ಕೊಂಕಣಿ ಅಭಿಯಾನ: ಆರ್.ಪಿ. ನಾಯಕ್
Team Udayavani, Jan 5, 2019, 12:30 AM IST
ಮಂಗಳೂರು: ಕೊಂಕಣಿ ಭಾಷೆ ಕಲಿಕೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳು, ಯುವಜನತೆ ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ “ಹಳ್ಳಿಯಿಂದ ದಿಲ್ಲಿಗೆ, ದಿಲ್ಲಿಯಿಂದ ದುಬಾೖಗೆ ಕೊಂಕಣಿ ಅಭಿಯಾನ’ ನಡೆಸಲು ಉದ್ದೇಶಿಸಲಾಗಿದೆ ಎಂದು ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್.ಪಿ. ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಉ.ಕ. ಜಿಲ್ಲೆಯ ಆಯ್ದ ಹಳ್ಳಿಗಳಲ್ಲಿ ಕೊಂಕಣಿ ಭಾಷಾ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಮಾರೋಪವನ್ನು ದುಬಾೖಯಲ್ಲಿ ನಡೆಸಲಾಗುವುದು ಎಂದರು. ಕೊಂಕಣಿ ಸಂಗೀತ, ರಂಗಭೂಮಿಯ ಬಗ್ಗೆ ಸರ್ಟಿಫಿಕೆಟ್ ಕೋರ್ಸು ಶಾಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂರು ವಿ.ವಿ.ಯಲ್ಲಿ ಕೊಂಕಣಿ ಭಾಷೆ ಎಂ.ಎ. ತರಗತಿ ನಡೆಯುತ್ತಿದೆ. ಎಸೆಸೆಲ್ಸಿ ಪರೀಕ್ಷೆಯಲ್ಲಿ 300 ವಿದ್ಯಾರ್ಥಿಗಳು ಭಾಗವಹಿಸದೇ ಇದ್ದರೆ ಪಿಯುಸಿಯಲ್ಲಿ ಕೊಂಕಣಿ ಆರಂಭ ಸಾಧ್ಯ ವಾಗದು ಆದ್ದರಿಂದ ಹೆಚ್ಚೆಚ್ಚು ವಿದ್ಯಾರ್ಥಿಗಳು ಕೊಂಕಣಿ ಯನ್ನು ತೃತೀಯ ಭಾಷೆಯನ್ನಾಗಿ ಪ್ರೌಢಶಾಲೆಯಲ್ಲಿ ಕಲಿಯಬೇಕು ಎಂದು ಅವರು ಹೇಳಿದರು.
100 ಪುಸ್ತಕ ಪ್ರಕಟನೆ
ಕೊಂಕಣಿಯ ಸಾಮಾಜಿಕ ವಿಚಾರಗಳನ್ನು ತಿಳಿಸುವ 100 ಪುಸ್ತಕಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ. ಈಗಾಗಲೇ 70 ಕೃತಿಗಳು ಸಿದ್ಧವಾಗಿವೆ. ಇನ್ನೂ 30 ಕೃತಿಗಳ ರಚನೆಯಾಗುತ್ತಿದ್ದು ಸದ್ಯವೇ ಇವುಗಳನ್ನು ಪ್ರಕಟಿಸಲಾಗುವುದು. ಆಕಾಶವಾಣಿಯಲ್ಲಿಯೂ ಕಾರ್ಯಕ್ರಮ ಪ್ರಸಾರಕ್ಕೆ ಪ್ರಯತ್ನ ಸಾಗಿದೆ ಎಂದರು.
ಅಕಾಡೆಮಿ ಸದಸ್ಯರಾದ ನಾಗೇಶ್ ಅಣೆಕರ್, ದಾಮೋದರ್ ಬಂಡಾರ್‌ಕರ್, ಸಂತೋಷ್ ಶೆಣೈ ಪತ್ರಿಕಾ ಗೋಷ್ಠಿಯಲ್ಲಿದ್ದರು.
ಕೊಂಕಣಿ ಭವನಕ್ಕೆ ದಾನಿಗಳ ನಿರೀಕ್ಷೆ!
ಕೊಂಕಣಿ ಭವನಕ್ಕೆ ಮಂಗಳೂರು ನಗರದಲ್ಲಿ ಗುರುತಿ ಸಲಾದ ಜಾಗವನ್ನು ಅಕಾಡೆಮಿಗೆ ನೀಡಲು ಸರಕಾರ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ದಾನಿಗಳು ಜಾಗ ನೀಡಿದಲ್ಲಿ ಭವನ ನಿರ್ಮಿಸಲಾಗುವುದು. ಧಾರವಾಡ ವಿ.ವಿ.ಯೂ ಕೊಂಕಣಿ ಭವನ ನಿರ್ಮಿಸಲು ಉತ್ಸಾಹ ತೋರಿಸಿದೆ. ಉತ್ತರ ಕನ್ನಡದಲ್ಲಿಯೂ ಭವನಕ್ಕಾಗಿ ಜಾಗ ನೀಡಲು ದಾನಿಗಳು ಮುಂದೆ ಬಂದಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಅಕಾಡೆಮಿ ಅಧ್ಯಕ್ಷ ಆರ್.ಪಿ. ನಾಯಕ್ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.