ಭಾಯಂದರ್‌ ಸ್ವಾಮಿ ಶರಣಂ ಅಯ್ಯಪ್ಪ  ಭಕ್ತವೃಂದ:ವಾರ್ಷಿಕ ಮಹಾಪೂಜೆ

Team Udayavani, Jan 1, 2019, 11:35 AM IST

3012mum04.jpg

ಮುಂಬಯಿ: ಭಾಯಂದರ್‌ ಪಶ್ಚಿಮದ ಸ್ಟೇಷನ್‌ ರೋಡ್‌ನ‌ ಸ್ಟಾರ್‌ ಪ್ಯಾಲೇಸ್‌ ಬಿಲ್ಡಿಂಗ್‌ನ ನಂಬರ್‌-13, ಸಂತೋಷ್‌ ಟಾಕೀಸ್‌ ಸಮೀಪದಲ್ಲಿರುವ ತ್ರಿಮೂರ್ತಿ ಹೊಟೇಲ್‌ ಮಾಲಕರಾದ ದಿ| ಸೋಮಪ್ಪ ಕೋಟ್ಯಾನ್‌ ಅವರ ಹಸ್ತದಿಂದ ಸ್ಥಾಪಿಸಲ್ಪಟ್ಟ ಶ್ರೀ ಸ್ವಾಮಿ ಶರಣಂ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌ ಇದರ 24 ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ. 30ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ  ಕಾರ್ಯಕ್ರಮಗಳೊಂದಿಗೆ ನಡೆಯಿತು.

ಮೂಡಬಿದ್ರೆ ಶ್ರೀ ಮಣಿಕಂಠ ಕ್ಷೇತ್ರದ ಗುರುಸ್ವಾಮಿಗಳಾದ ರಮೇಶ್‌ ಶಾಂತಿ, ಶಿವಾನಂದ ಶಾಂತಿ ಹಾಗೂ ಶಿಬಿರದ ಶ್ರೀನಿವಾಸ ಗುರುಸ್ವಾಮಿಗಳ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 7ರಿಂದ ರಮೇಶ್‌ ಶಾಂತಿ ಗುರುಸ್ವಾಮಿ ಅವರ ನೇತೃತ್ವದಲ್ಲಿ ಗಣಹೋಮ, ಶರಣುಘೋಷ, ಪಡಿಪೂಜೆ, ಲಕ್ಷ್ಮೀ ನಾರಾಯಣ ಭಜನಾ ಸಮಿತಿ ಮೀರಾರೋಡ್‌ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 12.30 ರಿಂದ ಪುಷ್ಪಾಂಜಲಿ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಅಪರಾಹ್ನ 4 ರವರೆಗೆ ನಡೆದ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಮೂಡಬಿದ್ರೆ ಶ್ರೀ ಮಣಿಕಂಠ ಕ್ಷೇತ್ರದ ಗುರುಸ್ವಾಮಿ ಶಿವಾನಂದ ಶಾಂತಿ ಅವರು ಆಶೀರ್ವಚನ ನೀಡಿ, ಅಯ್ಯಪ್ಪ ಸ್ವಾಮಿಯ ವ್ರತವನ್ನು ನಿಷ್ಠೆಯಿಂದ ಪಾಲಿಸಬೇಕಾದುದು ನಮ್ಮೆಲ್ಲರ ಧರ್ಮ. ಕಳೆದ 24 ವರ್ಷಗಳಿಂದ ಸ್ವಾಮಿ ಶರಣಂ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌ ಧಾರ್ಮಿಕ ಕ್ಷೇತ್ರವಲ್ಲದೆ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲೂ ವಿಶೇಷ ಸಾಧನೆ ಮಾಡುತ್ತಿರುವುದು ಅಭಿಮಾನದ ಸಂಗತಿ. ಈ ಶಿಬಿರದ ಮೂಲಕ ನೂರಾರು ಮಂದಿ ವ್ರತಧಾರಿಗಳು ಶ್ರೀ ಕ್ಷೇತ್ರ ಶಬರಿಮಲೆ ಯಾತ್ರೆಯನ್ನು ಮಾಡಿರುವುದು ಸಾಮಾನ್ಯ ಸಂಗತಿಯಲ್ಲ. ಎಲ್ಲಿ ಸತ್ಯ, ನಿಷ್ಠೆಯಿಂದ ಕೂಡಿದ ಭಕ್ತಿ ಇರುತ್ತದೋ ಅಲ್ಲಿ ದೇವರು ಸದಾ ನೆಲೆಸಿರುತ್ತಾನೆ ಎನ್ನುವುದಕ್ಕೆ ಈ ಶಿಬಿರ ಸಾಕ್ಷಿಯಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಪಾಲ್ಗೊಳ್ಳುವಂತೆ ಮಾಡಬೇಕು. ಆಗ  ಧಾರ್ಮಿಕ ಚಿಂತನೆ ಯುವಪೀಳಿಗೆಯಲ್ಲಿ ಬೆಳಗುತ್ತದೆ. ಅಲ್ಲದೆ ನಮ್ಮ ಮೂಲ ಸಂಸ್ಕೃತಿ, ಸಂಸ್ಕಾರಗಳು ಬೆಳೆಯುತ್ತದೆ. ಇಂದಿನ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದ ಭಕ್ತರ  ಸಕಲ ಇಷ್ಟಾರ್ಥಗಳನ್ನು ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿಯು ಪೂರೈಸಲಿ ಎಂದು ನುಡಿದು ಶುಭಹಾರೈಸಿದರು.

