ಮಹಿಳೆ ಮೂತ್ರಕೋಶದಲ್ಲಿ 6 ಕೆಜಿ ಹರಳು!
Team Udayavani, Jan 4, 2019, 11:54 AM IST
ವಿಜಯಪುರ: ಮೂತ್ರಕೋಶದಲ್ಲಿ 6 ಕೆಜಿ ಬೃಹತ್ ಗಾತ್ರದ ಹರಳು ಇರುವುದನ್ನು ಪತ್ತೆ ಮಾಡಿದ ಬಿಎಲ್ಡಿಇ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕತ್ಸೆ ಮೂಲಕ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸಿಂದಗಿ ತಾಲೂಕಿನ 40 ವರ್ಷದ ಮಹಿಳೆ 3 ತಿಂಗಳಿಂದ ಮೂತ್ರ ವಿಸರ್ಜನೆ ತೊಂದರೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಬಿಎಲ್ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೈದ್ಯರು ಮಹಿಳೆಯ ಮೂತ್ರಚೀಲದಲ್ಲಿ ಬೃಹತ್ ಗಾತ್ರದ ಹರಳು ಇರುವುದನ್ನು ಖಚಿತಪಡಿಸಿಕೊಂಡರು. ಬಳಿಕ ನಿರಂತರ 3 ಗಂಟೆಗಳ ಪರಿಶ್ರಮದ ಬಳಿಕ ಮಹಿಳೆಯ ಮೂತ್ರ ಚೀಲದಲ್ಲಿ ಇರುವ 580 ಗ್ರಾಂ ಬೃಹತ್ ಗಾತ್ರದ ಹರಳನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಧೀಕ್ಷಕ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ ವಿವರಿಸಿದ್ದಾರೆ.
ಮೂತ್ರ ಜನಕಾಂಗ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ.ವಿನಯ ಕುಂದರಗಿ ನೇತೃತ್ವದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ.ಸಂತೋಷ ಪಾಟೀಲ, ಅರವಳಿಕೆ ತಜ್ಞ ಡಾ.ವಿಜಯ ಕಟ್ಟಿ, ಡಾ. ಶ್ರೀದೇವಿ ಮೂಲಿಮನಿ ಹಾಗೂ ಸಿಬ್ಬಂದಿ ಸತತ ಮೂರು ಗಂಟೆಗಳ ಶಸ್ತ್ರಚಿಕಿತ್ಸೆ ನೆರವೇರಿಸಿ 580 ಗ್ರಾಂ. ಹರಳನ್ನು ಹೊರತೆಗೆಯಲು ಯಶಸ್ವಿಯಾಗಿದ್ದಾರೆ. ಮಹಿಳೆಗೆ ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ. ವೈದ್ಯರ ಸಾಧನೆಗೆ ಬಿಎಲ್ಡಿಇ ಅಧ್ಯಕ್ಷ, ಗೃಹ ಸಚಿವ ಡಾ.ಎಂ.ಬಿ.ಪಾಟೀಲ, ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ.ಎಸ್.ಬಿರಾದಾರ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.