ನಮ್ಮ ಮೆಟ್ರೋ ಮಾರ್ಗದ ಗುಣಮಟ್ಟ ಪರೀಕ್ಷೆ


Team Udayavani, Jan 1, 2019, 6:42 AM IST

namma-metro.jpg

ಬೆಂಗಳೂರು: ಟ್ರಿನಿಟಿಯ 155ನೇ ಪಿಲ್ಲರ್‌ನಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡ ಬೆನ್ನಲ್ಲೇ “ನಮ್ಮ ಮೆಟ್ರೋ’ ಮೊದಲ ಹಂತದ ಇಡೀ ಯೋಜನೆಯ ಗುಣಮಟ್ಟ ಪರೀಕ್ಷೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧರಿಸಿದೆ. ಟ್ರಿನಿಟಿ ನಿಲ್ದಾಣದ ಬಳಿ ಶಿಥಿಲಗೊಂಡಿದ್ದ ಕಾಂಕ್ರೀಟ್‌ ಅನ್ನು ತಜ್ಞರ ಸಲಹೆ ಮೇರೆಗೆ ದುರಸ್ತಿಗೊಳಿಸಲಾಗಿದೆ.

ಇನ್ಮುಂದೆ ಯಾವುದೇ ಸಮಸ್ಯೆ ಕಂಡುಬರುವುದಿಲ್ಲ. ಇದರ ಜತೆಗೆ ಇಡೀ 42.3 ಕಿ.ಮೀ. ಉದ್ದದ ಮೆಟ್ರೋ ಮೊದಲ ಹಂತದ ಗುಣಮಟ್ಟ ಪರೀಕ್ಷೆ (ಕ್ವಾಲಿಟಿ ಆಡಿಟ್‌) ನಡೆಸಲಾಗುವುದು. ನುರಿತ ತಜ್ಞರಿಂದ ಒಟ್ಟಾರೆ ಮೂರು ತಿಂಗಳು ಈ ಪರೀಕ್ಷೆ   ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದರು. 

ಸೋಮವಾರ ಟ್ರಿನಿಟಿ ನಿಲ್ದಾಣದ ದುರಸ್ತಿ ಕಾಮಗಾರಿ ಪರಿಶೀಲನೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ವಿಜ್ಞಾನಿಗಳು ಮತ್ತು ದೆಹಲಿ ಮೆಟ್ರೋ ತಜ್ಞರ ಸಲಹೆಗಳನ್ನು ಪಡೆದು ಸಮಸ್ಯೆಯನ್ನು ಸರಿಪಡಿಸಲಾಗಿದೆ.

ಈಗಾಗಲೇ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಆದಾಗ್ಯೂ ಸುರಕ್ಷತೆ ದೃಷ್ಟಿಯಿಂದ ಪರೀಕ್ಷಾರ್ಥ ಸಂಚಾರ ನಡೆಸಲಾಗುವುದು. ಇದರಲ್ಲಿ ಸ್ವತಃ ನಿಗಮದ ಅಧಿಕಾರಿಗಳು ಪ್ರಯಾಣ ಮಾಡಲಿದ್ದಾರೆ. ಮಂಗಳವಾರ ಮಧ್ಯಾಹ್ನದ ನಂತರ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ ಎಂದು ಸ್ಪಷ್ಟಪಡಿಸಿದರು.  

ನಂತರ ಮಾತನಾಡಿದ ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಅಜಯ್‌ ಸೇs…, ಎಲ್ಲಿಯಾದರೂ ದೋಷ ಕಂಡುಬರುವ ಸಾಧ್ಯತೆಗಳಿದ್ದರೂ ಈಗಲೇ ಗುರುತಿಸಿ ಸರಿಪಡಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ಸಿವಿಲ್‌ ಸ್ಟ್ರಕ್ಚರ್‌ಗಳ ಕ್ವಾಲಿಟಿ ಆಡಿಟ್‌ ನಡೆಸಲು ನಿರ್ಧರಿಸಲಾಗಿದೆ. ಜನವರಿಯಿಂದ ಇದು ಆರಂಭಗೊಳ್ಳಲಿದೆ. ಈ ಸಂಬಂಧ ನುರಿತ ಏಜೆನ್ಸಿಗಳನ್ನು ಆಹ್ವಾನಿಸಿ, ಸೂಕ್ತವೆನಿಸುವ ಏಜೆನ್ಸಿಗೆ ಪರೀಕ್ಷೆಯ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು. 

ಶೇ.20ರಷ್ಟು ಇಳಿಕೆ: ಎಂ.ಜಿ. ರಸ್ತೆಯಿಂದ ಇಂದಿರಾನಗರ ನಡುವೆ ಮೆಟ್ರೋ ಸೇವೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಒಟ್ಟಾರೆ ಶೇ. 20ರಷ್ಟು ಇಳಿಕೆ ಕಂಡುಬಂದಿದೆ ಎಂದು ಇದೇ ವೇಳೆ ಅಜಯ್‌ ಸೇಠ್ ತಿಳಿಸಿದರು. ಉಚಿತ ಬಸ್‌ ಸೇವೆ ವ್ಯವಸ್ಥೆ ಮಾಡಲಾಗಿದೆ. ಆ ಬಸ್‌ಗಳಲ್ಲಿ ಎಷ್ಟು ಜನ ಓಡಾಡಿದ್ದಾರೆ ಎಂಬುದರ ಲೆಕ್ಕ ಇಲ್ಲ. ಭಾನುವಾರ 2.34 ಲಕ್ಷ ಜನ ಪ್ರಯಾಣಿಸಿದ್ದಾರೆ. ಸಾಮಾನ್ಯ ದಿನಗಳಿಗೆ ಹೋಲಿಸಿದರೆ, ಸ್ಥಗಿತಗೊಂಡ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 20ರಷ್ಟು ಇಳಿಕೆಯಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಕಬ್ಬನ್‌ ಉದ್ಯಾನದಿಂದ ಬೈಯಪ್ಪನಹಳ್ಳಿ ನಡುವೆ ಸುಮಾರು 80-100 ಬಸ್‌ಗಳನ್ನು ನಿಯೋಜಿಸಲಾಗಿದೆ. ಡಿ. 28 ಮತ್ತು 29ರಂದು ತಲಾ 80 ಬಸ್‌ಗಳು ಕಾರ್ಯಾಚರಣೆ ಮಾಡಿವೆ. 30ಕ್ಕೆ 50 ಬಸ್‌ಗಳು ಹಾಗೂ ಸೋಮವಾರ 110 ಬಸ್‌ಗಳು ಈ ಎರಡೂ ಮಾರ್ಗಗಳ ಮಧ್ಯೆ ಸಂಚರಿಸಿದ್ದು, ಅಂದಾಜು 1,060 ಟ್ರಿಪ್‌ಗ್ಳನ್ನು ಪೂರೈಸಿವೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.