ರಾಜ್ಯದಲ್ಲಿಯೇ ಅತ್ಯುತ್ತಮ ಸ್ವೀಪ್ ಜಿಲ್ಲೆ
Team Udayavani, Jan 1, 2019, 6:51 AM IST
ಕಲಬುರಗಿ: ಕಳೆದ 2018ರ ವಿಧಾನಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯಾದ್ಯಂತ ಮತದಾರರಲ್ಲಿ ಚುನಾವಣೆ ಪ್ರಕ್ರಿಯೇ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ವಿನೂತನವಾಗಿ ಹಮ್ಮಿಕೊಂಡಿರುವ ಪ್ರಯುಕ್ತ ಜಿಪಂಗೆ ರಾಜ್ಯದಲ್ಲಿಯೇ ಅತ್ಯುತ್ತಮ ಸ್ವೀಪ್ ಚಟುವಟಿಕೆ ಜರುಗಿಸಿದ ಜಿಲ್ಲೆ ಎಂಬ ಹೆಗ್ಗಳ್ಳಿಗೆ ದೊರೆತಿದೆ ಎಂದು ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರವಿವಾರ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತ ಅಶೋಕ ಲವಾಸಾ ಅವರು ಚುನಾವಣಾ ಜಾಗೃತಿ ಮೂಡಿಸುವಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಜಿಲ್ಲೆ ಎಂಬ ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕ ನೀಡಿ ಹಿಂದಿನ ಸ್ವೀಪ್ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರಿಗೆ ನೀಡಿ ಸನ್ಮಾನಿಸಲಾಗಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ ಹಾಗೂ ತಂಡದ ಮಾರ್ಗದರ್ಶನದಂತೆ ಜಿಲ್ಲೆಯಲ್ಲಿ ಚುನಾವಣಾ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಹಕರಿಸಿದ ಜಿಲ್ಲೆಯ ಸ್ವೀಪ್ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಎಲ್ಲ ಸದಸ್ಯರಿಗೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ-2018ರ ಅಂಗವಾಗಿ ರಚಿಸಲಾಗಿರುವ ಸ್ವಿಪ್ ಸಮಿತಿಯಿಂದ ಎಲ್ಲ ಶಾಲೆಗಳಲ್ಲಿ ಮತದಾರರ ಶೈಕ್ಷಣಿಕ ಕ್ಲಬ್ ಸ್ಥಾಪಿಸುವ ಮೂಲಕ ನೂತನ ಮತದಾರರ ನೋಂದಣಿಗೆ ಹೆಚ್ಚು ಮಹತ್ವ ನೀಡಲಾಗಿತ್ತು. ಸ್ವೀಪ್ ಸಮಿತಿಯಿಂದ ಸೇಡಂನಿಂದ ಕಲಬುರಗಿ ವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳುವ ಮೂಲಕ ಕಡ್ಡಾಯ ಹಾಗೂ ಯಾವುದೇ ಆಮಿಷಕ್ಕೊಳಗಾಗದೇ ಮತದಾನ ಮಾಡಲು ಜಾಗೃತಿ ಹಮ್ಮಿಕೊಳ್ಳಲಾಗಿತ್ತು.
ನಗರದಲ್ಲಿ ಸುಮಾರು 11 ಸಾವಿರ ವಿದ್ಯಾರ್ಥಿಗಳಿಂದ ವಲ್ಲಭಭಾಯಿ ಪಟೇಲ್ ವೃತ್ತದಿಂದ ರಂಗಮಂದಿರವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಎಲ್ಲ ಗ್ರಾಮಗಳಲ್ಲಿ ಕಬ್ಬಡ್ಡಿ, ಖೋಖೋ, ಕುಂಟಲಪಿ ಸ್ಪರ್ಧೆಗಳನ್ನು ಆಯೋಜಿಸಿ ಮತದಾನದ ಜಾಗೃತಿ ಮೂಡಿಸಲಾಗಿತ್ತು. ಎಲ್ಲ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಹಿ ಸಂಗ್ರಹ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಲ್ಲದೇ ಎಲ್ಲ ವಿದ್ಯಾರ್ಥಿಗಳಿಂದ ಪೋಷಕರಿಗೆ ಕಡ್ಡಾಯ ಮತದಾನದ ಕುರಿತು ಪತ್ರಗಳನ್ನು ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.