ನಗರದೆಲ್ಲೆಡೆ ತ್ಯಾಜ್ಯಕ್ಕೆ ಬೆಂಕಿ: ಆವರಿಸುತ್ತಿದೆ ಹೊಗೆ


Team Udayavani, Jan 4, 2019, 6:41 AM IST

nagaradallede.jpg

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ದಿಢೀರ್‌ ಎದುರಾಗುವ ದಟ್ಟ ಹೊಗೆ, ಮೂಗಿಗೆ ಬಡಿಯುವ ಕಮಟು ವಾಸನೆ, ಉಸಿರುಗಟ್ಟಿದ ಭಾವನೆ, ಕ್ಷಣಾರ್ಧದಲ್ಲಿ ಶುರುವಾಗುವ ಕಣ್ಣುರಿ… ರಾಜಧಾನಿ ಕೇಂದ್ರ ಭಾಗದ ಸೇರಿದಂತೆ ನಗರದ ಎಲ್ಲ ಕಡೆಗಳಲ್ಲಿ ಒಣ ತ್ಯಾಜ್ಯ ಹಾಗೂ ಎಲೆಗಳಿಗೆ ಬೆಂಕಿ ಹಾಕುತ್ತಿರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ನಗರದ ಪ್ರಮುಖ ರಸ್ತೆಗಳನ್ನು ಸ್ವತ್ಛಗೊಳಿಸುತ್ತಿರುವ ಪೌರಕಾರ್ಮಿಕರು ಸಂಗ್ರಹವಾದ ಒಣ ತ್ಯಾಜ್ಯ ಹಾಗೂ ಎಲೆ ರಾಶಿಗೆ ಬೆಂಕಿ ಹಾಕುತ್ತಿದ್ದಾರೆ. ಇದರೊಂದಿಗೆ ಕೆಲ ಬಡಾವಣೆಗಳಲ್ಲಿ ಸಾರ್ವಜನಿಕರು ಚಳಿ ಹಾಗೂ ಸೊಳ್ಳೆ ಕಾಟದಿಂದ ತ್ಯಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡು ಸಮಸ್ಯೆ ಸೃಷ್ಟಿಯಾಗುತ್ತಿದ್ದು, ದಟ್ಟ ಹೊಗೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. 

ನಗರದಲ್ಲಿ ಚಳಿಯಿಂದ ತಪ್ಪಿಸಿಕೊಳ್ಳಲು ನಿರಾಶ್ರಿತರು ಹಾಗೂ ಬೀದಿ ಬದಿ ವ್ಯಾಪಾರಿಗಳೂ ತ್ಯಾಜ್ಯ ಬೆಂಕಿ ಹಚ್ಚುತ್ತಿರುವುದು ಕಂಡುಬಂದಿದೆ. ಆದರೆ, ಪಾಲಿಕೆಯ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವಿಲ್ಲದಂತೆ ವರ್ತಿಸುತ್ತಿರುವುದು ಟೀಕೆಗೆ ಕಾರಣವಾಗಿದೆ. 

ಎಲೆ ವಿಲೇವಾರಿಗಿಲ್ಲ ಗಮನ: ರಸ್ತೆ ಬದಿಯಲ್ಲಿರುವ ಮರಗಳಿಂದ ಉದುರುತ್ತಿರುವ ಎಲೆಗಳನ್ನು ಸಮರ್ಪಕ ವಿಲೇವಾರಿಗೆ ಪಾಲಿಕೆ ಸಿಬ್ಬಂದಿ ಮುಂದಾಗುತ್ತಿಲ್ಲ. ಪರಿಣಾಮ ಒಣ ಎಲೆಗಳ ಮೇಲೆ ವಾಹನಗಳು ಸಂಚರಿಸಿ ಎಲೆಗಳು ಧೂಳಾಗಿ ಪರಿವರ್ತನೆಯಾಗಿ ನಗರದಲ್ಲಿನ ಮಾಲಿನ್ಯ ಪ್ರಮಾಣ ಹೆಚ್ಚಿಸುತ್ತಿದೆ. 

ಸಮಸ್ಯೆ ಪರಿಹರಿಸಲು ನಿರಾಸಕ್ತಿ: ಜ್ಞಾನಭಾರತಿ ವಾರ್ಡ್‌ನ ಅನ್ನಪೂರ್ಣೇಶ್ವರಿ ನಗರದ ಶ್ರೀಗಂಧ ಕಾವಲ್‌ ರಸ್ತೆಯಲ್ಲಿ ನಿತ್ಯ ಕಸಕ್ಕೆ ಬೆಂಕಿ ಹಾಕಲಾಗುತ್ತಿದೆ. ದಟ್ಟ ಹೊಗೆ ಮನೆಗಳಿಗೆ ಬರುತ್ತಿರುವುದರಿಂದ ಸಮೀಪದ ಬಡಾವಣೆಗಳ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಪಾಲಿಕೆ ಸದಸ್ಯರಿಗೆ ಫೋಟೋ ಸಮೇತವಾಗಿ ದೂರು ನೀಡಿ ಸಮಸ್ಯೆ ಪರಿಹರಿಸುವಂತೆ ತಿಳಿಸಿದರೂ, ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರಿದ್ದಾರೆ. 

ಸಾರ್ವಜನಿಕರು ಅಥವಾ ಪೌರಕಾರ್ಮಿಕರು ತ್ಯಾಜ್ಯಕ್ಕೆ ಬೆಂಕಿ ಹಾಕುವುದು ಕಂಡುಬಂದರೆ, ನಿವಾಸಿಗಳು ಅಧಿಕಾರಿಗಳ ಗಮನಕ್ಕೆ ತಂದರೆ ಕ್ರಮಕೈಗೊಳ್ಳಲಾಗುವುದು. ನಗರದ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರಿಗೆ ದಂಡ ವಿಧಿಸುವಂತೆ, ತ್ಯಾಜ್ಯಕ್ಕೆ ಬೆಂಕಿ ಹಾಕುವವರಿಗೂ ದುಬಾರಿ ದಂಡ ವಿಧಿಸಲಾಗುವುದು. 
-ರಂದೀಪ್‌, ವಿಶೇಷ ಆಯುಕ್ತರು

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.