ಮಹಿಳೆಯರ ಭದ್ರತೆಗೆ ನಮ್ಮ ಸರ್ಕಾರ ಬದ್ಧ: ಮೋದಿ
Team Udayavani, Jan 3, 2019, 12:30 AM IST
ಅಮರಾವತಿ: ಹನ್ನೆರಡು ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬಹುದಾದ ಕಾನೂನನ್ನು ಜಾರಿಗೊಳಿಸುವ ಮೂಲಕ ತಮ್ಮ ಸರ್ಕಾರ ಮಹಿಳೆಯರ ಸಂರಕ್ಷಣೆಗೆ ಬದ್ಧವಾಗಿರುವುದನ್ನು ಸಾಬೀತುಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಆಂಧ್ರಪ್ರದೇಶದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರಿಗಾಗಿ ಆಯೋಜಿಸಲಾಗಿದ್ದ “ಮೇರಾ ಬೂತ್ ಸಬ್ಸ್ ಮಜ ಬೂತ್’ ಅಭಿ ಯಾನದಲ್ಲಿ ಪಾಲ್ಗೊಂಡು ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, ಸಕಲ ನಾಗರಿಕರಿಗೂ ಭದ್ರತೆ ಕಲ್ಪಿಸು ವಲ್ಲಿ ತಮ್ಮ ಸರ್ಕಾರ ಕಟಿಬದ್ಧ ವಾಗಿದೆ. 40 ವರ್ಷಗಳಿಂದ ದೇಶ ವನ್ನು ಕಾಡಿದ್ದ ಉಗ್ರವಾದವನ್ನು ಸರ್ಜಿಕಲ್ ದಾಳಿಯ ಮೂಲಕ ಹಿಮ್ಮೆಟ್ಟಿಸಲು ಯತ್ನಿಸಿದ್ದೇವೆ ಎಂದರು.
ಇದೇ ವೇಳೆ, ಮಹಾ ಘಟ ಬಂಧನ್ಗೆ ಕೈ ಜೋಡಿಸಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ವಿರುದ್ಧ ವಾಗ್ಧಾಳಿ ನಡೆಸಿದ ಅವರು, “”ದುಷ್ಟ ಪಕ್ಷವಾದ ಕಾಂಗ್ರೆಸ್ ಜತೆಗೆ ನಾಯ್ಡು ಕೈ ಜೋಡಿಸಿದ್ದಾರೆ. ಅವರ ಪಕ್ಷ ಕೇಂದ್ರದ ವಿರುದ್ಧ ಸುಳ್ಳುಗಳ ಸುರಿಮಳೆ ಸುರಿಸುತ್ತಿದೆ. ಅವರ ಸರ್ಕಾರ ಭ್ರಷ್ಟಾ ಚಾರದಲ್ಲಿ ಮುಳು ಗೇಳುತ್ತಿದ್ದು, ಬಿಜೆಪಿಯು ಇಡೀ ಆಂಧ್ರದ ಒಳಿತಾಗಿ ದುಡಿಯುವ ಛಾತಿ ಹೊಂದಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.