಗೌಡ ಭಡ್ತಿ ಹೊಂದಿದ್ದು, ಬೆಂಗಳೂರಿನ ಅಗ್ನಿಶಾಮಕ ಸೇವೆಯ ಐಜಿಪಿಯಾಗಿ ನೇಮಿಸಲಾಗಿದೆ. 2018ರ ವರ್ಷಾಂತ್ಯದ ದಿನ 10 ಜನ ಹಿರಿಯ ಅಧಿಕಾರಿಗಳಿಗೆ ಭಡ್ತಿಯೂ ಸೇರಿದಂತೆ ಒಟ್ಟು 21 ಮಂದಿ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಅವರ ವರ್ಗಾವಣೆ ಮತ್ತು ಅವರಿಂದ ತೆರವಾದ ಸ್ಥಾನಕ್ಕೆ ಹೊಸ ಅಧಿಕಾರಿಯ ನೇಮಕವೂ ಇದರಲ್ಲಿ ಸೇರಿದೆ.
2014ರಲ್ಲಿ ಐಪಿಎಸ್
ಬಿ.ಎಂ. ಲಕ್ಷ್ಮೀಪ್ರಸಾದ್ 2014ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದಲ್ಲಿ ಎಸ್‌ಪಿ (ಭಯೋತ್ಪಾದನಾ ನಿಗ್ರಹ ಕೇಂದ್ರ- ಸಿಸಿಟಿ) ಆಗಿದ್ದರು. ಬೆಂಗಳೂರಿನ ಕಸ್ತೂರಿನಗರ ನಿವಾಸಿಯಾಗಿರುವ ಅವರು ಎಂಜಿನಿಯರಿಂಗ್ ಪದವೀಧರರಾಗಿದ್ದು, ಆರ್.ವಿ. ಎಂಜಿನಿಯರಿಂಗ್ ಕಾಲೇಜಿನ ಹಳೆ ವಿದ್ಯಾರ್ಥಿ. ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಅವರು ಎಚ್‌ಪಿ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದವರು. ಆದರೆ ಐಎಎಸ್ / ಐಪಿಎಸ್ ಅಧಿಕಾರಿಯಾಗಬೇಕೆಂಬ ಮಹದಾಸೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಪಾಸಾಗಿದ್ದರು. ಕೈತುಂಬ ಸಂಬಳ ಬರುತ್ತಿದ್ದ ಐಟಿ ಕಂಪೆನಿ ಉದ್ಯೋಗ ತೊರೆದು 2014ರಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇರಿದ್ದು ಇವರ ವಿಶೇಷ.
ಆರು ಕಿ. ಮೀ. ಬೆನ್ನಟ್ಟಿ ಬಂಧನ
2017ರ ಜನವರಿಯಲ್ಲಿ ಬಾಗಲಕೋಟೆ ಎಎಸ್‌ಪಿ ಆಗಿದ್ದಾಗ ಮರಳು ಮಾಫಿಯಾ ವಿರುದ್ಧ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು 6 ಕಿ.ಮೀ. ಬೆನ್ನಟ್ಟಿ ಓರ್ವನನ್ನು ಹಿಡಿದು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. 45 ನಿಮಿಷ ಕಾಲ ಬೆನ್ನಟ್ಟಿದ್ದು, ಈ ಕಾರ್ಯಾಚರಣೆ ಮನ್ನಣೆಗೆ ಪಾತ್ರವಾಗಿತ್ತು. ಬಳಿಕ ವಿಜಯಪುರ ಎಸ್‌ಪಿಯಾಗಿ, ಎಎನ್‌ಎಫ್ ಎಸ್‌ಪಿಯಾಗಿದ್ದರು. ವರ್ಷದಿಂದ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದಲ್ಲಿ ಎಸ್‌ಪಿ ಆಗಿ ಸೇವೆ ಸಲ್ಲಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.