ಜ.11ರಿಂದ 3 ದಿನ ಕೊಡಗು ಪ್ರವಾಸಿ ಉತ್ಸವ

Team Udayavani, Jan 4, 2019, 5:59 AM IST

m3-jan.jpg

ಮೈಸೂರು: 2018ರ ಆಗಸ್ಟ್‌ನಲ್ಲಿ ಸುರಿದ ಮಹಾಮಳೆಯಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯಲ್ಲಿನ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಜ.11ರಿಂದ ಮೂರು ದಿನಗಳ ಕಾಲ ಕೊಡಗು ಪ್ರವಾಸಿ ಉತ್ಸವ ಆಯೋಜಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ ತಿಳಿಸಿದರು. 

ಮೈಸೂರು ಹೋಟೆಲ್‌ ಮಾಲಿಕರ ಸಂಘ ಹಾಗೂ ಹೋಟೆಲ್‌ ಮಾಲಿಕರ ಸಂಘದ ಧರ್ಮದತ್ತಿ ಹೊರತಂದಿರುವ ವಿವಿಧ ಪ್ರವಾಸಿತಾಣಗಳ ಚಿತ್ರಸಹಿತ ಮಾಹಿತಿಯುಳ್ಳ 2019ರ ಕ್ಯಾಲೆಂಡರ್‌ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮೈಸೂರು ನಗರಕ್ಕೆ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗೆ ಮೈಸೂರಿಗೆ ಬರುವ ಪ್ರವಾಸಿಗರು ಇಲ್ಲಿಗೇ ಸೀಮಿತಗೊಳ್ಳದೆ, ಮೈಸೂರನ್ನು ಸರ್ಕ್ನೂಟ್‌ ಆಗಿ ಇಟ್ಟುಕೊಂಡು ಮಂಡ್ಯ, ಕೊಡಗು ಜಿಲ್ಲೆಗಳ ಪ್ರವಾಸಿ ತಾಣಗಳಿಗೂ ಹೋಗಿ ಬರುತ್ತಾರೆ. ಹೀಗಾಗಿ ಕೊಡಗು ಪ್ರವಾಸಿ ಉತ್ಸವ ಆಯೋಜಿಸುತ್ತಿರುವುದರಿಂದ ಮಹಾ ಮಳೆಯಿಂದ ತತ್ತರಿಸಿರುವ ಕೊಡಗಿನ ಹೋಟೆಲ್‌ ಉದ್ಯಮ, ಹೋಂ ಸ್ಟೇಗಳು ಸೇರಿದಂತೆ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಈ ಉತ್ಸವದಿಂದ ಕೊಡಗು ಸುತ್ತಮುತ್ತಲಿನ 100 ಕಿ.ಮೀ. ವ್ಯಾಪ್ತಿಯ ಪ್ರವಾಸಿ ತಾಣಗಳಿಗೂ ಪ್ರವಾಸಿಗರು ಭೇಟಿ ನೀಡುವಂತಾಗುತ್ತದೆ. ಕೊಡಗು ಉತ್ಸವ ನಡೆಸುವ ಬಗ್ಗೆ ತೀರ್ಮಾನವಾಗಿದ್ದು, ಉತ್ಸವದ ಅಂತಿಮ ರೂಪುರೇಷೆ ಇನ್ನಷ್ಟೇ ಸಿದ್ಧಗೊಳ್ಳಬೇಕಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕೊಡಗಿಗೆ ಒಂದು ದಿನದ ಟೂರ್‌ ಪ್ಯಾಕೇಜ್‌ ನಿಯಮಿತವಾಗಿ ನಡೆಯುತ್ತಿದೆ ಎಂದರು.

ಹೋಟೆಲ್‌ ಮಾಲಿಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ಮಾತನಾಡಿ, ಮೈಸೂರು ನಗರಕ್ಕೆ ಭೇಟಿ ನೀಡುವ ಲಕ್ಷಾಂತರ ಪ್ರವಾಸಿಗರು, ನಮ್ಮ ವ್ಯಾಪಾರಿ ಕೇಂದ್ರಗಳಾದ ಹೋಟೆಲ್‌, ಉಪಾಹಾರ ಗೃಹ, ಸ್ವೀಟ್ಸ್‌, ಬೇಕರಿಗಳಿಗೆ ಭೇಟಿ ನೀಡಿದಾಗ ಈ ರೀತಿಯ ಕ್ಯಾಲೆಂಡರ್‌ ನೋಡಿದಾಗ ಪ್ರವಾಸಿ ತಾಣಗಳು ಹೆಚ್ಚಿನ ಪ್ರಚಾರ ಪಡೆಯುತ್ತವೆ ಎಂಬ ಉದ್ದೇಶದಿಂದ ಈ ಕ್ಯಾಲೆಂಡರ್‌ ಮಾಡಿಸಲಾಗಿದ್ದು, ಈ ಕ್ಯಾಲೆಂಡರ್‌ 12 ತಿಂಗಳುಗಳಲ್ಲಿ ವಿವಿಧ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ,

ಬಂದಿ, ಅರಮನೆ ಬಲರಾಮ ದ್ವಾರದಿಂದ ಚಾಮರಾಜ ವೃತ್ತ, ಮೈಸೂರು ಜಿಲ್ಲೆಯ ಪ್ರತಿಷ್ಠಿತ ಜಾತ್ರೆಗಳು, ಹಳ್ಳಿಗಳ ರೈತರ ಸಾಂಸ್ಕೃತಿಕ ಚಿತ್ರಗಳು, ಶ್ರೀರಂಗಪಟ್ಟಣದ ಪ್ರವಾಸಿ ಸ್ಥಳಗಳು, ಬೃಂದಾವನ, ಸೋಮನಾಥಪುರ ದೇವಸ್ಥಾನ, ಗಗನಚುಕ್ಕಿ-ಭರಚುಕ್ಕಿ ಜಲಪಾತ, ಅರಮನೆಯ ಖಾಸಗಿ ದಸರಾ, ಕೊಡಗು ಜಿಲ್ಲೆ, ಬೈಲಕುಪ್ಪೆ ಟಿಬೇಟಿಯನ್‌ ಕ್ಯಾಂಪ್‌, ದುಬಾರೆ ಆನೆ ಶಿಬಿರ ಮತ್ತು ಬೆಳದಿಂಗಳ ರಾತ್ರಿಯ ಮೈಸೂರು ಅರಮನೆ ಚಿತ್ರಗಳನ್ನು ಒಳಗೊಂಡಿದೆ ಎಂದು ವಿವರಿಸಿದರು.

ಹೋಟೆಲ್‌ ಮಾಲಿಕರ ಸಂಘದ ಧರ್ಮದತ್ತಿ ಅಧ್ಯಕ್ಷ ರವಿಶಾಸ್ತ್ರೀ, ಉಪಾಧ್ಯಕ್ಷ ಸುರೇಶ್‌ ಉಗ್ರಯ್ಯ, ಕಾರ್ಯದರ್ಶಿ ಸುಬ್ರಹ್ಮಣ್ಯ ತಂತ್ರಿ, ಜಂಟಿ ಕಾರ್ಯದರ್ಶಿ ಕುಮಾರ್‌, ಖಜಾಂಚಿ ಭಾಸ್ಕರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.