ಪುಚ್ಚಾಡಿ ಅಣೆಕಟ್ಟು ನೀರಿನ ಮಟ್ಟ ಇಳಿಕೆ 

Team Udayavani, Jan 4, 2019, 5:50 AM IST

4-january-4.jpg

ಕಿನ್ನಿಗೋಳಿ : ಗ್ರಾಮೀಣ ಪ್ರದೇಶದಲ್ಲಿ ಅಣೆಕಟ್ಟುಗಳು ಕೃಷಿ ಭೂಮಿಗೆ ನೀರು ಒದಿಗಿಸುವ ಜೀವಾಳವಾಗಿದೆ. ಈ ನಿಟ್ಟಿನಲ್ಲಿ ಕಿನ್ನಿಗೋಳಿ ಸಮೀಪದ ಕಿಲೆಂಜೂರುವಿನಲ್ಲಿ ನಂದಿನಿ ನದಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಅಣೆಕಟ್ಟಿಗೆ ಹಲಗೆ ಹಾಕಲಾಗಿದೆ ಆದರೇ ಪ್ರತಿ ವರ್ಷದಂತೆ ನೀರಿಕ್ಷಿತ ಮಟ್ಟದಲ್ಲಿ ನೀರು ಸಂಗ್ರಹ ಆಗಿಲ್ಲ. ನಂದಿನಿ ನದಿ ನೀರಿನ ಹರಿವು ಕಡಿಮೆಯಾಗಿದ್ದು ರೈತರು ಕಂಗಾಲಾಗಿದ್ದಾರೆ.

ನಂದಿನಿ ನದಿ ದಡದಲ್ಲಿ ನೂರಾರು ಎಕ್ರೆ ಕೃಷಿಭೂಮಿಯಿದ್ದು ರೈತರು ಕೃಷಿ ಚಟುವಟಿಕೆಗಳಿಗೆ ನಂದಿನಿ ನದಿಯನ್ನೇ ಅವಲಂಬಿಸಿದ್ದಾರೆ. ಮೂಡುಬಿದಿರೆಯ ಕನಕಗಿಯಿಂದ ಹಳೆಯಂಗಡಿ ಸಮೀಪದ ಪಾವಂಜೆವರೆಗೆ ನದಿಗೆ ಅಲ್ಲಲ್ಲಿ ಅಣೆಕಟ್ಟುಗಳನ್ನು ಕಟ್ಟಲಾಗಿದ್ದು ಪ್ರತೀ ವರ್ಷ ನವೆಂಬರ್‌ ಮೊದಲ ವಾರದಲ್ಲಿ ಅಣೆಕಟ್ಟುಗಳಿಗೆ ಬಾಗಿಲು ಹಾಕಲಾಗುತ್ತದೆ. ಅದರಂತೆ ಈ ಬಾರಿಯೂ ಅಣೆಕಟ್ಟುಗಳ ಬಾಗಿಲು ಹಾಕಲಾಗಿದ್ದು ನೀರಿನ ಹರಿವು ಕಡಿಮೆಯಾದುದರಿಂದ ನೀರು ಸಂಗ್ರಹಣೆಯೂ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ.

ಸಂಪ್ರದಾಯದ ಕಟ್ಟ
ಪುಚ್ಚಾಡಿಯಲ್ಲಿ ಕಟ್ಟಲಾಗಿದ್ದ ಅಣೆಕಟ್ಟು ಹಿಂದಿನ ಕಾಲದಿಂದಲ್ಲೂ ಅತ್ಯಂತ ಪ್ರಸಿದ್ಧಿ ಪಡೆದಿದೆ. ಪುಚ್ಚಾಡಿ ಅಣೆಕಟ್ಟಿಗೆ ಬಾಗಿಲು ಹಾಕಿದರೆ ಸಾವಿರಾರು ಎಕ್ರೆ ಕೃಷಿ ಪ್ರದೇಶಕ್ಕೆ ನೀರುಣಿಸುವುದು ಮಾತ್ರವಲ್ಲದೆ ನೂರಾರು ಬಾವಿಗಳಲ್ಲಿ ನೀರಿನ ಒರತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ನೀಗುತ್ತದೆ.

