ಉಕ್ಕಿನ ಸೇತುವೆಯಿಂದ ಹಿಂದೆ ಸರಿಯುವುದಿಲ್ಲ
Team Udayavani, Jan 4, 2019, 6:41 AM IST
ಬೆಂಗಳೂರು: “ನಗರದ ಬಸವೇಶ್ವರ ವೃತ್ತದಿಂದ ಹೆಬ್ಟಾಳದ ಎಸ್ಟೀಮ್ ಮಾಲ್‌ವರೆಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗುತ್ತಿದೆ ಎನ್ನಲಾಗುತ್ತಿದ್ದು, ಅದನ್ನು ಎಲಿವೇಟೆಡ್ ಕಾರಿಡಾರ್ ಯೋಜನೆ ಎಂದು ಕರೆಯಲು ಬಯಸುತ್ತೇನೆ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಸಂಚಾರ ದಟ್ಟಣೆಯ ಸಮಸ್ಯೆ ತೀವ್ರವಾಗಿದೆ. ಇನ್ನು 10 ವರ್ಷಗಳಲ್ಲಿ ನಗರದ ಜನಸಂಖ್ಯೆ ಇನ್ನಷ್ಟು ಹೆಚ್ಚಲಿದ್ದು, ಸಂಚಾರ ದಟ್ಟಣೆ ಸಮಸ್ಯೆ ಮತ್ತಷ್ಟು ಉಲ್ಬಣಿಸಲಿದೆ. ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಉಪನಗರ ರೈಲು, ನಾನಾ ಹಂತದ ಮೆಟ್ರೋ ರೈಲು ಯೋಜನೆ ಹಾಗೂ ಎಲಿವೇಟೆಡ್ ಕಾರಿಡಾರ್ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಬಸವೇಶ್ವರ ವೃತ್ತದಿಂದ ಹೆಬ್ಟಾಳವರೆಗಿನ ಎಲಿವೇಟೆಡ್ ಕಾರಿಡಾರ್ ಕೂಡ ಈ ಯೋಜನೆಯ ಒಂದು ಭಾಗವಾಗಿದೆ. ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ವಾಹನ ಬಳಕೆದಾರರು, ದ್ವಿಚಕ್ರ ವಾಹನ ಸವಾರರು ನಿತ್ಯ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಆದ್ಯತೆ ಮೇರೆಗೆ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಉಕ್ಕಿನ ಸೇತುವೆ ಯೋಜನೆ ಮೂಲಕ ಕಿಕ್‌ಬ್ಯಾಕ್ ಪಡೆಯಲಾಗುತ್ತದೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಈ ರೀತಿಯ ಆರೋಪಗಳಿಗೆ ಮಹತ್ವ ನೀಡುವ ಅಗತ್ಯವಿಲ್ಲ. ಪಾರದರ್ಶಕವಾಗಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಯೋಜನೆಯ ಪ್ರತಿಯೊಂದು ಮಾಹಿತಿಯನ್ನು ಸಾರ್ವಜನಿಕರ ಮುಂದಿಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.