ಶುದ್ಧ ನೀರಿನ ಘಟಕ ಸ್ಥಾಪನೆಯಲ್ಲಿ ಅವ್ಯವಹಾರ


Team Udayavani, Jan 4, 2019, 6:41 AM IST

avyvahara.jpg

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಟೆಂಡರ್‌ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ಸಿ.ಎಸ್‌.ಶಿವಳ್ಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ತಮ್ಮ ನೂತನ ಕಚೇರಿ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಟೆಂಡರ್‌ ಪ್ರಕ್ರಿಯೆಯಲ್ಲಿ ಅವ್ಯವಹಾರವಾಗಿತ್ತು ಎಂಬ ಮಾಹಿತಿ ಇದೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಇದರಲ್ಲಿ ಯಾವುದೇ ಲೋಪವಾದರೂ ಸರಿಪಡಿಸಿ ಜನರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ 58 ನಗರ ಸಭೆ, 113 ಪುರಸಭೆ ಹಾಗೂ 90 ಪಟ್ಟಣ ಪಂಚಾಯತಿಗಳು ಬರುತ್ತವೆ. ಪ್ರತಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಗಳಲ್ಲೂ ಎಲ್ಲರಿಗೂ ಶೌಚಾಲಯ ಸಿಗಬೇಕು. ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತ ಮಾಡುವುದು ನನ್ನ ಗುರಿ. ರಾಜ್ಯದಲ್ಲಿ ಅಮೃತ್‌ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಹಾಗೂ ತಜ್ಞರಿಂದ ಸೂಕ್ತ ಸಲಹೆ ಪಡೆಯಲಾಗುವುದು ಎಂದು ಹೇಳಿದರು.

ಸರ್ಕಾರ ಐದು ವರ್ಷ ಇರುತ್ತದೆ: ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಕಾಂಗ್ರೆಸ್‌ನ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ.  ಈಗ ರಾಜೀನಾಮೆ ಕೊಡಲು ಜನರಿಗೆ ಸೂಕ್ತ ಕಾರಣ ಹೇಳಬೇಕು. ಪಕ್ಷ ತೊರೆಯಲು ಯಾವುದೇ ಕಾರಣ ಇಲ್ಲ. ಪಕ್ಷ ತೊರೆದರೂ ಮತ್ತೆ ಚುನಾವಣೆ ಎದುರಿಸುವುದು ಹುಡುಗಾಟಿಕೆಯಲ್ಲ ಎಂದು ಹೇಳಿದರು.

ಸದ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ನಾವು ಬಯಸಿರುವುದು ಸಿಗುವುದಿಲ್ಲ. ಆದರೂ, ಹೈ ಕಮಾಂಡ್‌ ನಮ್ಮನ್ನು ಗುರುತಿಸಿ ಸ್ಥಾನ ನೀಡಿದೆ. ಸಚಿವ ಸ್ಥಾನ ಸಿಗದವರಿಗೆ ಅಸಮಾಧಾನ ಇರುವುದು ಸಹಜ. ಅದನ್ನು ಪಕ್ಷದ ನಾಯಕರು ಶಮನಗೊಳಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು. 

ಮಹದಾಯಿ ಅಧಿಸೂಚನೆಗೆ ಕೇಂದ್ರಕ್ಕೆ ನಿಯೋಗ: ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಶೀಘ್ರವೇ ಅಧಿಸೂಚನೆ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯದಿಂದ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಿ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು. ಈಗಾಗಲೇ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೀರು ಬಳಕೆ ಮಾಡಿಕೊಳ್ಳುವಂತೆ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರಿಂದ ಹುಬ್ಬಳ್ಳಿ ಧಾರವಾಡ ಸೇರಿದಂತೆ ಅನೇಕ ನಗರಗಳಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಆದರೆ, ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದೆ. ಹೀಗಾಗಿ ಶೀಘ್ರವೇ ಸರ್ವ ಪಕ್ಷ ನಿಯೋಗ ತೆಗೆದುಕೊಂಡು ಹೋಗಲು ನಾವು  ಸಿದ್ಧರಿದ್ದೇವೆ ಎಂದು ಹೇಳಿದರು. 

ಟಾಪ್ ನ್ಯೂಸ್

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.