ಡಾ.ಸುಧಾ ಮೂರ್ತಿ ವರ್ಷದ ವ್ಯಕ್ತಿ
Team Udayavani, Jan 1, 2019, 6:42 AM IST
ಬೆಂಗಳೂರು: ಪತ್ರಕರ್ತರ ಬರಹಗಳಿಗೆ ಮೌಲ್ಯ ಹೆಚ್ಚಿದ್ದು, ಅವರ ವಿಶ್ಲೇಷಣೆಗಳು ಸದಾ ಸಮಾಜ ಮುಖೀಯಾಗಿರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು.
ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರಿಗೆ 2018ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ ಮತ್ತು 13 ಮಂದಿ ಹಿರಿಯ ಪತ್ರಕರ್ತರಿಗೆ ಪ್ರಸ್‌ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಮಾಧ್ಯಮದ ಯಾವಗಲೂ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಪತ್ರಕರ್ತರು ಇತರರಿಗೆ ಮಾದರಿಯಾಗಿದ್ದು, ಅವರ ನಡೆಯನ್ನು ಸಮಾಜ ಗಮನಿಸುತ್ತಿರುತ್ತದೆ. ಆದರೆ, ಇತ್ತಿಚಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರ ಕಲಬೆರೆಕೆಯಾಗುತ್ತಿದ್ದು ನೈಜತೆ ಮಾಯಾವಾಗುತ್ತಿದೆ. ಒಳ್ಳೆಯದನ್ನು ತೋರುವ ಪ್ರವೃತ್ತಿಗಿಂತಲೂ ಕೆಟ್ಟದನ್ನೆ ಹೆಚ್ಚಾಗಿ ಬಿಂಬಿಸಲಾಗುತ್ತಿದೆ.
ಸಮಾಜದ ಅಭಿಪ್ರಾಯವನ್ನು ಪ್ರತಿಬಿಂಬಿಸುವ ಕೆಲಸವನ್ನು ಮಾಧ್ಯಮಗಳು ಇನ್ನಷ್ಟು ಪ್ರಬಲವಾಗಿ ಮಾಡಬೇಕಿದೆ. ಕೆಲ ವಿಚಾರಗಳನ್ನು ಸಮಾಜಕ್ಕೆ ಮುಟ್ಟಿಸುವುದರಲ್ಲಿ ಹಿಂದೇಟು ಹಾಕುತ್ತಿದ್ದಿ, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕಿವಿಮಾತು ಹೇಳಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಪ್ರಸ್‌ಕ್ಲಬ್ ಅಧ್ಯಕ್ಷ ಸದಾಶಿವ ಶಣೈ, ಪ್ರಸ್‌ಕ್ಲಬ್ ನೂತನ ಕಟ್ಟಡ ಅಡಿಪಾಯ ಕಾಮಗಾರಿಗೆ ಸರ್ಕಾರವು ವಾರ್ತಾ ಇಲಾಖೆಯಿಂದ 5 ಕೋಟಿ ರೂ. ನೀಡಿದೆ. ಹೀಗಾಗಿ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗುವುದು. ಬೆಂಗಳೂರು ಪ್ರಸ್‌ಕ್ಲಬ್‌ಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿಇಎಸ್ ಕಾಲೇಜು ಸಮೀಪ ಒಂದು ಎಕರೆ ಜಮೀನು ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಕಟ್ಟಡದ ಅಡಿಪಾಯ ಕಾರ್ಯ ನಡೆಯಲಿದೆ ಎಂದರು.
ಹಿರಿಯ ಪತ್ರಕರ್ತರಾದ ತಿಮ್ಮಪ್ಪ ಭಟ್, ರವಿ ಹೆಗಡೆ, ವೆಂಕಟನಾರಾಯಣ್, ಕೆ.ವಿ.ಪ್ರಭಾಕರ್, ರಾಮಣ್ಣ ಎಚ್.ಕೋಡಿಹೊಸಹಳ್ಳಿ, ಎ.ಬಾಲಚಂದ್ರ, ಶಿವಾಜಿ ಗಣೇಶನ್, ತುಂಗರೇಣುಕ, ಡಾ.ರಾಜಶೇಖರ ಹತಗುಂದಿ, ಡಿ.ಸಿ.ಗಣೇಶ್, ವೇದಂ ಜಯಶಂಕರ್, ರಾಜಶೇಖರ ಅಬ್ಬೂರು, ಕೆ.ಬದ್ರುದ್ದೀನ್ ಮಾಣಿ ಅವರಿಗೆ ಪ್ರಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದೇ ವೇಳೆ ಪ್ರಸ್‌ಕ್ಲಬ್‌ನಲ್ಲಿ 30 ವರ್ಷ ಗಳ ಕಾಲ ಸೇವೆ ಸಲ್ಲಿಸಿದ ಶಿವರುದ್ರಪ್ಪ ಮತ್ತು ಭೈರಗೌಡ ಅವರನ್ನು ಪ್ರಸ್‌ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು
ಪ್ರಶಸ್ತಿಗಳು ಜವಬ್ದಾರಿ ಹೆಚ್ಚಿಸುತ್ತವೆ – ಡಾ.ಸುಧಾಮೂರ್ತಿ: ಪ್ರಸ್‌ಕ್ಲಬ್ ಬೆಂಗಳೂರು ನೀಡುವ 2018ನೇ ಸಾಲಿನ “ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಇನ್ಫೋಸಿಸ್ ಪ್ರತಿಪಾuನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು, ಪ್ರಶಸ್ತಿಗಳು ಸಾಮಾಜಿಕ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸುತ್ತವೆ.
ಯಾರೋ ಗಳಿಸಿದ್ದನ್ನು ನಾನು ಸಾಮಾಜ ಸೇವೆಗೆ ಉಪಯೋಗಿಸುತ್ತಿದ್ದೇನೆ. ಈ ಪ್ರಶಸ್ತಿ ನನಗೆ ಸಂದ ಪ್ರಶಸ್ತಿ ಅಲ್ಲ ಸಮಾಜ ಸೇವೆಗೆ ಸಂದ ಪುರಸ್ಕಾರ. ಮಾಧ್ಯಮಗಳು ನನ್ನ ಮೇಲೆ ತಾಯಿಗೆ ಮಕ್ಕಳು ನೀಡುವ ಅಕ್ಕರೆ ತೋರುತ್ತಿವೆ. ಇದಕ್ಕೆ ನಾನು ಚಿರಋಣಿಯಾಗಿದ್ದು, ನನ್ನ ಸಮಾಜ ಸೇವೆ ಹೀಗೆ ಮುಂದುವರಿಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.