ನೀರು ಸಂಗ್ರಹಣೆ ಕಡಿಮೆ
ಪ್ರತೀ ವರ್ಷದಂತೆ ಈ ಬಾರಿ ಪುಚ್ಚಾಡಿ ಅಣೆಕಟ್ಟಿಗೆ ನವೆಂಬರ್‌ನಲ್ಲಿ ಬಾಗಿಲು ಹಾಕಲಾಗಿದೆ. ಪ್ರತೀ ವರ್ಷ ಬಾಗಿಲು ಹಾಕಿದ ಮೂರು ಅಥವಾ ನಾಲ್ಕು ದಿನದಲ್ಲಿ ಅಣೆಕಟ್ಟಿನಲ್ಲಿ ನೀರು ಸಂಗ್ರಹಗೊಂಡು ತಗ್ಗು ಪ್ರದೇಶದ ಕೃಷಿ ಭೂಮಿಗೆ ನೀರು ಹರಿಯುತ್ತದೆ. ಆದರೆ ಈ ಬಾರಿ ಅಣೆಕಟ್ಟಿನ ಬಾಗಿಲು ಹಾಕಿದರೂ ನಿರೀಕ್ಷಿತ ಮಟ್ಟದಲ್ಲಿ ನೀರು ಸಂಗ್ರಹಣೆ ಆಗಿಲ್ಲ. ಇನ್ನೂ ಕೆಲವು ತಿಂಗಳಲ್ಲಿ ನೀರು ಸಂಗ್ರಹಣೆ ಕಡಿಮೆಯಾಗುವ ಸಾಧ್ಯತೆ ಇದ್ದು ರೈತರು ಕಂಗಾಲಾಗಿದ್ದಾರೆ.

ಕಡಿಮೆ ಪ್ರಮಾಣದಲ್ಲಿ ನೀರು
ಅಣೆಕಟ್ಟು ಇಲ್ಲದ ದಿನಗಳಿಂದಲೂ ಪುಚ್ಚಾಡಿಯಲ್ಲಿ ಮಣ್ಣು ಮತ್ತು ಬೈಹುಲ್ಲಿನಿಂದ ಕಟ್ಟೆಯನ್ನು ಕಟ್ಟಿ ಕೃಷಿ ಭೂಮಿಗೆ ನೀರು ಒದಗಿಸಲಾಗುತ್ತಿದೆ. ಆದರೆ ಈ ಬಾರಿ ನೀರಿನ ಪ್ರಮಾಣ ಕಡಿಮೆಯಾಗಿದೆ.
 – ಪ್ರಸನ್ನ ಎಲ್‌. ಶೆಟ್ಟಿ
ಅತ್ತೂರಗುತ್ತು, ಕಾರ್ಯದರ್ಶಿ,
ಪುಚ್ಚಾಡಿ ನೀರು ಬಳಕೆದಾರರ ಸಂಘ

ನೀರು ಖಾಲಿಯಾಗುವ ಸಾಧ್ಯತೆ
ನೀರಿನ ಅಭಾವದಿಂದಾಗಿ ಈಗ ಸಮಸ್ಯೆ ಉದ್ಭವಿಸಿದೆ. ಒಂದು ತಿಂಗಳೊಳಗೆ ನೀರು ಸಂಪೂರ್ಣ ಖಾಲಿಯಾಗುವ ಸಾಧ್ಯತೆ ಇದೆ.
 – ಜನಾರ್ದನ ಕಿಲೆಂಜೂರು,
ಕಟೀಲು ಗ್ರಾ.ಪಂ. ಸದಸ್ಯರು

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.