ಪುನರುತ್ಥಾನಕ್ಕೆ ಭಕ್ತರ ಕರಸೇವೆಯ ಹಸ್ತ 


Team Udayavani, Jan 3, 2019, 5:47 AM IST

3-january-5.jpg

ಪುತ್ತೂರು: ದೇಯಿ ಬೈದ್ಯೆತಿ, ಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಪುತ್ತೂರು ತಾ|ನ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ನಂದನ ಬಿತ್ತ್ಲ್‌ನಲ್ಲಿ ದೇಯಿ ಬೈದ್ಯೆತಿ ಸಮಾಧಿ ಪುನರುತ್ಥಾನ ಕಾರ್ಯ ಅಂತಿಮ ಹಂತ ತಲುಪಿದ್ದು, ನೂರಾರು ಭಕ್ತರು ಕರಸೇವೆ ಮಾಡುತ್ತಿದ್ದಾರೆ.

ವಾಸ್ತುಶಿಲ್ಪಿ ರಮೇಶ್‌ ಕಾರಂತರ ಮಾರ್ಗದರ್ಶನದಲ್ಲಿ ಪುನರುಜ್ಜೀವನ ನಡೆಯುತ್ತಿದೆ. ಕುಶಲಕರ್ಮಿಗಳು ಕೆಂಪು ಕಲ್ಲಿನ ಕೆಲಸ ಮಾಡುತ್ತಿದ್ದು, ಭಕ್ತರು ಶ್ರಮದಾನದ ಸೇವೆಯನ್ನೂ ಸಲ್ಲಿಸುತ್ತಿದ್ದಾರೆ. ಸಮಾಧಿಯ ಮೂಲ ಸ್ವರೂಪದಲ್ಲೇ ಪುನರುಜ್ಜೀವನ ಮಾಡಲಾಗುತ್ತಿದೆ. ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರ ಮುಕ್ತಾಯಗೊಳ್ಳಲಿದೆ ಎಂದು ಕ್ಷೇತ್ರಾಡಳಿತ ಸಮಿತಿಯ ಪ್ರಭಾರ ಅಧ್ಯಕ್ಷ ಜಯಂತ ನಡುಬೈಲ್‌ ತಿಳಿಸಿದ್ದಾರೆ.

ಆರು ತಿಂಗಳಿನಿಂದ ಕರಸೇವಾ ಆಂದೋಲನದಲ್ಲಿ 3,000ಕ್ಕೂ ಹೆಚ್ಚು ಭಕ್ತರು ಧರ್ಮಚಾವಡಿ, ಮೂಲಸ್ಥಾನ ಗರಡಿ, ಧೂಮಾವತಿ ದೈವಸ್ಥಾನ, ಸರೋಳಿ ಸೈಮಂಜ ಕಟ್ಟೆಗಳ ಕಾಮಗಾರಿಯಲ್ಲಿ ಸೇವೆ ಮಾಡಿದ್ದಾರೆ. 1,500 ಕರಸೇವಕರು ಸಮಾಧಿ ಕಾಮಗಾರಿ ಮಾಡಿದ್ದಾರೆಂದು ಗೆಜ್ಜೆಗಿರಿ ನಂದನ ಬಿತ್ತಿಲ್‌ ಕ್ಷೇತ್ರದ ಯಜಮಾನ ಶ್ರೀಧರ ಪೂಜಾರಿ ತಿಳಿಸಿದ್ದಾರೆ.

ದೇಯಿ ಬೈದ್ಯೆತಿ ಸಮಾಧಿ ಗದ್ದೆಯ ಬದುವಿನಲ್ಲಿ ಬನದ ರೂಪದಲ್ಲಿತ್ತು. ಅದನ್ನು ಪವಿತ್ರ ಭಾವನೆಯಿಂದ ಸಂರಕ್ಷಿಸಿಕೊಂಡು ಬಂದಿದ್ದೇವೆ. ಅದೇ ಪ್ರಾಕೃತಿಕರೂಪ ಉಳಿಸಿಕೊಳ್ಳಬೇಕೆಂದು ಅಷ್ಟಮಂಗಲ ಚಿಂತನೆಯಲ್ಲೂ ಕಂಡುಬಂದ ಕಾರಣ ಮೂಲ ಸ್ವರೂಪಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾಮಗಾರಿ ನಡೆದಿದೆ ಎಂದಿದ್ದಾರೆ. ಧೂಮಾವತಿ ಕರಸೇವಾ ಸಮಿತಿಯ ಸಮನ್ವಯದಲ್ಲಿ ಶ್ರಮದಾನ ನಡೆಯುತ್ತಿದ್ದು, ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಕಾಸರಗೋಡು, ಉಡುಪಿ, ಕಾರ್ಕಳ ಸಹಿತ ಕರಾವಳಿಯ ಎಲ್ಲೆಡೆಯಿಂದ ಭಕ್ತರು ಕರಸೇವೆಗೆ ಆಗಮಿಸುತ್ತಿದ್ದಾರೆ.

450 ವರ್ಷಗಳ ಹಿಂದೆ ದೇಯಿ ಬೈದ್ಯೆತಿ ಗೆಜ್ಜೆಗಿರಿಯ ಮಣ್ಣಲ್ಲಿ ಸಮಾಧಿಯಾಗಿದ್ದು, ಇಂದಿನವರೆಗೂ ಸುಪ್ತವಾಗಿಯೇ ಉಳಿದಿತ್ತು. ಪ್ರಸ್ತುತ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮಚಾವಡಿ, ಮಹಾ ಸಮಾಧಿ ಪುನರುಜ್ಜೀವನಗೊಳ್ಳುತ್ತಿದ್ದು, ಇಲ್ಲಿಂದ 3 ಕಿ.ಮೀ. ದೂರದ ಮುಡಿ³ನಡ್ಕದಲ್ಲಿ ಅರಣ್ಯ ಇಲಾಖೆ ನಿರ್ಮಿಸಿದ ದೇಯಿ ಬೈದ್ಯೆತಿ ಔಷಧ ವನವೂ ಜನಾಕರ್ಷಣೆ ಪಡೆದಿದೆ.

ಔಷಧೀಯ ವನ
ದೇಯಿ ಬೈದ್ಯೆತಿಯನ್ನು ಸಮಾಧಿ ಮಾಡಲಾದ ಸ್ಥಳದ ಪ್ರಾಕೃತಿಕ ಸ್ವರೂಪವನ್ನು ಉಳಿಸಿಕೊಂಡು ಸುತ್ತಲೂ ಅಷ್ಟಕೋನಾಕೃತಿಯ ಸ್ಮಾರಕವನ್ನು ಕೆಂಪು ಕಲ್ಲಿನಲ್ಲಿ ನಿರ್ಮಿಸಲಾಗಿದೆ. ಇದರ ಸುತ್ತಲೂ ಭವಿಷ್ಯದಲ್ಲಿ ಔಷ ಧೀಯ ಸಸ್ಯಗಳನ್ನು ಬೆಳೆಸಲು ನಿರ್ಧರಿಸಲಾಗಿದೆ. ಸ್ವತಃ ನಾಟಿ ವೈದ್ಯೆಯಾಗಿದ್ದ ಮಾತೆಯ ಸಮಾಧಿ  ಮುಂದಿನ ದಿನಗಳಲ್ಲಿ ನೈಜ ಔಷಧೀಯ ವನವಾಗಿ ಕಂಗೊಳಿಸಲಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.