ತುಳು-ಕನ್ನಡಿಗ ಭಕ್ತಾದಿಗಳು, ಸ್ಥಳೀಯ  ಶಾಸಕರು, ನಗರ ಸೇವಕರು, ರಾಜಕೀಯ ನೇತಾರರು, ಶಿಬಿರದ ಅಯ್ಯಪ್ಪ ವ್ರತಧಾರಿಗಳು, ನಗರದ ವಿವಿಧೆಡೆಗಳ ಅಯ್ಯಪ್ಪ ಸ್ವಾಮಿ ವ್ರತದಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಾನಿಗಳು, ಸ್ಥಳೀಯ ಉದ್ಯಮಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಕ್ತಿಮಯ ನೃತ್ಯ ಕಾರ್ಯಕ್ರಮ, ಅಪ್ಪ ಸೇವೆ, ಮಹಿಳೆಯರಿಂದ ಭಜನೆ, ದೀಪಾರಾಧನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ಜರಗಿತು. ಈ ಕಾರ್ಯಕ್ರಮವು ಸಂಪೂರ್ಣ ಯಶಸ್ವಿಯಾಗುವಲ್ಲಿ ಸಲಹೆಗಾರರಾದ ಶಿವರಾಮ ಶೆಟ್ಟಿ, ಅಧ್ಯಕ್ಷ ಸಚಿನ್‌ ಕೋಟ್ಯಾನ್‌, ಉಪಾಧ್ಯಕ್ಷ ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಸುಧೀರ್‌ ಪುತ್ರನ್‌, ಜೊತೆ ಕಾರ್ಯದರ್ಶಿ ವಿವೇಕಾನಂದ ಹೆಗ್ಡೆ, ಕೋಶಾಧಿಕಾರಿ ಸುಂದರ ಶೆಟ್ಟಿ, ಜೊತೆ ಕೋಶಾಧಿಕಾರಿ ಕರುಣಾಕರ ಶೆಟ್ಟಿ, ರಮೇಶ್‌ ಸಾಮಿ, ಗುರುಸ್ವಾಮಿಗಳು, ಸಮಿತಿಯ ಸದಸ್ಯರು, ಯುವ ವಿಭಾಗದವರು, ಸದಸ್ಯರು, ಮಹಿಳಾ ಸದಸ್ಯೆಯರು, ಸರ್ವ ಸದಸ್ಯರು ಸಹಕರಿಸಿದರು.

ಟಾಪ್ ನ್ಯೂಸ್

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.